BS Yediyurappa: ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ರಿಲೀಫ್- ಸಮನ್ಸ್​ಗೆ ಹೈಕೋರ್ಟ್ ತಡೆ

ಬೆಂಗಳೂರು ಮಾರ್ಚ್ 14: ಫೋಕ್ಸೋ ಪ್ರಕರಣದ ವಿಚಾರವಾಗಿ ನಾಳೆ ಶನಿವಾರ (ಮಾರ್ಚ್ 15) 1ನೇ ತ್ವರಿತಗತಿ ನ್ಯಾಯಾಲಯ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ ಜಾರಿ ಮಾಡಿತ್ತು. ಆದರೀಗ ಈ ಸಮನ್ಸ್‌ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದಾಗಿ ಯಡಿಯೂರಪ್ಪ ಅವರಿಗೆ ಬಿಗ್‌ ರಿಲೀಫ್ ಸಿಕ್ಕಂತಾಗಿದೆ.

2024ರ ಫೆ‌ಬ್ರವರಿ 2ರಂದು ಸಹಾಯ ಬೇಡಿ ಮನೆಗೆ ತೆರಳಿದ್ದ 17 ವರ್ಷದ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಮಹಿಳೆ ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದರ ಅನ್ವಯ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಇಂದು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೊರೂರ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ.

Bs yediyurappa gets high court stay on pocso case summons

ಈ ವೇಳೆ ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ವಾದ ಮಂಡಿಸುವ ವೇಳೆ ಆರೋಪಿಗಳ ಪರ ವಕೀಲ ಸಿವಿ ನಾಗೇಶ್, ಮಹಿಳೆ ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ. ಅಲ್ಲದೆ ಬಾಲಕಿ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿಯನ್ನು ದಾಖಲಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು. ವಾದಗಳನ್ನು ಆಲಿಸಿದ ಬಳಿಕ ಕೋರ್ಟ್ ಯಡಿಯೂರಪ್ಪ ಖುದ್ದು ಹಾಜರಾಗುವುದಕ್ಕೆ ತಡೆ ಹಿಡಿದಿದೆ.

ಅಲ್ಲದೆ ಯಡಿಯೂರಪ್ಪ ಕೂಡ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್‌ನಲ್ಲಿ ಹೋರಾಟ ಮುಮದುವರಿಸಿದ್ದಾರೆ. ಪ್ರಕರಣ ಸಂಬಂಧ ತಮ್ಮ ವಿರುದ್ಧದ ದೂರು, ಎಫ್‌ಐಆರ್‌, ಸಿಐಡಿ ಪೊಲೀಸರು ದಾಖಲಿಸಿರುವ ಆರೋಪ ಪಟ್ಟಿ ಮತ್ತು 2025ರ ಫೆ.28ರಂದು ಪೋಕ್ಸೊ ವಿಶೇಷ ನ್ಯಾಯಾಲಯ ಸಂಜ್ಞೆ ಪರಿಗಣಿಸಿ (ಕಾಗ್ನಿಜೆನ್ಸ್‌) ಜಾರಿಗೊಳಿಸಿರುವ ಸಮನ್ಸ್‌ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+