• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

1 ಲೋಕಸಭೆ, 2 ವಿಧಾನಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

|

ಬೆಂಗಳೂರು, ಮಾರ್ಚ್ 25: ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.

ದಿ.ಸುರೇಶ್ ಅಂಗಡಿ ಸಾವಿನಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅವರ ಪತ್ನಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

ಇನ್ನು ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಶರಣು ಸಲಗಾರ್ ಎಂಬ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಅದೇ ರೀತಿ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಮೇ 2ರಂದು ಉಪ ಚುನಾವಣೆಗಳ ಫಲಿತಾಂಶ ಪ್ರಕಟಗೊಳ್ಳಲಿದೆ.

English summary
The BJP has released its list of candidates for the by-election of the Belagavi Lok Sabha constituency and the two assembly constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X