ಬಜೆಟ್ 2022: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲಾಖಾವಾರು ಸಭೆ ಪ್ರಾರಂಭ, ಇಲ್ಲಿದೆ ವಿವರ

ಬೆಂಗಳೂರು, ಫೆ.9: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ಗೆ ಸಿದ್ಧತೆ ಆರಂಭಿಸಿದ್ದು, ಬುಧವಾರದಿಂದ ಇಲಾಖಾವಾರು ಚರ್ಚೆ ಆರಂಭಿಸಲಿದ್ದಾರೆ.

ಎರಡು ದಿನಗಳ ದೆಹಲಿ ಪ್ರವಾಸ ಮುಗಿಸಿ ಬಸವರಾಜ ಬೊಮ್ಮಾಯಿ ಅವರು ಫೆ.8ಕ್ಕೆ ವಾಪಸ್ಸಾಗಿದ್ದಾರೆ. ಬುಧವಾರ ಬೆಳಗ್ಗೆ 11ಗಂಟೆಗೆ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಈಗಾಗಲೇ ರಾಜ್ಯದಲ್ಲಿ ತೀವ್ರ ಗಲಭೆಗೆ ಕಾರಣವಾಗಿರುವ ಹಿಜಾಬ್-ಕೇಸರಿ ಶಾಲು ವಿವಾದ ಸಹಿತ ಹಲವು ವಿಷಯಗಳು ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಇಲಾಖಾವಾರು ಸಭೆ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಸಂಬಂಧ ಈಗಾಗಲೇ ದೆಹಲಿಯಲ್ಲಿ ಸಂಸದರೊಂದಿಗೆ ಸಭೆ ನಡೆಸಲಾಗಿದೆ. ಅಲ್ಲದೆ, ಕೇಂದ್ರ ಹಣಕಾಸು ಸಚಿವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ.

Budget 2022: Chief Minister Basavaraj Bommai hold department wise meetings from Feb 9

ರಾಜ್ಯದ ವಿವಿಧ ಇಲಾಖೆಗಳ ಇಲಾಖೆಗಳ ಸಚಿವರು ಈಗಾಗಲೇ ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸುತ್ತಿದ್ದು, ಬಜೆಟ್‌ ಬೇಡಿಕೆ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದಾರೆ. ಈಗ ಮುಖ್ಯಮಂತ್ರಿಗಳು ಕರ್ನಾಟಕ ವಿದ್ಯುತ್ ನಿಗಮದ ಸಭಾಂಗಣದಲ್ಲಿ ಫೆ.9ರಿಂದ ಫೆ.25ರವರೆಗೆ ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದಾರೆ. ಪ್ರತಿ ನಿತ್ಯವೂ ಹಲವು ಇಲಾಖೆಗಳ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚಿಸಿ ಬೇಡಿಕೆ ಪಟ್ಟಿಯನ್ನು ಪಡೆಯಲಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.

ಫೆ.9, ಬುಧವಾರ

ಕಂದಾಯ, ಉನ್ನತ ಶಿಕ್ಷಣ, ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತ ಉದ್ಯಮಶೀಲತೆ, ಲೋಕೋಪಯೋಗಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು.

ಫೆ.10, ಗುರುವಾರ

ಕೈಮಗ್ಗ ಮತ್ತು ಜವಳಿ, ಸಕ್ಕರೆ, ಕೃಷಿ, ಕಾರ್ಮಿಕ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ (ಇ-ಆಡಳಿತ) ಇಲಾಖೆ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ, ಪೌರಾಡಳಿತ, ನಗರಾಭಿವೃದ್ಧಿ, ಸಾರಿಗೆ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ,

ಫೆ.11, ಶುಕ್ರವಾರ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಕಾಲ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಹಕಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ, ಮುರಾಯಿ, ಹಜ್ ಮತ್ತು ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ, ಸಾಂಖ್ಯಿಕ ಮತ್ತು ಕಾರ್ಯಕ್ರಮ ಸಂಯೋಜನೆ, ತೋಟಗಾರಿಕೆ.

ಫೆ.14, ಸೋಮವಾರ

ವಸತಿ, ಮೂಲಸೌಕರ್ಯ ಅಭಿವೃದ್ಧಿ, ನಗರಾಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ, ಪಶುಸಂಗೋಪನೆ.

ಫೆ.15, ಮಂಗಳವಾರ

ಗೃಹ, ಜಲಸಂಪನ್ಮೂಲ, ಆಹಾರ ಮತ್ತು ನಾಗರಿಕ ಸರಬರಾಜು, ಅರಣ್ಯ, ಪರಿಸರ ಜೀವಿಶಾಸ್ತ್ರ, ಪ್ರವಾಸೋದ್ಯಮ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ.

ಫೆ.21, ಸೋಮವಾರ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ.

ಫೆ.22, ಮಂಗಳವಾರ

ವಾಣಿಜ್ಯ ಸಂಘ ಸಂಸ್ಥೆಗಳು, ಸಾರಿಗೆ ಸಂಘ ಸಂಸ್ಥೆಗಳು, ಅಬಕಾರಿ ಸಂಘ ಸಂಸ್ಥೆಗಳು, ಭೂಮಾರುಕಟ್ಟೆ ಸಂಘ ಸಂಸ್ಥೆಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳು- ವಿಧಾನಸೌಧದ ಸಮ್ಮೇಳನ ಸಭಾಂಗಣ
ಫೆ.25, ಶುಕ್ರವಾರ

ವಾಣಿಜ್ಯ ತೆರಿಗೆಗಳು, ಅಬಕಾರಿ, ಸಾರಿಗೆ, ಮುದ್ರಾಂಕ, ಗಣಿ ಮತ್ತು ಭೂ ವಿಜ್ಞಾನ.

Recommended Video

      ಧರ್ಮ ಪಾಲಿಸುವುದು ತಪ್ಪಲ್ಲ, ಹಿಜಾಬ್ ಪರ ನಿಂತ ಡಿಕೆ ಶಿವಕುಮಾರ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+