• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking: ರಾಜೀನಾಮೆ ಕುರಿತು ಮಹತ್ವದ ಹೇಳಿಕೆ ನೀಡಿದ ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜುಲೈ 22: ರಾಜೀನಾಮೆ ನೀಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುಳಿವು ನೀಡಿದ್ದಾರೆ.

ಹೈಕಮಾಂಡ್‌ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ, ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ನಡ್ಡಾ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ, ರಾಜ್ಯದಲ್ಲಿ ಪಕ್ಷವನ್ನು ಬೆಳೆಸುವುದು ಮತ್ತು ಅಧಿಕಾರಕ್ಕೆ ತರುವುದು ನನ್ನ ಉದ್ದೇಶ.

ಪಕ್ಷದ ಆಂತರಿಕ ನಿಯಮ ಪ್ರಕಾರ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ನೀಡುವುದಿಲ್ಲ ಆದರೆ ನನ್ನ ಮೇಲೆ ನಂಬಿಕೆ ಹಾಗೂ ಪ್ರೀತಿ ಇಟ್ಟು 78 ವರ್ಷದವರಿಗೂ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ, ಜುಲೈ 25ರಂದು ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಜುಲೈ 26ರಿಂದ ನನ್ನ ಕೆಲಸವನ್ನು ನಾನು ಮಾಡುತ್ತೇನೆ ಎಂದರು.

ನನ್ನ ಪರ ಯಾರೂ ಪ್ರತಿಭಟನೆ ಮಾಡಬೇಡಿ, ಜುಲೈ 26ರಂದು ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತದೆ, ಅಂದು ಎರಡು ವರ್ಷ ಸಾಧನೆಯ ವಿಶೇಷ ಕಾರ್ಯಕ್ರಮವಿದೆ.

ಮುಂದೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ, ಮಠಾಧೀಶರಯ ನನಗೆ ಬೆಂಬಲ ಕೊಟ್ಟು ಆಶೀರ್ವಧಿಸಿದ್ದಾರೆ ಅವರಿಗೆ ನಾಣು ಋಣಿ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧವಾಗಿರುತ್ತೇನೆ ಎಂದರು.

English summary
BS Yediyurappa gives hint of resignation for CM Post; He says i have to follow the high command order, request people not to protest supporting me. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X