ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಚಮಸಾಲಿ 2ಎ ಮೀಸಲಾತಿ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವ ನಿರಾಣಿ ಅಸಮಾಧಾನ

|
Google Oneindia Kannada News

ಬೆಂಗಳೂರು,ಸೆ.22- ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಡ್ಡಿಯಾಗಿದ್ದಾರೆ ಎಂಬ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆಯನ್ನು ಸಚಿವ ಮುರುಗೇಶ್ ನಿರಾಣಿ ಅಲ್ಲಗಳೆದಿದ್ದಾರೆ.

ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ. ಈ ಬಗ್ಗೆ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಪಂಚಮಸಾಲಿ ಸಮುದಾಯದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಗಳು ಯಡಿಯೂರಪ್ಪನವರು ತಮ್ಮ ಸಮುದಾಯಕ್ಕೆ ಮೀಸಲಾತಿ ಕೊಡಲು ಅಡ್ಡಿಯಾಗಿದ್ದಾರೆ. ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿದ್ದಾರೆ ಹೀಗಾಗಿ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಎಂದು ಕರೆ ಕೊಟ್ಟಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

BS yediyurappa did not interfere with Panchmasali 2A reservation: Minister Murugesh Nirani clarified

ಈ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ನಿರಾಣಿ ಅವರು, "ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಲು ನಮ್ಮ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆಯೇ ಹೊರುತು, ಅಡ್ಡಿಪಡಿಸುವ ಕೆಲಸವನ್ನು ಎಂದೂ ಮಾಡಿಲ್ಲ," ಎಂದು ಅವರು ಪುನರುಚ್ಚರಿಸಿದರು.

"ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯವನ್ನು ಅಭಿವೃದ್ಧಿಪಡಿಸುವ ಏಕೈಕ ಸದ್ದುದ್ದೇಶದಿಂದ ಪ್ರಾಧಿಕಾರ ರಚಿಸಿ 500 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದರು. ಅದೇ ರೀತಿ 2ಎ ಮೀಸಲಾತಿ ಕೊಡುವ ಸಂಬಂಧ ಸಚಿವ ಸಂಪುಟ ಉಪಸಮಿತಿಯನ್ನು ಮಾಡಿದ್ದು ಸಹ ಯಡಿಯೂರಪ್ಪನವರು. ಅವರ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಬಾರದು," ಎಂದು ನಿರಾಣಿ ತಿರುಗೇಟು ನೀಡಿದರು.

ಸಿಎಂ ಭರವಸೆ:

"ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಮೀಸಲು ಕಲ್ಪಿಸುವ ಸಂಬಂಧ ಅಧ್ಯಯನ ನಡೆಸುತ್ತಿರುವ ಆಯೋಗ ವರದಿ ನೀಡಿದ ನಂತರ ಸರ್ಕಾರ ಸೂಕ್ತ ಕ್ರಮ ವಹಿಸಲಿದೆ," ಎಂದರು.

"ಮೀಸಲು ಸಂಬಂಧ ನಮ್ಮ ಸರ್ಕಾರ ಈಗಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶಿಫಾರಸು ಮಾಡಿದೆ. ಆಯೋಗವು ಕುಲಶಾಸ್ತ್ರ ಅಧ್ಯಯನ ನಡೆಸುತ್ತಿದೆ. ಇನ್ನು ಕೆಲವು ಜಿಲ್ಲೆಗಳಿಗೆ ಭೇಟಿ ಕೊಡಬೇಕಾಗಿದೆ. ಇವೆಲ್ಲದಕ್ಕೂ ಸಮಯ ಅವಕಾಶ ಬೇಕಾಗುತ್ತದೆ. ಅನಿವಾರ್ಯ ಕಾರಣಗಳಿಂದ ವಿಳಂಬವಾದಾಗ ಕಾರಣಕ್ಕೆ ಟೀಕೆ ಮಾಡುವುದು ಸರಿಯಲ್ಲ,"ಎಂದು ನಿರಾಣಿ ವಿವರಿಸಿದರು.

ಕಾಂಗ್ರೆಸ್‌ ವಿರುದ್ಧ ಕಿಡಿ:

"ನಮ್ಮ ಸಿಎಂ ಎಂದರೆ ಕಾಮನ್‌ ಮ್ಯಾನ್‌ ಎನ್ನುವ ಮಟ್ಟಿಗೆ ಸರಳ ವ್ಯಕ್ತಿತ್ವ ಅವರದ್ದು. ಇಡೀ ಕರ್ನಾಟಕದ ಜನತೆಯ ನೆಚ್ಚಿನ ನಾಯಕರು ಅವರು. ಆದರೆ, ಕಾಂಗ್ರೆಸ್ ಪಕ್ಷದವರು ನಮ್ಮ ಮುಖ್ಯಮಂತ್ರಿ ವಿರುದ್ಧ ಸುಳ್ಳುಆರೋಪ ಮಾಡಿದ್ದಾರೆ. ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಕಾಂಗ್ರೆಸ್‌ ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ," ಎಂದರು.

"ಬೊಮ್ಮಾಯಿ ಅವರ ವಿರುದ್ಧ ಮಾಡಿರುವ ಆರೋಪ ನಿರಾಧಾರ. ಪ್ರತಿಪಕ್ಷದವರು ಅವರ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣದ ಬಗ್ಗೆ ಗಮನ ಹರಿಸಲಿ, ಬೇರೆಯವರ ತಟ್ಟೆ ನೋಡುವ ಅಗತ್ಯವಿಲ್ಲ," ಎಂದು ಕಿಡಿಕಾರಿದರು.

English summary
Former Chief Minister BS Yeddyurappa did not stand in the way of inclusion of Panchmasali community in 2A. Minister Nirani has clarified that the allegations heard in this regard are far from the truth.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X