ಕೇಂದ್ರ ಬಜೆಟ್: ಚಾಂಪಿಯನ್‌ಗಳಿಗಾಗಿ 10 ಸಾವಿರ ಕೋಟಿ ರೂ.ಘೋಷಣೆ: ಬೊಮ್ಮಾಯಿ
ಬೆಂಗಳೂರು: ಭಾರತ ದೇಶವನ್ನು ವಿಶ್ವದ 3ನೇ ಆರ್ಥಿಕ ಶಕ್ತಿಯನ್ನಾಗಿ ಮಾಡುವ ಬಜೆಟ್ ಇದಾಗಿದೆ. ವಿಕಸಿತ ಭಾರತ ಕಟ್ಟುವಂತಹ ಅಭಿವೃದ್ದಿ ಶೀಲವಾಗಿರುವ ಮಾದರಿ ಮುಂಗಡ ಪತ್ರವನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಂದ್ರದ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ ಅವರು, ವಿಶ್ವದ ಎಲ್ಲ ರಾಷ್ಟ್ರಗಳು ಜಾಗತಿಕ ಆರ್ಥಿಕ ಸಂಕಷ್ಟದಲ್ಲಿರುವಾಗ ಭಾರತ ತನ್ನ ಆರ್ಥಿಕ ಪ್ರಗತಿಯನ್ನು ಮುಂದುವರೆಸಿಕೊಂಡು ಹೋಗುವಂತಹ ಅಭಿವೃದ್ಧಿ ಪರವಾದ ಬಜೆಟ್ ಮಂಡನೆ ಆಗಿದೆ. ನಾಗರಿಕರ ಸಾಮರ್ಥ್ಯವನ್ನು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಅಳವಡಿಸಲು ಯೋಜನೆಗಳನ್ನು ಹಲವಾರು ನೀತಿಗಳನ್ನು ಈ ಬಜೆಟ್ ನಲ್ಲಿ ಘೋಷಿಸಿದ್ದಾರೆ ಎಂದು ಬಣ್ಣಿಸಿದರು.

ಚಾಂಪಿಯನ್‌ಗಳಿಗಾಗಿ 10 ಸಾವಿರ ಕೋಟಿ ರೂ.
ಭವಿಷ್ಯದ ಚಾಂಪಿಯನ್ ಗಳಿಗಾಗಿ ಸುಮಾರು 10 ಸಾವಿರ ಕೋಟಿ ರೂ. ಆರ್ಥಿಕ ನೆರವು ಕೊಡುವಂತಹ ಯೋಜನೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಸ್ಥೀರಿಕರಣ ಮತ್ತು ಹಣದುಬ್ಬರ ನಿಯಂತ್ರಣ ಮಾಡುವುದು, ಜನರ ಆಶೋತ್ತರಗಳನ್ನು ಈಡೇರಿಸುವುದರ ಜೊತೆಗೆ 7.4 ಆರ್ಥಿಕ ಬೆಳವಣಿಗೆಯನ್ನು ಮುಂದುವರೆಸಿ ಎಲ್ಲ ಜನರನ್ನು ಒಳಗೊಂಡಿರುವ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನು ಮುಟ್ಟುವಂತಹ ಬಜೆಟ್ ಆಗಿದೆ ಎಂದು ಹೇಳಿದರು.
ಸಣ್ಣ ಕೈಗಾರಿಕೆಗೆ ವಿಶೇಷವಾದ ಒತ್ತು ಕೊಟ್ಟಿದ್ದಾರೆ. ಟೆಕ್ಸ್ ಟೈಲ್, ಚರ್ಮದ ಉತ್ಪನ್ನಗಳು, ಐಟಿ ಬಿಟಿ ಡಾಟಾ ಸೆಂಟರ್ ಗಳಿಗೆ ಬಹಳಷ್ಟು ಒತ್ತು ಕೊಟ್ಟಿದ್ದಾರೆ. ವಿಶೇಷವಾಗಿ ನಗರ ಮೂಲಸೌಕರ್ಯ ಕ್ಕೆ ಬಹಳ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಬಹಳಷ್ಟು ಒತ್ತು ಕೊಟ್ಟಿದೆ. ಸುಮಾರು 12.5 ಲಕ್ಷ ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ವಿವಿಧ ಯೋಜನೆಗಳಲ್ಲಿ ಹೂಡುತ್ತಿದೆ.
ವಿತ್ತೀಯ ಕೊರತೆ ನಿಯಂತ್ರಣ
ವಿತ್ತೀಯ ಕೊರತೆಯನ್ನು 4.3ಗೆ ನಿಯಂತ್ರಣ ಮಾಡಿರುವುದು ದೊಡ್ಡ ಸಾಧನೆ. ಮೂಲ ಸೌಕರ್ಯದಲ್ಲಿ ರಸ್ತೆ ಹೈ ಸ್ಪೀಡ್ ರೈಲುಗಳು, 20 ಜಲ ಸಾರಿಗೆ ಒತ್ತು ಕೊಟ್ಟಿರುವುದು ಸಾರಿಗೆಯಲ್ಲಿ ಹೊಸ ಆಯಾಮ ತೆರೆದಂತಾಗಿದೆ. ಅಭಿವೃದ್ಧಿ ಪಥದಲ್ಲಿ ಭಾರತವನ್ನು ಆರ್ಥಿಕವಾಗಿ ವಿಶ್ವದ ಮೂರನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ವಿಕಸಿತ ಭಾರತ ಕಟ್ಟುವಂತ ಅಭಿವೃದ್ದಿ ಶೀಲವಾಗಿರುವ ಮಾದರಿ ಬಜೆಟ್ ಮಂಡನೆ ಆಗಿದೆ.
ವಿದೇಶಗಳಿಂದ ಬರುವ ವಸ್ತುಗಳಿಗೆ ಸಂಪೂರ್ಣ ತೆರಿಗೆ ಉಚಿತ ಮಾಡಿದ್ದಾರೆ. ನಾಲ್ಕು ಕರ್ತವ್ಯ ಪಥ ಅಂತ ಹೇಳಿದ್ದಾರೆ. ಮೊದಲನೆಯದಾಗಿ ಆರ್ಥಿಕ ಬೆಳವಣಿಗೆ, ಎರಡನೇಯದು ಸಬ್ ಬೆ ಸಾಥ್ ಸಬ್ ಕೆ ವಿಕಾಸ್ ಎನ್ನುವ ತತ್ವದಲ್ಲಿ ಮಹಿಳೆಯರು, ಯುವಕರು ರೈತರಿಗೆ ಎಲ್ಲರನ್ನು ಒಳಗೊಂಡಿರುವ ಈ ಬಜೆಟ್ ಇದಾಗಿದೆ ಎಂದು ತಿಳಿಸಿದರು.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications