ಆಸ್ಪತ್ರೆಯಿಂದ ಬಿ. ಎಸ್. ಯಡಿಯೂರಪ್ಪ ಡಿಸ್ಚಾರ್ಜ್
ಬೆಂಗಳೂರು, ಆಗಸ್ಟ್ 10 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ ಸೋಂಕು ತಗುಲಿದ ಬಳಿಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
Recommended Video
ಸೋಮವಾರ ಸಂಜೆ 4 ಗಂಟೆಗೆ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿಗಳು ಹೂಗುಚ್ಛವನ್ನು ನೀಡುವ ಮೂಲಕ ಯಡಿಯೂರಪ್ಪ ಅವರನ್ನು ಬೀಳ್ಕೊಟ್ಟರು.
ಆಗಸ್ಟ್ 2ರ ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಬಳಿಕ ಅವರನ್ನು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 9 ದಿನದಿಂದ ಅವರು ಆಸ್ಪತ್ರೆಯಲ್ಲಿದ್ದರು.
ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡುತ್ತಿದ್ದರು. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕ್ಷಣ-ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದರು.

ಪರೀಕ್ಷಾ ವರದಿ ನಗೆಟಿವ್
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ವರದಿ ನಗೆಟೀವ್ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಯಿತು. ಸೋಮವಾರ ಸಂಜೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

9 ದಿನಗಳ ಕಾಲ ಚಿಕಿತ್ಸೆ
ಬಿ. ಎಸ್. ಯಡಿಯೂರಪ್ಪ ಅವರು 9 ದಿನಗಳ ಕಾಲ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಯಡಿಯೂರಪ್ಪಗೆ ಕೋವಿಡ್ ಸೋಂಕು ತಗುಲಿದ್ದರೂ ಸೋಂಕಿನ ಯಾವುದೇ ಲಕ್ಷಣಗಳು ಇರಲಿಲ್ಲ.

ಬೆಳಗ್ಗೆ ವೈದ್ಯರ ಸಭೆ
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ ವೈದ್ಯರು ಸೋಮವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಸಭೆ ನಡೆಸಿದ್ದರು. ಸಂಜೆ ಅವರನ್ನು ಡಿಸ್ಚಾರ್ಜ್ ಮಾಡುವ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ವೈದ್ಯರಿಗೆ ಅಭಿನಂದನೆ ಸಲ್ಲಿಕೆ
ಆಸ್ಪತ್ರೆಯಿಂದ ಹೊರ ಬಂದ ಯಡಿಯೂರಪ್ಪ ಕೈ ಮುಗಿದು ಎಲ್ಲಾ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ವೈದ್ಯರು ಹೂ ಗುಚ್ಛ ನೀಡುವ ಮೂಲಕ ಅವರನ್ನು ಬೀಳ್ಕೊಟ್ಟರು.












Click it and Unblock the Notifications