ಕರ್ನಾಟಕದ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ, ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು, ಅಕ್ಟೋಬರ್ 18: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ನಿರೀಕ್ಷೆಯಂತೆ ದೀಪಾವಳಿ ಹಬ್ಬಕ್ಕೂ ಮುನ್ನ ಉಡುಗೊರೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಘೋಷಿಸಿದೆ. ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡಿ ಶುಕ್ರವಾರದಂದು ಅಧಿಕೃತ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ನೌಕರರಿಗೆ ಶೇ.4.75 ತುಟ್ಟಿಭತ್ಯೆ ನೀಡಲು ತೀರ್ಮಾನಿಸಲಾಗಿದೆ. ಅಖಿಲ ಭಾರತ ಬೆಲೆ ಸೂಚ್ಯಂಕ(price index) ಆಧರಿಸಿ ಕೇಂದ್ರ ಸರ್ಕಾರ ನೌಕರರಿಗೆ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರವು ಶೇ.5 ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ತಂಡ ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತುಟ್ಟಿಭತ್ಯೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿದ್ದ ಮನವಿ ಪತ್ರ ಸಲ್ಲಿಸಿದ್ದರು.

4.75% ರಂತೆ ಡಿಎ ಹೆಚ್ಚಳವಾಗುವುದರಿಂದ ಯಾರು ಯಾರಿಗೆ ಎಷ್ಟೆಷ್ಟು ಹೆಚ್ಚಳವಾಗಲಿದೆ ಎಂಬ ವಿವರ ಮುಂದೆ ಓದಿ...

ತುಟ್ಟಿಭತ್ಯೆ ಹೆಚ್ಚಳದ ಲಾಭ ಯಾರಿಗೆ

ತುಟ್ಟಿಭತ್ಯೆ ಹೆಚ್ಚಳದ ಲಾಭ ಯಾರಿಗೆ

ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.

ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯ

ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯ

ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

ಯಾರು ಯಾರಿಗೆ ಎಷ್ಟು ಎಷ್ಟು ವೇತನ ಏರಿಕೆ

ಯಾರು ಯಾರಿಗೆ ಎಷ್ಟು ಎಷ್ಟು ವೇತನ ಏರಿಕೆ

ಸರ್ಕಾರಿ ನೌಕರರಿಗೆ ಶೇ.4.75 ತುಟ್ಟಿಭತ್ಯೆ ನೀಡಲು ತೀರ್ಮಾನಿಸಲಾಗಿದೆ. 4.75% ತುಟ್ಟಿಭತ್ಯೆ ಹೆಚ್ಚಳವಾಗುತ್ತಿದ್ದಂತೆ ಯಾರು ಯಾರಿಗೆ ಎಷ್ಟು ಎಷ್ಟು ವೇತನ ಏರಿಕೆಯಾಗಲಿದೆ? ಎಂಬ ವಿವರ ಈ ಕೋಷ್ಟಕದಲ್ಲಿ ಲಭ್ಯ. ತುಟ್ಟಿಭತ್ಯೆ ಹೆಚ್ಚಳದ ನಂತರ ಪ್ರತಿ ನೌಕರರಿಗೆ ಸರಾಸರಿ 1200 ರೂ.ನಿಂದ 4 ಸಾವಿರ ರೂ. ವರೆಗೆ ಮಾಸಿಕ ವೇತನ ಹೆಚ್ಚಳವಾಗಲಿದೆ.

ತುಟ್ಟಿ ಭತ್ಯೆ(dearness allowance)

ತುಟ್ಟಿ ಭತ್ಯೆ(dearness allowance)

ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ.

ಸರ್ಕಾರಿ ನೌಕರರ ಬೇಡಿಕೆ ಏನಿತ್ತು?

ಸರ್ಕಾರಿ ನೌಕರರ ಬೇಡಿಕೆ ಏನಿತ್ತು?

ಬೇಡಿಕೆ ಏನಿತ್ತು?: ಕೇಂದ್ರ ಸರ್ಕಾರಿ ನೌಕರರಿಗೆ ನೀಡಿದಂತೆ ಮೂಲ ವೇತನದ 5ರಷ್ಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಹಿಂದೆ 4.25ರಷ್ಟು ಹೆಚ್ಚಳಕ್ಕೆ ಮನವಿ ಬಂದಿತ್ತು. ಆದರೆ, ಈ ಹಿಂದಿನ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವು ಜನವರಿ 01, 2018ರಿಂದ ಪೂರ್ವಾನ್ವಯವಾಗುವಂತೆ ಶೇ 1.75ರಷ್ಟು ಹೆಚ್ಚಳ ಮಾಡಲಾಗಿತ್ತು. ನಂತರ ಶೇ 2ರಷ್ಟು ಹೆಚ್ಚಳವಾಗಿತ್ತು. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರವು ಕಳೆದ ದೀಪಾವಳಿ ಹಬ್ಬದ ವೇಳೆಗೆ ಶೇ2ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಿಸಿತ್ತು. ಒಟ್ಟಾರೆ, ತುಟ್ಟಿಭತ್ಯೆ ಹೆಚ್ಚಳದಿಂದ ಈ ಕೊಡುಗೆಯಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+