BWSSB Recruitment: ನೇಮಕಾತಿ ಲಿಖಿತ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ...KEA
KEA Recruitment 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಹಿಂದೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಅದೇ ರೀತಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB Recruitment 2025) ಸಂಬಂಧಿಸಿದ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ನಡೆಸುವ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಆಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.
BWSSB ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮ್ಯಾಕಾನಿಕಲ್ ವಿಭಾಗದ ಕಿರಿಯ ಎಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಅಭ್ಯರ್ಥಿಗಳಿಗೆ ಇದೇ ಡಿಸೆಂಬರ್ 20ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಡಿಸೆಂಬರ್ 22ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು. ನ.19ರಂದು ಹೊರಡಿಸಿದ ಆದೇಶದಂತೆ ಇತರ ಎಲ್ಲ ಪರೀಕ್ಷೆಗಳು ಈ ಮೊದಲು ತಿಳಿಸಿದ್ದ ಆಯಾ ದಿನಾಂಕಗಳಂದೇ ನಡೆಯಲಿವೆ. ಆ ವೇಳಾಪಟ್ಟಿಯಲ್ಲಿ ಯಾವ ಬದಲಾವಣೆಗಳು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಜಲಮಂಡಳಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಗಳು ಡಿಸೆಂಬರ್ 20 ಮತ್ತು 22ರಂದು ಕೇವಲ ಬೆಂಗಳೂರು ನಗರದಲ್ಲಿ ಮಾತ್ರ ನಡೆಸಲಾಗುತ್ತದೆ. ಅಭ್ಯರ್ಥಿಗಳು ದಿನಾಂಕ ಗಮನಿಸಬೇಕು. ಅಂದು ಬೆಳಗ್ಗೆ 10.30ರಿಂದ 12.30ರವರೆಗೆ ಒಟ್ಟು 100ಅಂಕಗಳ ಪರೀಕ್ಷೆ ನಡೆಯಲಿದೆ.
PGNEET: ಅಭ್ಯರ್ಥಿಗಳ ದಾಖಲೆ ಪರಿಶೀಲನೆ
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ -ಸ್ನಾತಕೋತ್ತರ (PGNEET) 2025 ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಅರ್ಹರಾಗಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯಲಿದೆ. ಇದೇ ಡಿಸೆಂಬರ್ 10ರಿಂದ 19ರವರೆಗೆ ತಮ್ಮ ಮೂಲ ದಾಖಲೆಗಳನ್ನು ಬೆಂಗಳೂರಿನ ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ಸಲ್ಲಿಸುವಂತೆ ತಿಳಿಸಲಾಗಿದೆ.
ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಆಯ್ಕೆ- 2 ಮತ್ತು 3 ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳು ಡಿಸೆಂಬರ್ 10ರಿಂದ 12ರವರೆಗೆ ದಾಖಲಿಸಲು ಕೆಇಎ ಕಚೇರಿಗೆ ಬರಬೇಕು. ಈವರೆಗೂ ಸೀಟು ಹಂಚಿಕೆ ಆಗದಿರುವವರು ಡಿಸೆಂಬರ್ 13ರಿಂದ 19ರವರೆಗೆ ದಾಖಲೆ ಸಲ್ಲಿಸಬೇಕು. ಪಿಜಿ ನೀಟ್ ರ್ಯಾಂಕ್ ಪ್ರಕಾರ ವೇಳಾಪಟ್ಟಿಯನ್ನು ಅಧಿಕೃತ ಜಾಲತಾಣದಲ್ಲಿ (https://cetonline.karnataka.gov.in/kea/bscbpt21) ಪ್ರಕಟಿಸಲಾಗಿದೆ. ವೇಳಾಪಟ್ಟಿ ಪ್ರಕಾರ ಬಂದು ದಾಖಲೆ ಸಲ್ಲಿಸಬೇಕು. ದಾಖಲೆ ಸಲ್ಲಿಸಿದವರನ್ನು ಮಾತ್ರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಈ ಮೇಲಿನ ಲಿಂಕ್ ಮೂಲಕ ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸುವಂತೆ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications