Bus Ticket Price: ಕರ್ನಾಟಕದಲ್ಲಿ ಖಾಸಗಿ ಬಸ್‌ಗಳ ಟಿಕೆಟ್ ಬೆಲೆಯೂ ಹೆಚ್ಚಳಕ್ಕೆ ಪ್ಲಾನ್!

ಕರ್ನಾಟಕದಲ್ಲಿ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್‌ ಎದುರಾಗಿದೆ. ರಾಜ್ಯದಲ್ಲಿ ದಿನವೂ ಒಂದಿಲ್ಲೊಂದು ಬೆಲೆ ಏರಿಕೆಯಾಗುತ್ತಿದೆ. ರಾಜ್ಯ ಸರ್ಕಾರವೇ ಬಸ್‌ ಟಿಕೆಟ್ ಬೆಲೆ ಹೆಚ್ಚಳ ಮಾಡಿದ ಮೇಲೆ ಇದೀಗ ಖಾಸಗಿ ಬಸ್‌ಗಳು ಸಹ ಟಿಕೆಟ್ ಬೆಲೆ ಹೆಚ್ಚಳ ಮಾಡುವುದಕ್ಕೆ ಮುಂದಾಗಿವೆ. ರಾಜ್ಯದಲ್ಲಿ ಸಾರಿಗೆ ಇಲಾಖೆಯ ಬಸ್‌ಗಳ ಪ್ರಯಾಣ ಬೆಲೆಯು ಶೇ15 ರಷ್ಟು ಹೆಚ್ಚಳ ಮಾಡಲಾಗಿದೆ. ಕರ್ನಾಟಕದಲ್ಲಿ ಇದೀಗ ಖಾಸಗಿ ಬಸ್‌ಗಳ ಬೆಲೆಯೂ ಹೆಚ್ಚಳವಾಗುವ ಮುನ್ಸೂಚನೆ ಸಿಕ್ಕಿದೆ. ಸರ್ಕಾರ ಬೆಲೆ ಏರಿಕೆ ಮಾಡಿದ ಮೇಲೆ ಖಾಸಗಿ ಬಸ್‌ಗಳ ಮಾಲೀಕರು ಸಹ ಇದೀಗ ಬಸ್‌ಗಳ ಪ್ರಯಾಣ ಬೆಲೆ ಹೆಚ್ಚಿಸುವುದಕ್ಕೆ ಮುಂದಾಗಿದ್ದು. ಪ್ರಯಾಣಿಕರಿಗೆ ಶಾಕ್‌ ಎದುರಾಗಿದೆ.

ಕರ್ನಾಟಕದಲ್ಲಿ ಬಸ್‌ ದರ ಏರಿಕೆ ಮಾಡಿರುವುದಕ್ಕೆ ಈಗಾಗಲೇ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರವು ಬಸ್‌ಗಳಲ್ಲಿ ಪುರುಷರಿಗೆ ಪ್ರಯಾಣ ಟಿಕೆಟ್ ಬೆಲೆಯನ್ನು ಹೆಚ್ಚಿಸಿದೆ. ಇದರ ಬೆನ್ನಲ್ಲೇ ಖಾಸಗಿ ಬಸ್‌ಗಳ ಮಾಲೀಕರು ಸಹ ಟಿಕೆಟ್‌ ಬೆಲೆ ಹೆಚ್ಚಿಸುವುದಕ್ಕೆ ಮುಂದಾಗಿದ್ದಾರೆ. ಕರ್ನಾಟಕದ ದಕ್ಷಿಣ ಭಾಗದ ಪ್ರಮುಖ ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳ ಸಂಚಾರ ಹೆಚ್ಚಾಗಿದೆ. ಸಾರ್ಜಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈಗ ಸಂಕಷ್ಟ ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯ ಅಂತ ಹೇಳಲಾಗಿದೆ.

Bus Ticket Price Private Bus Ticket prices also planned to increase

ಶಕ್ತಿ ಯೋಜನೆಯಿಂದ ಸಂಕಷ್ಟ: ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು ಜಾರಿ ಮಾಡಿರುವ ಶಕ್ತಿ ಯೋಜನೆಯಿಂದ ಸಂಕಷ್ಟ ಎದುರಾಗಿದೆ ಎಂದು ಖಾಸಗಿ ಬಸ್‌ಗಳ ಮಾಲೀಕರು ಹೇಳಿದ್ದಾರೆ. ಕರ್ನಾಟಕದಲ್ಲಿ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಕೋವಿಡ್‌ ಸಮಯದಲ್ಲಿ ಸಾಕಷ್ಟು ಸಮಸ್ಯೆ ಆಗಿತ್ತು. ಇದಾದ ಮೇಲೆ ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯನ್ನು ಜಾರಿ ಮಾಡಿತ್ತು. ಇದರಿಂದ ಖಾಸಗಿ ಬಸ್‌ಗಳ ಮಾಲೀಕರಿಗೆ ಗಾಯದ ಮೇಲೆ ಬರೆ ಎಳೆದ ಪರಿಸ್ಥಿತಿ ಆಗಿದೆ.

ರಾಜ್ಯ ಸರ್ಕಾರಕ್ಕೆ ಪತ್ರ: ಕರ್ನಾಟಕದಲ್ಲಿ ಖಾಸಗಿ ಬಸ್ ಉದ್ಯಮ ಉಳಿಸುವ ಉದ್ದೇಶದಿಂದ ಇದೀಗ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲೂ ಟಿಕೆಟ್‌ ಬೆಲೆ ಜಾಸ್ತಿ ಮಾಡುವುದಕ್ಕೆ ಅವಕಾಶ ಕೊಡಬೇಕು ಎಂದು ಖಾಸಗಿ ಬಸ್‌ಗಳ ಮಾಲೀಕರು ಇದೀಗ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬಸ್‌ಗಳ ಬಿಡಿ ಭಾಗ ಹೆಚ್ಚಳವಾಗಿದೆ. ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆಯಲಾಗಿದೆ.

ಸಾರ್ವಜನಿಕರಿಗೆ ಸಂಕಷ್ಟ: ರಾಜ್ಯದಲ್ಲಿ ಸರ್ಕಾರಿ ಬಸ್‌ ಬೆಲೆ ಏರಿಕೆ ಸಂಕಷ್ಟ ತಂದಿದೆ. ಇದೀಗ ಖಾಸಗಿ ಬಸ್‌ಗಳಲ್ಲೂ ಬೆಲೆ ಏರಿಕೆ ಮಾಡಿದರೆ ಜನ ಪರದಾಡುವಂತಾಗಲಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜನ ಖಾಸಗಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಖಾಸಗಿ ಬಸ್‌ಗಳಲ್ಲೂ ಪ್ರಯಾಣ ದರ ಹೆಚ್ಚಳ ಮಾಡಿದರೆ, ಪುರುಷ ಹಾಗೂ ಮಹಿಳಾ ಪ್ರಯಾಣಿಕರಿಬ್ಬರಿಗೂ ಬೆಲೆ ಏರಿಕೆಯ ಶಾಕ್‌ ಆಗಲಿದೆ. ರಾಜ್ಯದ ಕೆಲವು ಭಾಗದಲ್ಲಿ ಸರ್ಕಾರಿ ಬಸ್‌ಗಳು ಸಂಚಾರ ಇಲ್ಲದ ಕಡೆ ಅಥವಾ ಒಳ ರಸ್ತೆಗಳಲ್ಲಿ ಖಾಸಗಿ ಬಸ್‌ ಸಂಚಾರ ಸೇವೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+