ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಜೆಟ್ 2021: ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ಸಿಕ್ಕಿದ್ದೇನು?

|
Google Oneindia Kannada News

ಬೆಂಗಳೂರು, ಮಾರ್ಚ್ 08: ಈ ಬಾರಿಯ ಕರ್ನಾಟಕ ಬಜೆಟ್‌ನಲ್ಲಿ ಬಿಎಸ್ ಯಡಿಯೂರಪ್ಪ ಅವರು ಮಹಿಳಾ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ಈ ಬಾರಿ ವಿಶ್ವ ಮಹಿಳಾ ದಿನದಂದೇ 2021-22ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಹಿಳೆಯರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್ 2021: ಬೆಂಗಳೂರಿಗೆ ಸಿಕ್ಕಿದ್ದೇನು?ಕರ್ನಾಟಕ ಬಜೆಟ್ 2021: ಬೆಂಗಳೂರಿಗೆ ಸಿಕ್ಕಿದ್ದೇನು?

ಆರು ತಿಂಗಳು ಶಿಶು ಆರೈಕೆ ರಜೆ ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಈಗಾಗಲೇ ಅಸ್ತಿತ್ವದಲ್ಲಿರುವ 6 ತಿಂಗಳ ಹೆರಿಗೆ ರಜೆಯೊಂದಿಗೆ ಆರು ತಿಂಗಳು ಮಕ್ಕಳ ಆರೈಕೆ ರಜೆ ನೀಡಲಾಗುವುದು. ಆಡಳಿತದಲ್ಲಿ ಬಹುಮುಖ್ಯ ಭಾಗವಾಗಿರುವ ಮಹಿಳೆಯರ ಕಲ್ಯಾಣಕ್ಕೆ ಪೂರಕವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಹೇಳಿದರು.

Karnataka Budget 2021: CM Extends Govt Women Employees Maternity Leaves To 1 Year

ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಶೇ.4 ರಷ್ಟು ಬಡ್ಡಿದರದಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಲ ನೀಡಲಾಗುತ್ತದೆ. ಹಪ್ಪಳ, ಉಪ್ಪಿನಕಾಯಿ ತಯಾರಕರಿಗೆ ಆನ್‌ಲೈನ್ ಮಾರುಕಟ್ಟೆ ಸೌಲಭ್ಯ, ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಕಾರ್ಯಕ್ರಮವನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ.

ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನೆರವು ಹಾಗೂ ಮಾರ್ಗದರ್ಶನ ನೀಡಲು ನಿಮ್ಹಾನ್ಸ್ ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ.

ರಾಜ್ಯದ ಸ್ವ-ಸಹಾಯ ಗುಂಪುಗಳು ಮತ್ತು ಅವುಗಳ ಒಕ್ಕೂಟವನ್ನು ಬಲಪಡಿಸಲು ಸ್ವಸಹಾಯ ಗುಂಪುಗಳ ನೀತಿ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯಡಿ ಹಣಕಾಸು ಸೌಲಭ್ಯ, ಆಪ್ತ ಸಲಹೆಯನ್ನು ನೀಡಲಾಗುತ್ತದೆ. ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ವಾರ್ಷಿಕ ಮೇಳವನ್ನು ಆಯೋಜನೆ ಮಾಡಲಾಗುತ್ತದೆ.

Recommended Video

ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು'-'ಸಿಡಿ 100 ಪರ್ಸೆಂಟ್ ನಕಲಿ, ನನ್ನ ವಿರುದ್ಧ ನಡೆದ ಷಡ್ಯಂತ್ರ' | Oneindia Kannada

English summary
Chief minister BS Yediyurappa Extends Govt Women Employees Maternity Leaves To 1 Year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X