ಯಡಿಯೂರಪ್ಪ ಅವರು ಆರೋಗ್ಯದ ಕಾರಣಕ್ಕಾಗಿ ಅಧಿಕಾರ ತ್ಯಜಿಸಿದರು: ರಾಜನಾಥ್ ಸಿಂಗ್
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಗಳು ಹೆಚ್ಚಾಗಿದ್ದು, ಕಾಂಗ್ರೆಸ್ ವಿರುದ್ದ ರಾಜನಾಥ್ ಸಿಂಗ್ ಕಿಡಿಕಾರಿದ್ದಾರೆ.
ಬೆಳಗಾವಿ,ಮಾರ್ಚ್2: 2018ರಲ್ಲಿ ಬಿಜೆಪಿ 6 ದಿನಗಳ ಸರಕಾರ ಮಾಡಿತ್ತು. ಬಳಿಕ ಕುಮಾರಸ್ವಾಮಿ ಸರಕಾರ ಬಂತು. ಯಡಿಯೂರಪ್ಪ ಅವರು ಆರೋಗ್ಯದ ಕಾರಣಕ್ಕಾಗಿ ಅಧಿಕಾರ ತ್ಯಜಿಸಿದರು ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ಬಿಜೆಪಿ ಎರಡನೇ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪನವರ ಬಳಿಕ ಸಜ್ಜನ- ಪ್ರಾಮಾಣಿಕ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು.

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತದ ಅವಕಾಶ ಕೊಡಿ. ಮೋದಿಜಿ ಅವರ ಮಾರ್ಗದರ್ಶನ ಮತ್ತು ಕರ್ನಾಟಕದಲ್ಲಿ 5 ವರ್ಷ ಆಡಳಿತಕ್ಕೆ ಅವಕಾಶ ಕೊಟ್ಟರೆ ರಾಜ್ಯವನ್ನು ಅತ್ಯಂತ ಅಭಿವೃದ್ಧಿ ಉಳ್ಳ ಪ್ರದೇಶವಾಗಿ ಮಾಡುವುದಾಗಿ ತಿಳಿಸಿದರು. ಕಾಂಗ್ರೆಸ್ ಪಕ್ಷಕ್ಕೆ 50 ವರ್ಷ ಮಾಡಲು ಅಸಾಧ್ಯವಾದ ಅಭಿವೃದ್ಧಿ ಕಾರ್ಯಗಳನ್ನು ನಮ್ಮ ಸರಕಾರ ಮಾಡಿದೆ.
ಕಾಂಗ್ರೆಸ್ ಹೇಳುವುದು ಒಂದು; ಮಾಡುವುದು ಇನ್ನೊಂದು. ಆದರೆ, ಬಿಜೆಪಿ ಹೇಳಿದ್ದನ್ನೇ ಮಾಡಿ ತೋರಿಸುತ್ತದೆ ಎಂದು ತಿಳಿಸಿದರು. ಯಡಿಯೂರಪ್ಪ ಅವರು ರಾಜ್ಯದ ಅತ್ಯುನ್ನತ ನಾಯಕ. ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದ್ದೇವೆ ಎಂದು ತಿಳಿಸಿದರು. ಕರ್ನಾಟಕಕ್ಕೆ ಅವರ ಸೇವೆಯನ್ನು ಬಿಜೆಪಿ ಮರೆಯುವುದಿಲ್ಲ ಎಂದು ತಿಳಿಸಿದರು.

70ನೇ ವಿಧಿ ರದ್ದತಿ, ತ್ರಿವಳಿ ತಲಾಖ್ ರದ್ದು ಮಾಡುವ ಬದ್ಧತೆ ಪ್ರದರ್ಶಿಸಿದ್ದೇವೆ. ಕಾಂಗ್ರೆಸ್ ಇಂಥ ಅಪರಾಧಗಳನ್ನು ಒಪ್ಪಿಕೊಂಡಿತ್ತು. ಭದ್ರಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಹಣ ಕೊಡಲಾಗಿದೆ. 8 ಕೋಟಿ ಮನೆಗಳಿಗೆ ನಳ್ಳಿ ನೀರನ್ನು ನೀಡಿದ್ದೇವೆ. 80 ಕೋಟಿ ಜನರಿಗೆ ಉಚಿತ ಪಡಿತರ ಕೊಡಲಾಗಿದೆ ಎಂದು ತಿಳಿಸಿದರು.
ನಮ್ಮ ಗೌರವಶಾಲಿ ಪರಂಪರೆ ನೆನಪಿರಲಿ. ವಿಜಯ ಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಗೆಲುವಿಗೆ ಪ್ರತಿಜ್ಞಾಬದ್ಧರಾಗಬೇಕು ಎಂದು ಮನವಿ ಮಾಡಿದರು. ವೀರರನ್ನು ನೀಡಿದ ನಾಡಿದು. ರಾಣಿ ಚನ್ನಮ್ಮಳ ವೀರಗಾಥೆಯನ್ನು ದೇಶದ ವಿವಿಧೆಡೆ ಚರ್ಚಿಸುತ್ತಾರೆ. ಸಂಗೊಳ್ಳಿ ರಾಯಣ್ಣ ಸ್ಫೂರ್ತಿದಾಯಕ ನಾಯಕ. ಅವರ ಪ್ರತಿಮೆ, ಸಮಾಧಿಗೆ ಮಾಲಾರ್ಪಣೆ ಮಾಡಿ ಧನ್ಯತಾ ಭಾವ ಹೊಂದಿದ್ದೇನೆ ಎಂದರು.
ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ಜನರಿಗೆ ತಲುಪಿಸಲಾಗುತ್ತಿದೆ. ಭ್ರಷ್ಟಾಚಾರಕ್ಕೂ ಔಷಧಿ ಇದೆ ಎಂಬುದನ್ನು ಬಿಜೆಪಿ, ಮೋದಿಜಿ ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು. ಹಣದುಬ್ಬರ ನಮ್ಮಲ್ಲಿ ಕನಿಷ್ಠ ಮಟ್ಟದಲ್ಲಿದೆ. ಭಾರತದ ಅರ್ಥವ್ಯವಸ್ಥೆ ಅತ್ಯಂತ ಸದೃಢವಾಗಿದೆ ಎಂದರು. ಹಿಂದೆ ಅರ್ಥ ವ್ಯವಸ್ಥೆ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವು 10- 11ನೇ ಸ್ಥಾನದಲ್ಲಿತ್ತು. ಈಗ ಅರ್ಥವ್ಯವಸ್ಥೆಯು 5ನೇ ಸ್ಥಾನಕ್ಕೆ ಬಂದಿದೆ ಎಂದು ಮೆಚ್ಚುಗೆ ಸೂಚಿಸಿದರು.
ಭಾರತವನ್ನು ವಿಭಜಿಸಿದವರೇ ಭಾರತ್ ಜೋಡೋ ಮಾಡುತ್ತಾರೆ.ಮೋದಿಜಿ ಅವರ ಸಾವಿನ ಮಾತನಾಡುವ ಕಾಂಗ್ರೆಸ್ಸಿಗರು ಕಮಲ ಅರಳುವುದನ್ನು ಸದಾ ನೋಡುವಂತಾಗಲಿದೆ ಎಂದು ತಿಳಿಸಿದರು.












Click it and Unblock the Notifications