Get Updates
Get notified of breaking news, exclusive insights, and must-see stories!

Karnataka By-election 2024: ವೈರಲ್ ಆಗಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ನಕಲಿ: ಕೆಪಿಸಿಸಿ ಸ್ಪಷ್ಟನೆ

Karnataka By-election 2024: ಉಚಚುನಾವಣೆ ಹಿನ್ನೆಲೆ ಈಗಾಗಲೇ ಬಿಜೆಪಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾಂವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನು ಇಂದು (ಅಕ್ಟೋಬರ್ 23) ಕಾಂಗ್ರೆಸ್‌ ಬಿಡುಗಡೆ ಮಾಡಿದೆ ಎನ್ನಲಾದ ಅಭ್ಯರ್ಥಿಗಳ ಪಟ್ಟಿ ನಕಲಿ ಎಂದು ಕೆಪಿಸಿಸಿ ಸ್ಪಷ್ಟನೆ ನೀಡಿದೆ.

ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ಆದೇಶ ಕಾಪಿಯೊಂದು ವೈರಲ್ ಆಗಿತ್ತು. ಆದರೇ ಅದು ನಕಲಿ ಎಂಬುದಾಗಿ ಕೆಪಿಸಿಸಿ ಸ್ಪಷ್ಟಪಡಿಸಿದೆ. ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ.ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ್ದಾರೆ ಎನ್ನಲಾದಂತಹ ಕರ್ನಾಟಕ ವಿಧಾನಸಭೆಯ 3 ಉಪ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

By-election 2024 Viral Congress Candidate List is Fake KPCC Clarification

ಅದರಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ.ಯೋಗೇಶ್ವರ್‌ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಣೆ ಮಾಡಲಾಗಿದೆ ಎಂದು ಹೇಳಲಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವಂತಹ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು, ವೈರಲ್ ಆಗಿರುವಂತ ಪಟ್ಟಿಯು ನಕಲಿ ಆಗಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಗಳಿಗೆ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಬೊಮ್ಮಾಯಿ ಪುತ್ರನಿಗೆ ಬಿಜೆಪಿ ಟಿಕೆಟ್: ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಮಗನಿಗೆ ಟಿಕೆಟ್‌ ನೀಡುವ ಮೂಲಕ ಕುಟುಂಬ ರಾಜಕೀಯಕ್ಕೆ ಮತ್ತೆ ಬಿಜೆಪಿ ಮಣೆ ಹಾಕಿದೆ.

ಉಪಚುನಾವಣೆ ಹಿನ್ನೆಲೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದು, ಭರತ್ ಬೊಮ್ಮಾಯಿ ಅವರನ್ನು ಶಿಗ್ಗಾವಿ ಹಾಗೂ ಬಂಗಾರು ಹನುಮಂತುಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಆದರೆ, ಚನ್ನಪಟ್ಟಣಕ್ಕೆ ಅಭ್ಯರ್ಥಿ ಹೆಸರನ್ನು ಇನ್ನೂ ಘೋಷಣೆ ಆಗಿಲ್ಲ.

ಇನ್ನು ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡುವ ವಿಚಾರವಾಗಿ ಬಿಜೆಪಿಯಲ್ಲಿ ಅಪಸ್ವರ ಕೇಳಿಬಂದಿತ್ತು. ತಂದೆ-ಮಕ್ಕಳಿಗೆ ಟಿಕೆಟ್ ಕೊಟ್ಟರೆ ಹೇಗೆ ಎಂಬು ಬಿಜೆಪಿಯ ನಾಯಕರೇ ಪ್ರಶ್ನಿಸಿದ್ದರು. ಆದರೆ, ಇದೀಗ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ.

ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ, ಈ ತುಕಾರಾಂ ರಾಜೀನಾಮೆಯಿಂದ ಸಂಡೂರು ಕ್ಷೇತ್ರ ತೆರವಾಗಿತ್ತು. ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕರಾಗಿದ್ದರು. ಅವರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಆದರೆ, ಟಿಕೆಟ್ ಯಾರಿಗೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಇನ್ನು ಬಿಜೆಪಿಯು ಬೊಮ್ಮಾಯಿ ಮಗನಿಗೆ ಟಿಕೆಟ್ ನೀಡಿ ಕುಟುಂಬ ರಾಜಕೀಯಕ್ಕೆ ಮತ್ತೆ ಮಣೆ ಹಾಕಿದೆ.

ಮೂರು ಕ್ಷೇತ್ರಗಳಿಗೂ ನವೆಂಬರ್‌ 13ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟ ಆಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+