ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಹೆಸರು ಶಿಫಾರಸು ಮಾಡಿದ ಯಡಿಯೂರಪ್ಪ?

ಬೆಂಗಳೂರು, ಜುಲೈ 4: ವಿಧಾನಸಭೆ ಚುನಾವಣೆ ಮುಗಿದು ನೂತನ ಸರ್ಕಾರ ಆರಂಭವಾಗಿ ಅಧಿವೇಶನ ಶುರುವಾದರೂ ಬಿಜೆಪಿ ಅಧ್ಯಕ್ಷರ ನೇಮಕ ಮಾತ್ರ ಇನ್ನೂ ಬಾಕಿಯಾಗಿ ಉಳಿದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಕೂಡ ಅಧ್ಯಕ್ಷ ಆಯ್ಕೆ ಬಗ್ಗೆ ತಲೆಕೆಡಿಸಿಕೊಂಡಿದ್ದು, ಈ ಸ್ಥಾನಕ್ಕೆ ಮಹಿಳೆಯೊಬ್ಬರು ಆಯ್ಕೆಯಾಗುವ ಸಾಧ್ಯತೆ ಇದೆ.

ಹಾಲಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಅಧಿಕಾರವಧಿ ಮುಗಿದಿದ್ದು ತುರ್ತಾಗಿ ನೂತನ ಅಧ್ಯಕ್ಷ ನೇಮಕವಾಗಬೇಕಿದೆ. ನೂತನ ಅಧ್ಯಕ್ಷರ ಸ್ಥಾನಕ್ಕೆ ಹಲವು ನಾಯಕರ ಹೆಸರುಗಳು ಕೇಳಿ ಬಂದಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

BS yediyurappa Nominated Shobha Karandlaje for the post of BJP state president

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಜರ್ಜರಿತವಾಗಿರುವ ಕರ್ನಾಟಕ ಬಿಜೆಪಿ ಪಡೆ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದು ಅಧಿವೇಶನವೇ ಆರಂಭವಾದರೂ ವಿಪಕ್ಷ ನಾಯಕನಿಲ್ಲದೇ ಕರ್ನಾಟಕ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದೆ. ಇದಲ್ಲದೆ ರಾಜ್ಯಾಧ್ಯಕ್ಷ ಸ್ಥಾನವೂ ಖಾಲಿ ಉಳಿದಿದ್ದು, ಅದು ಕೂಡ ಜರೂರಾಗಿ ಆಗಬೇಕಿದೆ. ಈ ಎರಡು ನೇಮಕಾತಿಗೆ ಬಣ ರಾಜಕೀಯ ಹಿಂದೆ ಕೆಲಸ ಮಾಡುತ್ತಿದ್ದು, ಯಾರನ್ನು ಆಯ್ಕೆ ಮಾಡಬೇಕು ಎಂದು ಹೈಕಮಾಂಡ್‌ ಗೊಂದಲಕ್ಕೆ ಬಿದ್ದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಹಲವಾರು ಹಿರಿಯ ನಾಯಕರ ಹೆಸರುಗಳು ಕೇಳಿಬಂದಿವೆ, ಅವುಗಳಲ್ಲಿ ಆರ್‌, ಅಶೋಕ್‌, ಬಸವರಾಜ ಬೊಮ್ಮಾಯಿ, ಸಿಟಿ ರವಿ, ಶೋಭಾ ಕರಂದ್ಲಾಕೆ, ಬಸನಗೌಡ ಪಾಟೀಲ್ ಯತ್ನಾಳ್‌, ಬಿವೈ ವಿಜಯೇಂದ್ರ, ವಿ ಸೋಮಣ್ಣ, ಮಾಜಿ ಸಚಿವ ಸುನೀಲ್‌ ಕುಮಾರ್‌ ಹೀಗೆ ಕೆಲವರ ಹೆಸರು ಮುಂಚೂಣಿಯಲ್ಲಿವೆ, ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರದಲ್ಲಿ ಹೈಕಮಾಂಡ್‌ ಬಿಎಸ್‌ ಯಡಿಯೂರಪ್ಪನವರ ಮಾತನ್ನು ತೆಗೆದುಹಾಕುವ ಸಾಧ್ಯತೆ ಇಲ್ಲ.

ಹೀಗಾಗಿ ಬಿಎಸ್‌ ಯಡಿಯೂರಪ್ಪನವರು ಮಹಿಳೆಯರಿಗೆ ಈ ಬಾರಿ ಅವಕಾಶ ನೀಡಬೇಕು. ಅಲ್ಲದೆ ಕರ್ನಾಟಕ ವಿರೋಧ ಪಕ್ಷದ ನಾಯಕನಾಗಿ ಲಿಂಗಾಯತರಿಗೆ ಕೊಟ್ಟರೆ ರಾಜ್ಯಾಧ್ಯಕ್ಷ ಸ್ಥಾನವನ್ನು ಒಕ್ಕಲಿಗರಿಗೆ ನೀಡಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸುವಂತೆ ಬಿಎಸ್‌ ಯಡಿಯೂರಪ್ಪ ಅವರು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

BS yediyurappa Nominated Shobha Karandlaje for the post of BJP state president

ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಭಾ ಕರಂದ್ಲಾಜೆ ಅವರು ಸರ್ಕಾರದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಯಡಿಯೂರಪ್ಪ ಅವರ ಕುಟುಂಬದವರು ಮಧ್ಯ ಪ್ರವೇಶಿಸಿ, ಶೋಭಾ ಕರಂದ್ಲಾಜೆ ಅವರನ್ನು ಸರ್ಕಾರದಿಂದ ದೂರ ಇರಿಸಿದ್ದರು.

