ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಜಿಟಲ್ ಕಲಿಕೆ, ಕೌಶಲ್ಯ, ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್: ಅಶ್ವತ್ಥನಾರಾಯಣ

|
Google Oneindia Kannada News

ಬೆಂಗಳೂರು, ಫೆ,1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕೆಗೆ ತೊಂದರೆಯಾಗಬಾರದು ಎಂಬ ಹಿನ್ನೆಲೆಯಲ್ಲಿ ಒಂದು ತರಗತಿ, ಒಂದು ಟಿವಿ ಚಾನೆಲ್' ಘೋಷಣೆಯಡಿ 200 ಟಿವಿ ವಾಹಿನಿಗಳಿಗೆ ಅವಕಾಶ ನೀಡಿರುವುದು ಸಮಕಾಲೀನ ಜಾಗತಿಕ ಅಗತ್ಯಗಳಿಗೆ ತಕ್ಕಂತೆ ಕೈಗೊಂಡಿರುವ ಕ್ರಮವಾಗಿದೆ. ಇದರಿಂದ ಮಕ್ಕಳಿಗೆ ಯಾವುದೇ ಅಡೆತಡೆಯಿಲ್ಲದೆ ವಿಶ್ವ ಗುಣಮಟ್ಟದ ಶಿಕ್ಷಣವನ್ನು ಒದಗಿಸಬಹುದು. ಇದು ಎನ್ಇಪಿ ಆಶಯಗಳಿಗೆ ತಕ್ಕಂತಿದೆ ಎಂದಿದ್ದಾರೆ.

ಜತೆಗೆ, ಕೌಶಲ್ಯಗಳ ಪೂರೈಕೆ ಮತ್ತು ಅವುಗಳ ಸಮರ್ಪಕ ಜಾರಿಗೆ ದೇಶ್ ಇ-ಪೋರ್ಟಲ್ ಸ್ಥಾಪನೆ, ಆನ್ಲೈನ್ ಶಿಕ್ಷಣ ಕಾರ್ಯಕ್ರಮಗಳು, ಡಿಜಿಟಲ್ ವಿಶ್ವವಿದ್ಯಾಲಯದ ಸ್ಥಾಪನೆ, ಎವಿಜಿಸಿ ಕಾರ್ಯಪಡೆ ಸ್ಥಾಪನೆ ಮತ್ತು ಸಂಶೋಧನೆ ಹಾಗೂ ನಾವೀನ್ಯತೆಗೆ ಆದ್ಯತೆ ಕೊಟ್ಟಿರುವುದು ಸ್ವಾಗತಾರ್ಹವಾಗಿದೆ ಎಂದು ಅವರು ಹೇಳಿದ್ದಾರೆ.

Budget 2022 Reactions: Budget with emphasis on digital learning, skills and innovation: Ashwatthanarayana

ಇದಲ್ಲದೆ, ಬ್ಲಾಕ್ ಚೈನ್ ತಂತ್ರಜ್ಞಾನದ ಮೂಲಕ ಕ್ರಿಪ್ಟೋಕರೆನ್ಸಿ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡಿರುವುದಲ್ಲದೆ, ಡೀಪ್ ಟೆಕ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಯೋಜನೆಗಳನ್ನು ಘೋಷಿಸಿರುವುದರಿಂದ ಜನರ ಜೀವನ ಗುಣಮಟ್ಟ ಸುಧಾರಿಸುತ್ತದೆ. ಇದಕ್ಕೆ ಪೂರಕವಾಗಿ ಸುಗಮ ಜೀವನ' (ಈಸ್ ಆಫ್ ಲಿವಿಂಗ್) ಸಂಸ್ಕೃತಿಯನ್ನು ರೂಪಿಸಲು ಹೆಜ್ಜೆ ಇಡಲಾಗಿದೆ ಎಂದು ಅಶ್ವತ್ಥನಾರಾಯಣ ನುಡಿದಿದ್ದಾರೆ.

ರಾಜ್ಯಗಳನ್ನು ಅಭಿವೃದ್ಧಿಯ ಪಾಲುದಾರರನ್ನಾಗಿ ಮಾಡಿಕೊಳ್ಳುವ ಮೂಲಕ ನೂತನ ವಿಶೇಷ ಆರ್ಥಿಕ ವಲಯಗಳನ್ನು ಸ್ಥಾಪಿಸುವುದಾಗಿ ಪ್ರಕಟಿಸಿರುವುದರಿಂದ ಬಂಡವಾಳದ ಹರಿವು ನಿರಂತರವಾಗಿ ಇರಲಿದೆ. ಇದರಿಂದ 5 ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗ ಸೃಷ್ಟಿ ಕೂಡ ನನಸಾಗಲಿದೆ. ಹಾಗೆಯೇ, ಸ್ಟಾರ್ಟಪ್ ಗಳಿಗೆ ಸಾಲ ಸೌಲಭ್ಯವನ್ನು ಇನ್ನೂ ಒಂದು ವರ್ಷ ಕಾಲ ವಿಸ್ತರಿಸಿರುವುದರಿಂದ ರಾಜ್ಯದಲ್ಲಿ ಇನ್ನೂ ಸಾವಿರಾರು ನವೋದ್ಯಮಗಳು ರಾಜ್ಯದಲ್ಲಿ ನೆಲೆಯೂರಲು ಸಹಾಯವಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ:
ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ದೂರದೃಷ್ಠಿ ಬಜೆಟ್ ಆಗಿದ್ದು, ಕೈಗಾರಿಕಾ ಕ್ಷೇತ್ರ, ಮೂಲಭೂತ ಸೌಕರ್ಯ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಎಲ್ಲಾ ವರ್ಗದ ಜನರ ಜೀವನಮಟ್ಟ ಸುಧಾರಣೆಗೆ ಒತ್ತು ನೀಡಲಾಗಿರುವುದನ್ನು ಸ್ವಾಗತಿಸುತ್ತೇನೆ ಮಾನ್ಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಗ್ರಾಮೀಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜೆ.ಜೆ.ಎಂ. ಯೋಜನೆಗೆ 2021-22 ಸಾಲಿನಲ್ಲಿ 50 ಸಾವಿರ ಕೋಟಿ ಇದ್ದು, ಅದನ್ನು 2022-23ನೇ ಸಾಲಿನಲ್ಲಿ 60 ಸಾವಿರ ಕೋಟಿಗೆ ಏರಿಸಲಾಗಿದ್ದು, ಹೊಸದಾಗಿ 3.8 ಕೋಟಿ ಮನೆಗಳಿಗೆ ನಳದ ಮೂಲಕ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

English summary
Budget 2022 Reactions: Budget with emphasis on digital learning, skills and innovation: Ashwatthanarayana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X