ಕುಸಿದು ಬಿದ್ದ ಯತ್ನಾಳ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ!

ಬೆಂಗಳೂರು, ಜುಲೈ 19: ವಿಧಾನಸೌಧದಲ್ಲಿ ಪ್ರತಿಭಟನೆಯ ವೇಳೆ ಅಸ್ವಸ್ಥಗೊಂಡ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಆಸ್ಪತ್ರೆ ದಾಖಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಆರೋಗ್ಯ ವಿಚಾರಿಸಿದರು.

ವಿಧಾನಸಭೆ ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಹಿನ್ನಲೆ ಸ್ವೀಕರ್‌ ಯು ಟಿ ಖಾದರ್‌ ಬಿಜೆಪಿಯ 10 ಮಂದಿ ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದ್ದು, ಈ ವೇಳೆ ಸ್ವೀಕರ್‌ ಆದೇಶದ ಮೇರೆಗೆ ಮಾರ್ಷನ್‌ ಗಳು ಬಿಜೆಪಿ ಶಾಸಕರನ್ನ ಹೊರ ಹಾಕುವ ವೇಳೆ ಬಿಜೆಪಿ ಶಾಸಕರಿಗೂ ಮಾರ್ಷನ್‌ ಗಳಿಗೂ ಜಟಾಪಟಿ ಏರ್ಪಟ್ಟಿದ್ದು, ಈ ವೇಳೆ ಅಸ್ವಸ್ಥರಾಗಿ ಕುಸಿದುಬಿದ್ದ ಯತ್ನಾಳ್‌ ಅವರನ್ನ ವಿಧಾನಸೌಧದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Basanagowda Patil Yatnal

ಇನ್ನೂ ಯತ್ನಾಳ್‌ ಅವರಿಗೆ ಚಿಕಿತ್ಸೆ ನೀಡಿದ ಬಳಿಕ, ಆಸ್ಪತ್ರೆ ಭೇಟಿ ಕೊಟ್ಟ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಆರೋಗ್ಯ ವಿಚಾರಿಸಿ, ಆರೋಗ್ಯದ ಕಡೆ ಗಮನಕೊಡುವಂತೆ ಸಲಹೆ ನೀಡಿದ್ದಾರೆ. ಇನ್ನೂ ಆಸ್ಪತ್ರೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸ್ವೀಕರ್‌ ಯು ಟಿ ಖಾದರ್‌ ಸೇರಿದಂತೆ ಹಲವು ನಾಯಕರು ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಆರೋಗ್ಯ ವಿಚಾರಿಸಿದ್ದಾರೆ.

Basanagowda Patil Yatnal

ಆರೋಗ್ಯ ಸ್ಥಿರವಾಗಿದೆ: ಯತ್ನಾಳ್‌

ಇನ್ನೂ ಆಸ್ಪತ್ರೆಗೆ ದಾಖಲಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸ್ಥಿರವಾಗಿದೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ತಿಳಿಸಿದ್ದು, ನಾನು ಸಂಪೂರ್ಣ ಗುಣಮುಖನಾಗಿದ್ದೆನೆ ಯಾರೂ ಭಯಪಡುವ ಅವಶ್ಯಕತೆಯಿಲ್ಲ. ಜೈ ಶ್ರೀರಾಮ ಎಂದು ಬರೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+