ಮಲ್ಲೇಶ್ವರಂ ಠಾಣೆ ಮೆಟ್ಟಿಲೇರಿದ ಯಡಿಯೂರಪ್ಪ -ಅನಂತ್ ಸಂಭಾಷಣೆ

Subscribe to Oneindia Kannada

ಬೆಂಗಳೂರು, ಫೆಬ್ರವರಿ 17: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆ ಸಿಡಿಗೆ ಸಂಬಂಧಿಸಿದಂತೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಗೆ ಕಾಂಗ್ರೆಸ್ ದೂರು ನೀಡಿದೆ.

ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕ ಐವನ್ ಡಿ ಸೋಜಾ ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಸಂಭಾಷಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಅಸ್ಥಿರಗೊಳಿಸುವ ಬಗ್ಗೆ ಮಾತನಾಡಲಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.[ಎಸಿಬಿ ಅಂಗಳ ತಲುಪಿದ ಅನಂತ್ ಕುಮಾರ್, ಯಡಿಯೂರಪ್ಪ ಗುಪ್ತ ಮಾತುಕತೆ]

ದೂರು ತಮ್ಮ ವ್ಯಾಪ್ತಿಗೆ ಸೇರಿದೆಯಾ ಎಂಬುದರ ಬಗ್ಗೆ ಮಲ್ಲೇಶ್ವರಂ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.[ಯಡಿಯೂರಪ್ಪ- ಅನಂತ್ ಮಾತನಾಡಿಕೊಂಡಿದ್ದು ಯಾರ ಬಗ್ಗೆ?]

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾನುವಾರ (ಫೆ. 12) ದಂದು ಕಾರ್ಯಕಾರಿಣಿ ಸಭೆ ನಡೆದಿತ್ತು. ಸಭೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಭಾಷಣ ಮಾಡುತ್ತಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆ ನಡೆದಿತ್ತು. ಈ ಸಂಭಾಷಣೆ ಸಿಡಿ ರೂಪದಲ್ಲಿ ಕಾಂಗ್ರೆಸ್ ಕೈ ಸೇರಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress MLA Ivan D'Souza file a case in Malleswaram Police Station challenging the conversation recording between State BJP President BS Yeddyurappa and Central Minister Ananth Kumar to target the ruling congress party before election.
Please Wait while comments are loading...