ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಡಿಸೆಂಬರ್ 15: ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳು ಇಲ್ಲ. ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ ನಮ್ಮದು ಒಂದೇ ಅಜೆಂಡಾ ಮುಂದೆ ಚುನಾವಣೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕೊಪ್ಪಳಕ್ಕೆ ತೆರಳುವ ಮುನ್ನನ ಮಾಧ್ಯಮಗಳ ಜೊಗೆತೆ ಮಾತನಾಡಿದ ಅವರು, ನಮ್ಮ ರಾಷ್ಟ್ರಾಧ್ಯಕ್ಷರಾದ ಜೆ.ಪಿ ನಡ್ಡಾ ಅವರು ಕೊಪ್ಪಳಕ್ಕೆ ಬರ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗ್ತಿದ್ದೇನೆ. ಬೇರೆ ಕಾರಣಕ್ಕೆ ನಾನು ಇವತ್ತು ಕಾರ್ಯಕ್ರಮಕ್ಕೆ ಹೋಗದೇ ಇರೋ ಸ್ಥಿತಿ ಇತ್ತು‌. ಹೋಗಲೇ ಬೇಕು ಅನ್ನೋ ಸ್ಥಿತಿ ಬಂತು. ಹೀಗಾಗಿ ಹೋಗ್ತಿದ್ದೇನೆ. ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳು ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡೋಕೆ ಹೋಗಬೇಡಿ. ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ ನಮ್ಮದು ಒಂದೇ ಅಜೆಂಡಾ ಮುಂದೆ ಚುನಾವಣೆ ಇದೆ. ಪಕ್ಷವನ್ನ ಅಧಿಕಾರಕ್ಕೆ ತರೋದು, ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕ್ತೀನಿ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ. ಮೋದಿ,ಅಮಿತ್ ಶಾ ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತೆ. ಇದೆಲ್ಲದ್ರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ತಿಳಿಸಿದರು.

BS Yediyurappa said that we do not have any differences or confusions

ನನ್ನನ್ನ‌ ಪಕ್ಷ ನೆಗಲೆಟ್ ಮಾಡ್ತಿಲ್ಲ. ಇದ್ರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ‌ಕಾರ್ಯಕ್ರಮಗಳಿಗೆ ನಾನು ಹೋಗ್ತಾ ಇದ್ದೀನಿ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲ ‌ ಅಂತ ಹೋಗಿಲ್ಲ ಅಷ್ಟೆ. ಆದರೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನನ್ನನ್ನ ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡ್ತೀನಿ. ಈ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗೋ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ನಡ್ಡಾ ಬರ್ತಿದ್ದಾರೆ ಅದಕ್ಕೆ ಹೋಗ್ತಿದ್ದೇನೆ ಎಂದರು.

ಇನ್ನೂ ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತರ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ ಎಂದರು.

BS Yediyurappa said that we do not have any differences or confusions

ನನಗೆ ನನ್ನದೇ ಆದ ಶಕ್ತಿ ಇದೆ.

ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೆ ಮುಂದುವರೆಸುತ್ತೇನೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ ಅಂತ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+