ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2023: ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್-ನಳೀನ್‌ ಕುಮಾರ್‌ ಕಟೀಲ್‌

ಸಂಸತ್​​ನಲ್ಲಿ 2023-2024ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯಿಸಿದ್ದು, ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದ

|
Google Oneindia Kannada News

ಬೆಂಗಳೂರು ಫೆಬ್ರವರಿ 1: ಸಂಸತ್​​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. 2023-2024ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾದ ಯೋಜನೆಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯಿಸಿದ್ದಾರೆ.

ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೇಂದ್ರದ ನೂತನ ಬಜೆಟ್‍ನಲ್ಲಿ ಪ್ರಕಟಿಸಲಾಗಿದೆ. ಇದು ಕರ್ನಾಟಕ ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಹೊಂದಿದ ಬಜೆಟ್ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮೂಲ ಸೌಕರ್ಯ ಕ್ಷೇತ್ರದಲ್ಲಿ 10 ಲಕ್ಷ ರೂಪಾಯಿ ಕೋಟಿ ಬಂಡವಾಳ ಹೂಡಿಕೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡಿದ್ದು, ಮನೆಮನೆಗೆ ನಳ್ಳಿ ನೀರು (ಹರ್ ಘರ್ ಜಲ್) ಯೋಜನೆಯ ವೇಗವರ್ಧನೆಗೆ ಕಾರಣ ಆಗಲಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು ಎಂದಿದ್ದಾರೆ.

Budget 2023 Reactions : Nalin Kumar Kateel Reaction About Union Budget 2023-24

ಇನ್ನು ಕೇಂದ್ರ ಬಜೆಟ್‌ ಬಗ್ಗೆ ಟ್ವೀಟ್‌ ಮಾಡಿರುವ ನಳೀನ್‌ ಕುಮಾರ್‌ ಕಟೀಲ್‌, ಪಾರಂಪರಿಕ ಕರಕುಶಲಕರ್ಮಿಗಳಿಗೆ ನೆರವಾಗಲು ನರೇಂದ್ರ ಮೋದಿ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪಿಎಂ ವಿಶ್ವಕರ್ಮ ಕೌಶಲ ಸಮ್ಮಾನ್ ಯೋಜನೆಯಡಿ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳೊಂದಿಗೆ ಜೋಡಿಸಿ, ಕುಶಲಕರ್ಮಿಗಳ ಅರ್ಥಿಕ ಸ್ಥಿತಿಗತಿ ಸುಧಾರಿಸಲು ಕ್ರಮ ಕೈಗೊಂಡಿದೆ ಎಂದಿದ್ದಾರೆ.

ಕೋವಿಡ್ ನಂತರ ಭಾರತವು ತನ್ನ ಆರ್ಥಿಕತೆಯ ವೇಗದ ಬೆಳವಣಿಗೆಯಿಂದ ಜಗತ್ತಿನ ಗಮನ ಸೆಳೆದಿದೆ. ಈ ಬಜೆಟ್ ನಲ್ಲಿನರೇಂದ್ರ ಮೋದಿ ಸರ್ಕಾರವು ಸಪ್ತ ಸಂಕಲ್ಪ ಕೈಗೊಂಡಿದ್ದು ಭಾರತವು ಜಗದ್ವಂದ್ಯ ರಾಷ್ಟ್ರವಾಗಿ ಹೊರಹೊಮ್ಮುವ ನಿಟ್ಟಿನಲ್ಲಿ ದೇಶದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ಪೂರಕವಾಗಿದೆ. ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಅನುದಾನ, ಮಧ್ಯಮ ವರ್ಗದವರಿಗೆ ನೀಡಿರುವ ತೆರಿಗೆ ವಿನಾಯಿತಿ, ಯುವಶಕ್ತಿಗೆ ಉತ್ತೇಜನ, ಸಮಾಜದ ಕಟ್ಟಕಡೆಯವರನ್ನು ತಲುಪುವ ಬಗೆ ಮುಂತಾದ ಜನಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ ಎಂದು ನಳೀನ್‌ ಕುಮಾರ್‌ ಕಟೀಲ್ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

English summary
Budget 2023 Reactions : Here are all the Karnataka political leaders, Karnataka state BJP President Nalin Kumar Kateel Reaction About Union Budget 2023-24,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X