ಇತ್ತೀಚೆಗೆ ಯಡಿಯೂರಪ್ಪ, ವಿಜಯೇಂದ್ರ ಮತ್ತು ಶೋಭಾ ಮಧ್ಯೆ ಸಂಧಾನ ನಡೆದಿದ್ದು, ಎಲ್ಲರೂ ಒಟ್ಟಾಗಿ ಹೋಗುವ ನಿರ್ಧಾರಕ್ಕೆ ಬರಲಾಗಿದೆ. ಸಂತೋಷ್‌ ಬಣ ನಿತ್ರಾಣಗೊಳ್ಳುತ್ತಿದ್ದಂತೆ ಯಡಿಯೂರಪ್ಪ ಸಕ್ರಿಯರಾಗಲು ಇದೂ ಒಂದು ಕಾರಣ ಎಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆದಿದೆ. ಲೋಕಸಭಾ ಚುನಾವಣೆ ಸೇರಿದಂತೆ ಸಾಲು ಸಾಲು ಚುನಾವಣೆ ಹಾಗೂ ಕಾಂಗ್ರೆಸ್‌ ಸರ್ಕಾರವನ್ನ ಎದುರಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಅಳೆದು ತೂಗಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆಗೆ ಮುಂದಾಗಿದ್ದು, ಜಾತಿ ಲೆಕ್ಕಾಚಾರವನ್ನ ಹಾಕಿಕೊಂಡಿದೆ.

ಸದ್ಯಕ್ಕೆ ರಾಜ್ಯಾಧ್ಯಕ್ಷರಾಗಿರುವ ನಳಿನ್‌ ಕುಮಾರ್ ಕಟೀಲು ಅವರ ಅವಧಿ ಮುಗಿದಿದ್ದು ಮತ್ತೆ ಅವರನ್ನೇ ಮುಂದುವರಿಸುವ ಉದ್ದೇಶ ಬಿಜೆಪಿ ಹೈಕಮಾಂಡ್‌ಗೆ ಮುಂದೆ ಇಲ್ಲ. ಅಲ್ಲದೇ ರಾಜ್ಯ ವಿಧಾನಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತಿರುವ ಕಟೀಲ್‌ ಅವರು ಸಹ ಜವಾಬ್ದಾರಿಯಿಂದ ಕಳಚಿಕೊಳ್ಳಲು ರೆಡಿಯಾಗಿದ್ದಾರೆ. ಇತ್ತ ರಾಜ್ಯಾಧ್ಯಕ್ಷ ಕಟೀಲ್‌ ವಿರುದ್ದ ಹಲವು ಬಿಜೆಪಿಯ ನಾಯಕರೇ ಅಸಮಾಧಾನವನ್ನ ವ್ಯಕ್ತಪಡಿಸಿದೆ.

ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಸೈಡ್‌ಲೈನ್ ಮಾಡಿದ ಕಾರಣಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ ಎಂಬ ಕಾರಣಕ್ಕಾಗಿ ಈಗ ಅವರ ಪುತ್ರ ವಿಜಯೇಂದ್ರ ಹೆಸರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ಪರಿಗಣಿಸಬೇಕು ಎಂದು ಪ್ರಬಲ ಒತ್ತಾಯ ಕೇಳಿ ಬರುತ್ತಿದೆ. ಅದರ ಪಕ್ಷದಲ್ಲಿ ಬಹಳ ಹಿರಿಯರಾಗಿರುವ ಹಾಗೂ ಒಕ್ಕಲಿಗ ನಾಯಕರಾದ ಸಿ.ಟಿ. ರವಿ, ಆರ್ ಅಶೋಕ್, ಶೋಭಾ ಕರಂದ್ಲಾಜೆ ಅವರಿಗೆ ಜವಾಬ್ದಾರಿ ನೀಡಿದರೆ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದೂ ಕೂಡ ಹೇಳಲಾಗುತ್ತಿದೆ.

ಪ್ರತಿ ಬಾರಿಯೂ ಬಿಜೆಪಿಯಲ್ಲಿ ಜಾತಿ ರಾಜಕಾರಣವೂ ಮುಖ್ಯವಾಗುತ್ತದೆ. ಈ ಬಾರೀಯೂ ಸಹ ಪ್ರಬಲ ಸಮುದಾಯ ಲಿಂಗಾಯತರಿಗೆ ಒಂದು ಹುದ್ದೆಯನ್ನು ನೀಡಲೇ ಬೇಕು. ಇನ್ನೊಂದು ಹುದ್ದೆಯನ್ನು ಒಕ್ಕಲಿಗರಿಗೆ ಒಕ್ಕಲಿಗರಿಗೆ ನೀಡುವ ಚಿಂತನೆ ನಡೆದಿದ್ದು, ಹಲವು ರಾಜ್ಯಗಳಲ್ಲಿನ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆ ಮೋದಿ ಕ್ಯಾಬಿನೆಟ್‌ ಪುನರ್‌ ರಚನೆಯಾಗಲಿದ್ದು, ಕರ್ನಾಟಕ ರಾಜ್ಯದ ಕೇಂದ್ರ ಸಚಿವರಿಗೆ ಕೊಕ್‌ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ನಾಲ್ಕು ಜನ ಕೇಂದ್ರ ಸಚಿವರಿದ್ದು, ಆ ಪೈಕಿ ಒಕ್ಕಲಿಗ ಸಮುದಾಯದ ಮಹಿಳಾ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡುವ ಪ್ಲಾನ್‌ಗೆ ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+