ಬಿಎಸ್‌ಸಿ ಕೃಷಿ ಪದವಿ ಪ್ರವೇಶಕ್ಕೆ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಆ. 24: ಕೋವಿಡ್ ಕಾರಣ ಐಸಿಎಆರ್ (ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ, ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ಪ್ರತ್ಯೇಕ ಪರೀಕ್ಷೆಯ ಬದಲಾಗಿ ಸಿಇಟಿ ರ್‍ಯಾಂಕಿಂಗ್ ಆಧಾರದ ಮೇಲೆಯೇ ಕೃಷಿಕರ ಮಕ್ಕಳು ಹಾಗೂ ಕೃಷಿ ಕಾರ್ಮಿಕರ ಕೋಟಾದಡಿ ಅರ್ಹ ವಿದ್ಯಾರ್ಥಿಗಳಿಗೆ ಸೀಟು ಹಂಚಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
Recommended Video
ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರವು ರೈತರ ಆರೋಗ್ಯ ಹಾಗೂ ಹಿತರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದ್ದು, ಸಾವಿರಾರು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುವುದು ಕಷ್ಟ ಸಾಧ್ಯ. ಆದ್ದರಿಂದ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ.

ಕೃಷಿಕರ ಕೋಟಾದ ಅಡಿಯಲ್ಲಿ ಶೇಕಡಾ 40 ಸೀಟುಗಳು ಕೃಷಿಕರ ಮಕ್ಕಳಿಗೆ ಮೀಸಲಿರುತ್ತವೆ. ನೈಜ ಕೃಷಿಕರ ಮಕ್ಕಳು ಮಾತ್ರ ಕೃಷಿಕರ ಕೊಟಾದಲ್ಲಿ ಸೀಟುಗಳನ್ನು ಪಡೆದುಕೊಳ್ಳುವಂತೆ ಮಾಡಲು ಸರ್ವ ನಿಬಂಧನೆಗಳನ್ನು ಸಿದ್ದಪಡಿಸಲಾಗಿದೆ. ಇದರಿಂದ ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ ಎಂದು ಸಚಿವ ಪಾಟೀಲ್ ಸ್ಷಷ್ಟಪಡಿಸಿದ್ದಾರೆ.












Click it and Unblock the Notifications