ಹಿರಿಯೂರು ಬಳಿ ಬೀಕರ ಬಸ್ ಅಪಘಾತ: ಬೊಮ್ಮಾಯಿ, ಡಿಕೆಶಿ ಸೇರಿದಂತೆ ಗಣ್ಯರ ಸಂತಾಪ
ಬೆಂಗಳೂರು: ರಾಜಧಾನಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಸ್ಲೀಪರ್ ಬಸ್ ಚಿತ್ರದುರ್ಗದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಮೃತಪಟ್ಟಿದ್ದಾರೆ. ಬಸ್ ಸುಟ್ಟು ಕರಕಲಾಗಿದೆ. ಈ ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮೃತರಿಗೆ ಸಂತಾಪ ತಿಳಿಸಿ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಮಾಡಿದ್ದಾರೆ.
'ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ' ಎಂದು ಅವರು ಪ್ರಾರ್ಥಿಸಿದ್ದಾರೆ.

ಸ್ಥಳಕ್ಕೆ ಖುದ್ದು ಸಾರಿಗೆ ಆಯುಕ್ತರ ಭೇಟಿಗೆ ಸಚಿವರ ಸೂಚನೆ
ಈ ರಸ್ತೆ ಅಪಘಾತ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಖುದ್ದು ಸಾರಿಗೆ ಇಲಾಖೆ ಆಯುಕ್ತರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ ಅವರು ತಿಳಿಸಿದ್ದಾರೆ. 'ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್ಗೆ ಡಿಕ್ಕಿ ಹೊಡೆದಿರುವುದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಸಾರಿಗೆ ಆಯುಕ್ತರಾದ ಯೋಗೇಶ್ವರ್ ಹಾಗೂ ಸಹಾಯಕ ಆಯುಕ್ತರಾದ ಓಂಕಾರೇಶ್ವರಿ ಅವರು ಹೋಗುತ್ತಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗದ ಹಿರಿಯೂರು ಬಳಿ ಇಂದು ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ 11ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದನ್ನು ಕೇಳಿ ಅತ್ಯಂತ ದುಃಖವಾಯಿತು.
— Ramalinga Reddy (@RLR_BTM) December 25, 2025
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ರಸ್ತೆ ವಿಭಜಕವನ್ನು (median) ಹಾರಿ ಬಸ್ಗೆ ಡಿಕ್ಕಿ… pic.twitter.com/OmmTmqIuaf
ಭೀಕರ ರಸ್ತೆ ಅಪಘಾತ
ಬೆಂಗಳೂರಿನಿಂದ ಹೊರಟಿದ್ದ ಖಾಸಗಿ ಬಸ್ ಲಾರಿ ನಡುವೆ ಡಿಕ್ಕಿ ಆಗಿದೆ. ಈ ಘಟನ ಚಿತ್ರದುರ್ಗದ ಹಿರಿಯೂರಿನ ರಸ್ತೆ (NH 48) ಗೊರ್ಲತ್ತು ಕ್ರಾಸ್ ಬಳಿ ಇಂದು ಗುರುವಾರ ಬೆಳಗಿನ ಜಾವ ನಡೆದಿದೆ. ಘಟನೆಯನ್ನು ಸುಮಾರು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕ, ನಿರ್ವಾಹಕ ಸೇರಿ 30 ಮಂದಿ ಬಸ್ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಪೊಲೀಸರು, ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಅತ್ಯಂತ ದುಃಖಕರ: ಬೊಮ್ಮಾಯಿ ಸಂತಾಪ
ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಿತ್ರದುರ್ಗದ ಹಿರಿಯೂರಿನ ಬಳಿ ಅಪಘಾತಕ್ಕೆ ಒಳಗಾಗಿ ಅಗ್ನಿ ಅವಘಡ ಸಂಭವಿಸಿದ್ದು ಅದರಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಅತ್ಯಂತ ದುಃಖವಾಯಿತು.
ರಾಜ್ಯ ಸರ್ಕಾರವು ಮೃತಪಟ್ಟ ಕುಟುಂಬದವರಿಗೆ ಕೂಡಲೇ ಪರಿಹಾರ ಘೋಷಿಸಿಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ಆಗ್ರಹಿಸುತ್ತೇನೆ. ದೇವರು ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಗಾಯಾಳು ಗುಣಮುಖರಾಗಲಿ: ಆರ್.ಅಶೋಕ್
ಘಟನೆ ಸಂಬಂಧ ಸಂತಾಪ ಸೂಚಿಸಿರುವ ವಿಪಕ್ಷ ನಾಯಕ. ಆರ್.ಅಶೋಕ್ ಅವರು, 'ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಹಿರಿಯೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವರು ಸಜೀವ ದಹನಗೊಂಡಿರುವುದು ತಿಳಿದು ತೀವ್ರ ಆಘಾತವಾಗಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮೃತರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ. ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications