Liquor Price Hike: ಮದ್ಯಪ್ರಿಯರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ: ಮದ್ಯದ ದರ ಮತ್ತೆ ಹೆಚ್ಚಿಸಲು ನಿರ್ಧಾರ
ಬೆಂಗಳೂರು ಫೆಬ್ರವರಿ 16: ಸಿಎಂ ಸಿದ್ದರಾಮಯ್ಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿರುವರು. ಒಟ್ಟು 3,71, 383 ಕೋಟಿ ರೂ. ಮೊತ್ತದ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ವೇಳೆ ಮದ್ಯದ ದರ (Liquor Price Hike) ಮತ್ತೆ ಹೆಚ್ಚಿಸಲು ನಿರ್ಧಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೌದು.. ಬಿಯರ್ ಸೇರಿದಂತೆ ಎಲ್ಲಾ ಬ್ರ್ಯಾಂಡ್‌ಗಳ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ. ನೆರೆ ರಾಜ್ಯಗಳ ಮದ್ಯದ ಬೆಲೆ ಅನುಗುಣವಾಗಿ ಪರಿಷ್ಕರಣೆ ಮಾಡಲು ಯೋಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದರು. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ- ಸಿಎಂ
ಸರ್ಕಾರದ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ. ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಇವು ಪ್ರಮುಖ ಪಾತ್ರ ವಹಿಸಿವೆ. ಈ ಬಜೆಟ್‌ನಲ್ಲಿ ದುರ್ಬಲ ವರ್ಗದವರಿಗೆ ಮತ್ತಷ್ಟು ಆದ್ಯತೆ ನೀಡಲಾಗುವುದು. ಅಭಿವೃದ್ಧಿ ಪೂರಕವಾಗಿ ನಮ್ಮ ಬಜೆಟ್ ಆಗಿದೆ. ಗ್ಯಾರಂಟಿ ಯೋಜನೆ ಮೂಲಕ ಎಲ್ಲಾ ವರ್ಗದವರನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯ ನೀಡುವುದು ನಮ್ಮ ಆಶಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ 15ನೇ ಬಾರಿ ಬಜೆಟ್ ಮಂಡನೆ ವೇಳೆ ಹೇಳಿದರು.

ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ ಅಲ್ಲ: ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದು ಸಿದ್ದರಾಮಯ್ಯ ಹೇಳಿದರು.
ಸದನದಲ್ಲಿ ಸಿಎಂ ಸಿದ್ದರಾಮಯ್ಯ 15ನೇ ಆಯವ್ಯಯ ಮಂಡನೆ. ಶರಣಚಿಂತನೆಯನ್ನ ಓದಿ ಹೇಳಿದ ಸಿಎಂ, 'ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ' ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು.
15ನೇ ಬಜೆಟ್ ಮಂಡನೆ ಮಾಡುತ್ತಿದ್ದೇನೆ: ಸಿದ್ದರಾಮಯ್ಯ
ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ.












Click it and Unblock the Notifications