1 ಗ್ರಾಂ ಅಕ್ಕಿ ಕಡಿಮೆ ಕೊಟ್ಟರೂ ಜನ ಒಪ್ಪಲ್ಲ: ಸಿದ್ದರಾಮಯ್ಯ ಸರ್ಕಾರಕ್ಕೆ BSY ವಾರ್ನಿಂಗ್!
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಬಿಜೆಪಿ & ಕಾಂಗ್ರೆಸ್ ವಾರ್ ಮುಂದುವರಿದಿದೆ. ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕೂಡ ಅಖಾಡ ಪ್ರವೇಶ ಮಾಡಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ. ಈ ಮೂಲಕ ಕೇಂದ್ರ & ರಾಜ್ಯ ಸರ್ಕಾರದ ಅಕ್ಕಿ ಫೈಟ್ ಕೂಡ ಮತ್ತಷ್ಟು ಜೋರಾಗುವ ಸೂಚನೆ ಸಿಕ್ಕಂತಾಗಿದೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್‌ವೈ 'ಕೈ' ವಿರುದ್ಧ ವಾಗ್ದಾಳಿ ನಡೆಸಿದ್ರು. 'ರಾಜ್ಯದ ಜನರಿಗೆ 10 ಕೆ.ಜಿ. ಅಕ್ಕಿ ಕೊಡುವ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಕೇಂದ್ರದ ವಿರುದ್ಧ ಆರೋಪ ಮಾಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಸುಮ್ಮನೆ ಗೊಂದಲ ಸೃಷ್ಟಿಸಿದೆ.' ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮತ್ತೊಂದು ಗಂಭೀರ ಆರೋಪವನ್ನೂ ರಾಜ್ಯ ಸರ್ಕಾರದ ವಿರುದ್ಧ ಬಿಎಸ್‌ವೈ ಮಾಡಿದ್ದು, ಅದರ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ಕೇಂದ್ರದಿಂದ 5 ಕೆ.ಜಿ ಅಕ್ಕಿ ಉಚಿತ!
ಅಕ್ಕಿ ವಿಚಾರಕ್ಕೆ ಕಿರಿಕ್ ಜೋರಾಗುತ್ತಿದೆ, ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ಪಡೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿತ್ತು. ಆದರೆ ಈಗ ಅದಕ್ಕೆ ಉತ್ತರ ನೀಡಿರುವ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯದ ಜನರಿಗೆ ಪಡಿತರ ವ್ಯವಸ್ಥೆಯ ಮೂಲಕ ಈಗಾಗಲೇ ಪಿಎಂ ನರೇಂದ್ರ ಮೋದಿ ಸರ್ಕಾರ 5 ಕೆ.ಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಹೆಚ್ಚುವರಿ ಕೊಡುವುದಾಗಿ ಹೇಳಿದ್ದ 5 ಕೆ.ಜಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಆ ಅಕ್ಕಿ ಹೊಂದಿಸಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಬಾಕಿ ಅಕ್ಕಿಯನ್ನ ಎಲ್ಲಿಯಾದ್ರೂ ಖರೀದಿ ಮಾಡಿಕೊಡಲಿ ಎಂದು ಬಿಎಸ್‌ವೈ ಆಗ್ರಹ ಮಾಡಿದ್ದಾರೆ.
1 ಗ್ರಾಂ ಅಕ್ಕಿ ಕಡಿಮೆ ಕೊಟ್ಟರೂ..!
ಹಾಗೇ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಎಚ್ಚರಿಕೆ ನೀಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಕಾಂಗ್ರೆಸ್ ನಾಯಕರು 10 ಕೆ.ಜಿ. ಅಕ್ಕಿಯನ್ನ ಕೊಡುತ್ತೇವೆ ಅಂತಾ ಚುನಾವಣೆಗೆ ಮುನ್ನ ಭರವಸೆ ಕೊಟ್ಟಿದ್ದರು. ಅದರಂತೆ ಅಷ್ಟೂ ಅಕ್ಕಿ ವಿತರಣೆ ಮಾಡಬೇಕಿದೆ. 1 ಗ್ರಾಂ ಕಡಿಮೆಯಾದರೂ ರಾಜ್ಯದ ಜನರು ಒಪ್ಪಲ್ಲ. ಅವರು ಕೊಟ್ಟ ಭರವಸೆ ಈಡೇರಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ. ಅಲ್ಲದೆ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ ಬಿಎಸ್‌ವೈ. ಹೀಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಅಕ್ಕಿ ಹಂಚಿಕೆ ಫೈಟ್ ಮತ್ತಷ್ಟು ತೀವ್ರವಾಗಿದೆ.
ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸಬೇಡಿ, ನೀವು ಘೋಷಿಸಿದ ಯೋಜನೆಗೆ ಕೇಂದ್ರ ಹೊಣೆಯಲ್ಲ. ಯಾವ ಸಂದರ್ಭದಲ್ಲೂ ನರೇಂದ್ರ ಮೋದಿ ಅವರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ಕೊಡುತ್ತೇವೆ ಅಂತಾ ಹೇಳಿರಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಈ ವಿಚಾರದಲ್ಲಿ ವಿನಾಕಾರಣ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಟೀಕಿಸಿದರು. ಹೀಗೆ ರಾಜ್ಯ ಸರ್ಕಾರ VS ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿದ್ದ ಅಕ್ಕಿ ಕಿರಿಕ್‌ಗೆ ಮಾಜಿ ಸಿಎಂ ಕೂಡ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಮುಂದೆ ಈ ಕಿರಿಕ್ ಎಲ್ಲಿಗೆ ಬಂದು ನಿಲ್ಲುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.
-
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications