ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸಕ್ಕಾಗಿ 10 ಕೋಟಿ ರು

|
Google Oneindia Kannada News

ಬೆಂಗಳೂರು, ಮಾರ್ಚ್ 8: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರಕ್ಕೆ ಕರ್ನಾಟಕದಿಂದ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಯಾತ್ರಿ ನಿವಾಸ್ ನಿರ್ಮಾಣಕ್ಕಾಗಿ ಕರ್ನಾಟಕ ಸರ್ಕಾರ ಮುಂದಾಗಿದೆ. ಕಟ್ಟಡ ನಿರ್ಮಾಣಕ್ಕಾಗಿ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನ ಪ್ರಕಟಿಸಲಾಗಿದೆ.

ಆಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕಾಗಿ ಬೇಕಿರುವ ಅಗತ್ಯ ಭೂಮಿಯನ್ನು ಉತ್ತರಪ್ರದೇಶ ಸರ್ಕಾರ ಮಂಜೂರು ಮಾಡಿದೆ. 5 ಎಕರೆ ಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ ಮಾಡಲು 10 ಕೋಟಿ ರು ಅನುದಾನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು.

3 ವರ್ಷಗಳಲ್ಲಿ ಶ್ರೀರಾಮ ಮಂದಿರ ನಿರ್ಮಾಣ, ದೇಣಿಗೆ ಸಂಗ್ರಹ ಕಾರ್ಯ ಸ್ಥಗಿತ3 ವರ್ಷಗಳಲ್ಲಿ ಶ್ರೀರಾಮ ಮಂದಿರ ನಿರ್ಮಾಣ, ದೇಣಿಗೆ ಸಂಗ್ರಹ ಕಾರ್ಯ ಸ್ಥಗಿತ

ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿನಿವಾಸ ನಿರ್ಮಾಣ ಮಾಡಲು 5 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಇತ್ತೀಚೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ಮಾಡಿ ಈ ಮನವಿಯನ್ನು ಪುರಸ್ಕರಿಸುವಂತೆ ಕೋರಿದ್ದರು.

Karnataka Budget 2021: Yatri Nivas for state piligrims at Ayodhya in 5 acres in Rs 10 crore

ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಕರ್ನಾಟಕದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದ್ದರು.

ಇನ್ನೊಂದೆಡೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ ಪೂರ್ಣಗೊಂಡಿದೆ. 100 ಕೋಟಿ ರು ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ದೇಶಾದ್ಯಂತ 9 ಲಕ್ಷ ಸ್ವಯಂಸೇವಕರು ನಾಲ್ಕು ಲಕ್ಷ ಹಳ್ಳಿಗಳ 10 ಕೋಟಿ ಮನೆಗಳಿಂದ ದೇಣಿಗೆ ಸಂಗ್ರಹಿಸಿಸಲಾಗಿದೆ.

English summary
Karnataka Budget 2021: Karnataka CM BS Yediyurappa in his Budget speech announced thatRs 10 crores is allocated to construct Yathri Nivasa in Ayodhya in UP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X