ಸರ್ಕಾರ ಬರ ಪರಿಹಾರ ಪ್ರಕಟಿಸದಿದ್ದರೆ, ರಾಜ್ಯಾದ್ಯಂತ ಹೋರಾಟ; ಸಿಎಂಗೆ ರಾಜಾಹುಲಿ ಎಚ್ಚರಿಕೆ

ಬೆಂಗಳೂರು, ಡಿಸೆಂಬರ್‌ 14: ರಾಜ್ಯ ಸರಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ ಮಾಡುವೆ. ರೈತರ ಪರವಾಗಿ ನಿಲ್ಲುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.

ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ 6 ಸಾವಿರ ಕೊಟ್ಟರೆ ನಾನು 4 ಸಾವಿರ ಕೊಡುತ್ತಿದ್ದೆ. ಅದನ್ನು ನಿಲ್ಲಿಸಿ ದ್ರೋಹ ಬಗೆದಿದ್ದೀರಲ್ಲವೇ? ನಿಮಗೆ ಅಧಿಕಾರಕ್ಕೆ ಮುಂದುವರೆಯಲು ನೈತಿಕ ಹಕ್ಕಿಲ್ಲ. ರೈತರ ಜೀವನದ ಜೊತೆ ಚೆಲ್ಲಾಟ ಸಲ್ಲದು ಎಂದು ಎಚ್ಚರಿಸಿದರು.

BS ‌Yediyurappa Lashed Out At Siddaramaiah Saying Corruption Has Increased In The State

ಹಣ, ಹೆಂಡ, ತೋಳಬಲದಿಂದ ಅಧಿಕಾರಕ್ಕೆ ಬರುವ ಭ್ರಮೆಯಿಂದ ಇದ್ದ ಕಾಂಗ್ರೆಸ್‍ಗೆ ಪಂಚರಾಜ್ಯ ಚುನಾವಣೆಯ ಫಲಿತಾಂಶ ಸಮರ್ಪಕ ಉತ್ತರ ನೀಡಿದೆ. ನರೇಂದ್ರ ಮೋದಿಯವರಂಥ ನಾಯಕ ಕಾಂಗ್ರೆಸ್‍ನಲ್ಲಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಲೂಟಿ, ಹಗಲುದರೋಡೆ ಮುಂದುವರೆದಿದೆ ಎಂದ ಅವರು, ತಮ್ಮ ಕಾಲದಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಜಾರಿ ಮಾಡಿದ್ದನ್ನು ನೆನಪಿಸಿದರು.

ಎಲ್ಲ ಅಭಿವೃದ್ಧಿ ಕಾಮಗಾರಿ ಸ್ಥಗಿತವಾಗಿದೆ ಎಂದ ಅವರು, ರೈತರ ಸಾಲ ಮನ್ನಾ ತೀರ್ಮಾನ ಮಾಡಿ ಎಂದು ಆಗ್ರಹಿಸಿದರು. ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಣಕೊಡುತ್ತಾರೆ. ರೈತರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು. ರೈತವಿರೋಧಿ, ಜನ ವಿರೋಧಿ ಸರಕಾರದ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದು ಯಡಿಯೂರಪ್ಪ ಅವರು ಹೇಳಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ಸರಕಾರ ಬಂದು 6 ತಿಂಗಳು ಕಳೆದಿದೆ. ಭೀಕರ ಬರಗಾಲ ಇದ್ದರೂ ಕಾಂಗ್ರೆಸ್ ಸರಕಾರವು ಜನರ ನಿರೀಕ್ಷೆ ಹುಸಿಯಾಗಿದೆ. 14 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

BS ‌Yediyurappa Lashed Out At Siddaramaiah Saying Corruption Has Increased In The State

ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಪ್ರಕಟಿಸಿದ ಸಿಎಂ ಅವರು, ರೈತರ ಬಗ್ಗೆ ಮಾತನಾಡಿಲ್ಲ. ಕಬ್ಬು ಬೆಳೆಯುವ ರೈತರಿಗೆ ಸೇರಿ ಎಲ್ಲ ರೈತರಿಗೆ ಪರಿಹಾರ ಕೊಡಬೇಕಿದೆ. ಆದರೆ, ಸರಕಾರ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದೆ ಎಂದು ಆಕ್ಷೇಪಿಸಿದರು. ಯಡಿಯೂರಪ್ಪ ಅವರು ಸುವರ್ಣ ಸೌಧ ನಿರ್ಮಿಸಿದ್ದರು. ಇಲ್ಲಿನ ಸಮಸ್ಯೆಗಳ ಪರಿಹಾರದ ನಿರೀಕ್ಷೆ ಅವರದಾಗಿತ್ತು. ಆದರೆ, ಸಿದ್ದರಾಮಯ್ಯನವರು ರೈತರನ್ನು ಕಡೆಗಣಿಸಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್ಸಿಗರು ಕೇಂದ್ರ ಸರಕಾರವನ್ನು ದೂಷಿಸುತ್ತಿದ್ದಾರೆ. ರೈತರ ಸಾಲಮನ್ನಾ ಮಾಡಬೇಕು. ಹೊಸ ಸಾಲವನ್ನು ಕೊಡಬೇಕು ಎಂದು ಆಗ್ರಹಿಸಿದ ಅವರು, ಸಾಲ ವಸೂಲಿಯನ್ನು ನಿಲ್ಲಿಸಿ ಎಂದು ಆಗ್ರಹಿಸಿದರು. ಈ ಸರಕಾರಕ್ಕೆ ಚಾಟಿ ಬೀಸುವ ಕೆಲಸ ಮುಂದುವರೆಯಲಿದೆ ಎಂದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನೂ ಬಿಜೆಪಿ- ಜೆಡಿಎಸ್ ಸೇರಿ ಗೆಲ್ಲಬೇಕಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+