CJ Roy Death: ಉದ್ಯಮಿ ರಾಯ್ ಆತ್ಮಹತ್ಯೆ ಬಗ್ಗೆ ತನಿಖೆ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?
ರಾಮನಗರ: ಐಟಿ ದಾಳಿ ವೇಳೆ ಉದ್ಯಮಿ ಸಿ.ಜೆ. ರಾಯ್ಆ ತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಕಚೇರಿಯಲ್ಲಿ ಗನ್‌ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.
ಕನಕೋತ್ಸವದ ವೇಳೆ ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಅಧಿಕಾರಿಗಳು ಅನೇಕ ಪ್ರಶ್ನೆ ಕೇಳುವಾಗ, ಐದು ನಿಮಿಷ ಸಮಯ ನೀಡಿ ಎಂದು ಹೇಳಿ ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇರಳದಿಂದ ವಿಚಾರಣೆಗೆ ಒಂದು ತಂಡ ಬಂದಿತ್ತು ಎಂಬ ಮಾಹಿತಿ ಇದೆ. ಈ ಬಗ್ಗೆ ದೆಹಲಿಯಿಂದಲೂ ವರದಿ ಕೇಳಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ರಾಯ್ ಅವರು ಒಳ್ಳೆಯ ಉದ್ಯಮಿಗಳಾಗಿದ್ದರು, ಈ ರೀತಿ ಆಗಬಾರದಿತ್ತು ಎಂದು ಹೇಳಿದರು.

ಆಧಾರರಹಿತ ಪೋಸ್ಟ್ ಮಾಡಿರುವ ಬಿಜೆಪಿ ವಿರುದ್ದ ಕೆಪಿಸಿಸಿಯಿಂದ ದೂರು ನೀಡಿರುವ ಬಗ್ಗೆ ಮಾತನಾಡಿ, ವಿಪಕ್ಷಗಳು ನಮ್ಮನ್ನು, ನಾವು ವಿಪಕ್ಷಗಳನ್ನು ಟೀಕೆ ಮಾಡುವುದು ಸ್ವೀಕಾರರ್ಹ. ಆದರೆ ಎಲ್ಲದಕ್ಕೂ ಒಂದು ಮಿತಿ ಎಂಬುದು ಇರುತ್ತದೆ. ವಿಪಕ್ಷಗಳು ಈ ದೇಶದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ನಾವು ಸಹ ನಮ್ಮ ಪಕ್ಷದವರಿಗೆ ಕಾನೂನಿಗೆ ವಿರುದ್ಧವಾಗಿ ಯಾವುದೇ ಟೀಕೆ ಮಾಡಬೇಡಿ ಎಂದು ಸಂದೇಶ ನೀಡಿದ್ದೇನೆ. ಯಾವುದೇ ಪಕ್ಷ ಅಥವಾ ವ್ಯಕ್ತಿ ತನಗೆ ಇರುವ ಸ್ವಾತಂತ್ರ್ಯವನ್ನು ಹೀಗೆ ದುರುಪಯೋಗ ಮಾಡಿಕೊಳ್ಳಬಾರದು. ಅದಕ್ಕೆ ಕಾನೂನು ಕ್ರಮದ ಮೊರೆ ಹೋಗಬೇಕಾಯಿತು. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕಾಂಗ್ರೆಸ್ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಉತ್ತರಿಸಿದ್ದು, ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ ಎಂದರು.
ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಮಾತನಾಡಿ, ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ.
ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್ ಕಾರ್ಡ್ ಹೊಂದಿರುವವರಿಗೂ ನಷ್ಟ ಎಂದರು.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications