ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳವಿಲ್ಲ : ಡಿ.ಸಿ.ತಮ್ಮಣ್ಣ
ಬೆಂಗಳೂರು, ಜೂನ್ 20 : 'ಶೇ 15ರಷ್ಟು ಸರ್ಕಾರಿ ಬಸ್ ದರವನ್ನು ಹೆಚ್ಚಳ ಮಾಡಲು ಪ್ರಸ್ತಾವನೆ ಇದೆ. ಆದರೆ, ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವುದಿಲ್ಲ' ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಸಾರಿಗೆ ಸಚಿವರು ಪತ್ರಿಕಾಗೋಷ್ಠಿ ನಡೆಸಿದರು. 'ಪೆಟ್ರೋಲ್ ಮತ್ತು ಡೀಸೆಲ್ ದರದಗಳ ಏರಿಕೆ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳ ಪ್ರಯಾಣ ದರವನ್ನು ಹೆಚ್ಚಳ ಮಾಡಬೇಕು ಎಂಬ ಪ್ರಸ್ತಾವನೆ ಇದೆ. ಆದರೆ, ದರ ಏರಿಕೆ ಮಾಡುವುದಿಲ್ಲ' ಎಂದರು.

'ಶೇ 15ರಷ್ಟು ಪ್ರಯಾಣ ದರವನ್ನು ಹೆಚ್ಚಳ ಮಾಡಬೇಕು ಎಂಬ ಪ್ರಸ್ತಾವನೆ ಇದೆ. ಆದರೆ, ದರ ಏರಿಕೆ ಮಾಡುವುದಿಲ್ಲ. ಇದರಿಂದ 500 ಕೋಟಿ ನಷ್ಟ ಉಂಟಾಗಲಿದೆ' ಎಂದು ಸಚಿವರು ವಿವರಿಸಿದರು.
'ಬಸ್ ನಿಲ್ದಾಣವನ್ನು ವಾಣಿಜ್ಯೀಕರಿಸುವ ಉದ್ದೇಶವಿದೆ. ಇದರಿಂದ 100 ರಿಂದ 200 ಕೋಟಿಯಷ್ಟು ಆದಾಯ ಸಂಸ್ಥೆಗೆ ಬರುತ್ತದೆ. ಈ ಕುರಿತು ಅಧಿಕಾರಿಗಳ ಜೊತೆಗೂ ಮಾತುಕತೆ ನಡೆಸಲಾಗಿದೆ' ಎಂದು ಸಚಿವರು ಹೇಳಿದರು.
'ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ. 16.62 ಲಕ್ಷ ವಿದ್ಯಾರ್ಥಿಗಳು ಇದರ ಉಪಯೋಗ ಪಡೆಯಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಶೀಘ್ರದಲ್ಲೇ ನಿರ್ಧಾರವನ್ನು ಪ್ರಕಟಿಸಲಿದ್ದಾರೆ' ಎಂದರು.












Click it and Unblock the Notifications