ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ!'

|
Google Oneindia Kannada News

ಬೆಂಗಳೂರು, ಜು. 27: ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಿನ್ನೆಗೆ ಒಂದು ವರ್ಷವಾಗಿದೆ. ಇವತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ್ದಾರೆ. ಕೊರೊನಾವೈರಸ್ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Recommended Video

ವಾಯುಪಡೆಗೆ ಬಂತು ಆನೆ ಬಲ, ಭಾರತದ ಬತ್ತಳಿಕೆ ಸೇರಿದ ರಫೇಲ್ | Oneindia Kannada

ಇದೇ ಸಂದರ್ಭದಲ್ಲಿ ಕೊಪ್ಪಳದಲ್ಲಿ ಮಾತನಾಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು, ಬಿ.ಎಸ್. ಯಡಿಯೂರಪ್ಪ ಅವರೇ ಮುಂದಿನ‌ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ ಹೇಳಿದ್ದಾರೆ.

BS Yediyurappa will continue as chief minister for rest of term: Agriculture Minister B.C. Patil

ಸರ್ಕಾರಕ್ಕೆ ವರ್ಷ: ಮಹತ್ವದ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಸಜ್ಜು? ಸರ್ಕಾರಕ್ಕೆ ವರ್ಷ: ಮಹತ್ವದ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಸಜ್ಜು?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರ ಸುಭದ್ರವಾಗಿದೆ. ಪೂರ್ಣ ಅವಧಿಯನ್ನು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮುಗಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

BS Yediyurappa will continue as chief minister for rest of term: Agriculture Minister B.C. Patil

ನಾಯಕತ್ವ ಬದಲಾವಣೆ?: ಇದೇ ಅಕ್ಟೋಬರ್ ತಿಂಗಳಲ್ಲಿ ರಾಜ್ಯ ನಾಯಕತ್ವ ಬದಲಾವಣೆ ಮಾಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿವೆ. ಜೊತೆಗೆ ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ರಾಜ್ಯ ಬಿಜೆಪಿ ಸರ್ಕಾರಕ್ಕೆ ಶುಭ ಹಾರೈಸದೆ ಇರುವುದು ರಾಜ್ಯ ಬಿಜೆಪಿ ನಾಯಕರಲ್ಲಿ ಆತಂಕ ಮೂಡಿಸಿದೆ.

English summary
The state BJP government has completed one year. Agriculture Minister B.C. Patil said BS Yediyurappa will continue as chief minister for the next term also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X