ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್‌ಸಿ ಕೃಷಿ ಪದವಿ ಪ್ರವೇಶಕ್ಕೆ ಹೊಸ ಮಾರ್ಗಸೂಚಿ ಪ್ರಕಟ

|
Google Oneindia Kannada News

ಬೆಂಗಳೂರು, ಆ. 24: ಕೋವಿಡ್ ಕಾರಣ ಐಸಿಎಆರ್ (ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ, ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ಪ್ರತ್ಯೇಕ ಪರೀಕ್ಷೆಯ ಬದಲಾಗಿ ಸಿಇಟಿ ರ್‍ಯಾಂಕಿಂಗ್ ಆಧಾರದ ಮೇಲೆಯೇ ಕೃಷಿಕರ ಮಕ್ಕಳು ಹಾಗೂ ಕೃಷಿ ಕಾರ್ಮಿಕರ ಕೋಟಾದಡಿ ಅರ್ಹ ವಿದ್ಯಾರ್ಥಿಗಳಿಗೆ ಸೀಟು ಹಂಚಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

Recommended Video

ಹಿಂದಿ ಹೇರಿಕೆ ವಿರುದ್ಧ HDK ಬ್ಯಾಟಿಂಗ್ | Oneindia Kannada

ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರವು ರೈತರ ಆರೋಗ್ಯ ಹಾಗೂ ಹಿತರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದ್ದು, ಸಾವಿರಾರು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುವುದು ಕಷ್ಟ ಸಾಧ್ಯ. ಆದ್ದರಿಂದ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ.

BSc Agri seats will allocated under CET ranking instead of separate examination

KCET ಫಲಿತಾಂಶ 2020: ಯಾವ ವಿಭಾಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್? KCET ಫಲಿತಾಂಶ 2020: ಯಾವ ವಿಭಾಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪಾಸ್?

ಕೃಷಿಕರ ಕೋಟಾದ ಅಡಿಯಲ್ಲಿ ಶೇಕಡಾ 40 ಸೀಟುಗಳು ಕೃಷಿಕರ ಮಕ್ಕಳಿಗೆ ಮೀಸಲಿರುತ್ತವೆ. ನೈಜ ಕೃಷಿಕರ ಮಕ್ಕಳು ಮಾತ್ರ ಕೃಷಿಕರ ಕೊಟಾದಲ್ಲಿ ಸೀಟುಗಳನ್ನು ಪಡೆದುಕೊಳ್ಳುವಂತೆ ಮಾಡಲು ಸರ್ವ ನಿಬಂಧನೆಗಳನ್ನು ಸಿದ್ದಪಡಿಸಲಾಗಿದೆ. ಇದರಿಂದ ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ ಎಂದು ಸಚಿವ ಪಾಟೀಲ್ ಸ್ಷಷ್ಟಪಡಿಸಿದ್ದಾರೆ.

English summary
Due to COVID situation under the ICAR (Indian Agricultural Research Council) rule, farmers and agricultural laborers children will be allocated seats under the CET ranking base instead of a separate examination for Bsc Agriculture says Minister B.C. Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X