SSLC: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬಂಪರ್ ಗುಡ್‌ನ್ಯೂಸ್!
SSLC: ಎಸ್.ಎಸ್.ಎಲ್.ಸಿ ಪರೀಕ್ಷೆ - 1ರ ಫಲಿತಾಂಶಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ತಿಂಗಳಾಂತ್ಯದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಇದೀಗ ಇದರ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್‌ನ್ಯೂಸ್ ಅನ್ನು ರಾಜ್ಯ ಸರ್ಕಾರವು ನೀಡಿದೆ. ಅದೇನು ಎನ್ನುವ ವಿವರ ಇಲ್ಲಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳನ್ನು ನಿಗದಿ ಮಾಡಲಾಗಿದೆ. ಇದರಲ್ಲಿ ಮೊದಲ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅಂಕದಲ್ಲಿ ಏರುಪೇರಾದರೆ ನಿರಾಳತೆ ಅಥವಾ ಮಕ್ಕಳ ಮನೋಸ್ಥೈರ್ಯವನ್ನು ಕುಗ್ಗಿಸದಂತೆ ಕ್ರಮವೊಂದನ್ನು ಸರ್ಕಾರ ತೆಗೆದುಕೊಂಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಈ ಬಾರಿ ಬರೋಬ್ಬರಿ 8,96,447 ವಿದ್ಯಾರ್ಥಿಗಳು ಬರೆದಿದ್ದಾರೆ. ಆದರೆ ಈ ಹಿಂದೆ 2024ನೇ ಸಾಲಿನಲ್ಲಿ SSLC ಪರೀಕ್ಷೆಯ ಫಲಿತಾಂಶದಲ್ಲಿ ಕೆಲವೊಂದು ಗೊಂದಲಗಳು ಸೃಷ್ಟಿ ಆಗಿದ್ದವು. ಆ ಗೊಂದಲಗಳು ಈ ಬಾರಿಯೂ ಆಗದಂತೆ ರಾಜ್ಯ ಸರ್ಕಾರವು ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದರಲ್ಲಿ ಮುಖ್ಯವಾಗಿ 10ನೇ ತರತಗತಿಯ ವಿದ್ಯಾರ್ಥಿಗಳ ರಿಸಲ್ಟ್ ಮಾರ್ಕ್ಸ್ ಶೀಟ್‌ಗೆ ಸಂಬಂಧಿಸಿದ್ದಾಗಿದೆ.

10ನೇ ತರತಗತಿಯ ವಿದ್ಯಾರ್ಥಿಗಳು ಒಂದೊಮ್ಮೆ ಮೊದಲ ಪರೀಕ್ಷೆಯಲ್ಲಿ ಫೇಲ್ ಆಗಿದ್ದರೆ, ಅವರು ಡಿಜಿಟಲ್ ಮಾರ್ಕ್ಸ್ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವಾಗ ಈ ಹಿಂದೆ ಇದ್ದಂತಹ ಪದ್ಧತಿಯನ್ನು ಬದಲಾಯಿಸಲಾಗಿದೆ. ಫೇಲ್ ಎಂದು ಬಂದರೆ ಮಕ್ಕಳು ಮಾನಸಿಕವಾಗಿ ಧೈರ್ಯ ಕಳೆದುಕೊಳ್ಳಲಿದ್ದಾರೆ. ಹೀಗಾಗಿ ಅವರು ಮನೋಸ್ಥೈರ್ಯವನ್ನು ಕುಗ್ಗಿಸುವ 'ಫೇಲ್' ಎನ್ನುವ ಪದದ ಬದಲಾಗಿ, ಡಿಜಿಟಲ್ ಮಾರ್ಕ್ಸ್ ಕಾರ್ಡ್‌ಗಳಲ್ಲಿ "ಪೂರ್ಣಗೊಂಡಿಲ್ಲ" ಅಥವಾ "ಪ್ರಕ್ರಿಯೆ" ಎಂಬರ್ಥದ ಪದಗಳನ್ನು ಬಳಸುವುದಕ್ಕೆ ಉದ್ದೇಶಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಅವಕಾಶ: ಇನ್ನು ರಾಜ್ಯ ಸರ್ಕಾರವು 10ನೇ ತರತಗತಿಯ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಿದೆ. ಹೌದು 10ನೇ ತರತಗತಿಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಅನುತ್ತೀರ್ಣರಾದ (ಫೇಲ್)ರೆ, ಅವರಿಗೆ ಪರೀಕ್ಷೆ ಬರೆಯುವುದಕ್ಕೆ ಇನ್ನೆರಡು ಅವಕಾಶಗಳು ಇರಲಿವೆ. ಇದೇ ಕಾರಣಕ್ಕೆ ಡಿಜಿಟಲ್ ಮಾರ್ಕ್ಸ್ ಕಾರ್ಡ್‌ನಲ್ಲಿ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ.
ಮೂರು ಮಾದರಿ ಪರೀಕ್ಷೆಯಲ್ಲಿ ಇನ್ನೆರಡು ಅವಕಾಶಗಳು ಇರುವುದರಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಡಿಜಿಟಲ್ ಮಾರ್ಕ್ಸ್ ಕಾರ್ಡ್‌ನಲ್ಲಿ 2 ಮತ್ತು 3 ನೇ ಪರೀಕ್ಷೆಗಳು ಮುಕ್ತಾಯವಾಗುವ ವರೆಗೆ "ಪೂರ್ಣಗೊಂಡಿಲ್ಲ" ಎಂದು ನಮೂದಿಸಲು ನಿರ್ಧರಿಸಲಾಗಿದೆ. ಇದರಿಂದ ಫೇಲ್ ಆಗುವ ವಿದ್ಯಾರ್ಥಿಗಳು ಇನ್ನೆರಡು ಪರೀಕ್ಷೆಗಳನ್ನು ಅಥವಾ ಮುಂದೆ ಪ್ರಯತ್ನ ಮಾಡುವುದಕ್ಕೆ ಅನುಕೂಲವಾಗಲಿದೆ.
ಈ ವಿಷಯದ ಬಗ್ಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಮಕ್ಕಳು ಅನುತ್ತೀರ್ಣರಾಗಿದ್ದಾರೆ ಎಂದು ಹೇಳುವ ಮೂಲಕ ಅವರ ಭವಿಷ್ಯದ ಕನಸುಗಳನ್ನು ಹಾಳುಮಾಡುವುದು ಬೇಡ. ಅಲ್ಲದೇ "ಅನುತ್ತೀರ್ಣ" ಎನ್ನುವ ಪದವು ತುಂಬಾ ನಿರಾಶಾದಾಯಕವಾಗಿದೆ. ಸರ್ಕಾರವು ಮೂರು ಬಾರಿ ಪರೀಕ್ಷೆಗಳನ್ನು ಪರಿಚಯಿಸಿರುವ ಮುಖ್ಯ ಉದ್ದೇಶವೇ ವಿದ್ಯಾರ್ಥಿಗಳ ಆತ್ಮ ವಿಶ್ವಾಸವನ್ನು ಹೆಚ್ಚಿಸುವುದು. ಆದರೆ, ಮಾರ್ಕ್ಸ್ ಕಾರ್ಡ್‌ನಲ್ಲಿ ಫೇಲ್ ಎಂದು ನಮೂದಿಸುವುದರಲ್ಲಿ ಅರ್ಥವಿಲ್ಲ. ಹೀಗಾಗಿ, ಪೂರ್ಣಗೊಂಡಿಲ್ಲ ಎಂದು ಮುದ್ರಿಸಲು ಅಥವಾ ಉಲ್ಲೇಖಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
-
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications