ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಾಸಮತಕ್ಕೆ ಗೈರು: ಬಿಎಸ್‌ಪಿ ಶಾಸಕ ಮಹೇಶ್ ಪಕ್ಷದಿಂದ ಉಚ್ಛಾಟನೆ

|
Google Oneindia Kannada News

ಬೆಂಗಳೂರು, ಜುಲೈ 23: ಇಂದು ನಡೆದ ವಿಶ್ವಾಸಮತ ಯಾಚನೆಗೆ ಗೈರಾದ ಬಿಎಸ್‌ಪಿ ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.

ಕೊಳ್ಳೆಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್.ಮಹೇಶ್ ಅವರಿಗೆ ಸರ್ಕಾರದ ಪರವಾಗಿ ಮತ ಚಲಾಯಿಸುವಂತೆ ಬಿಎಸ್‌ಪಿ ಹೈಕಮಾಂಡ್ ಸೂಚಿಸಿತ್ತು, ಆದರೆ ಅದನ್ನು ಉಲ್ಲಂಘಿಸಿ ಇಂದು ನಡೆದ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಂಡಿರಲಿಲ್ಲ, ಹಾಗಾಗಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ವಿಶ್ವಾಸಮತದಲ್ಲಿ ಸೋಲು; ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಪತನವಿಶ್ವಾಸಮತದಲ್ಲಿ ಸೋಲು; ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಪತನ

ವಿಶ್ವಾಸಮತ ಪ್ರಕ್ರಿಯೆ ಮುಗಿದ ಕೂಡಲೇ ಸ್ವತಃ ಮಾಯಾವತಿ ಅವರೇ ಈ ಬಗ್ಗೆ ಟ್ವೀಟ್ ಮಾಡಿದ್ದು, ಪಕ್ಷದ ಆದೇಶ ಇದ್ದರೂ ಸಹ ಉಲ್ಲಂಘನೆ ಮಾಡಿರುವ ಎನ್.ಮಹೇಶ್ ಅವರ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

BSP MLA N Mahesh expelled from BSP party

ಎನ್.ಮಹೇಶ್ ಅವರು ಜೆಡಿಎಸ್ ಪಕ್ಷದ ಬೆಂಬಲದೊಂದಿಗೆ ಕೊಳ್ಳೆಗಾಲದಲ್ಲಿ ಚುನಾವಣೆ ಎದುರಿಸಿ ಗೆದ್ದಿದ್ದರು. ಕುಮಾರಸ್ವಾಮಿ ಅವರ ಸಂಪುಟದಲ್ಲಿ ಸಚಿವರೂ ಸಹ ಆಗಿದ್ದರು. ಆದರೆ ಆ ನಂತರ ಲೋಕಸಭೆ ಚುನಾವಣೆಗೆ ಸಮೀಪಿಸಿದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

Live Updates ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕುಮಾರಸ್ವಾಮಿLive Updates ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕುಮಾರಸ್ವಾಮಿ

ಮಾಯಾವತಿ ಅವರಿಂದ ಸೂಚನೆ ಬಂದಿಲ್ಲವೆಂದು ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾದಾಗ ಹೇಳಿದ್ದ ಎನ್.ಮಹೇಶ್ ಅವರು, ಮಾಯಾವತಿ ಅವರಿಂದ ಆದೇಶ ಬಂದ ನಂತರವೂ ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ.

ಇಂದು ನಡೆದ ವಿಶ್ವಾಸಮತದಲ್ಲಿ ಕುಮಾರಸ್ವಾಮಿ ಸರ್ಕಾರದ ಪರವಾಗಿ 99 ಮತಗಳು ಬಂದಿದ್ದರೆ, ಸರ್ಕಾರಕ್ಕೆ ವಿರುದ್ಧವಾಗಿ 105 ಮತಗಳು ಬಂದಿದ್ದವು. 20 ಶಾಸಕರು ಇಂದು ಗೈರಾಗಿದ್ದರು, ಅವರಲ್ಲಿ ಎನ್.ಮಹೇಶ್ ಸಹ ಒಬ್ಬರಾಗಿದ್ದರು.

English summary
Kollegala BSP MLA N Mahesh expelled from the party. N Mahesh did not participate in confidence motion today so Mayawathi expelled him from the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X