ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: ದಾವಣಗೆರೆಯಲ್ಲಿ ಸಿಎಂ ಮ್ಯಾರಥಾನ್ ಸಭೆ

|
Google Oneindia Kannada News

ಬೆಂಗಳೂರು, ಅ.12: ದಾವಣಗೆರೆ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪ ಚುನಾವಣೆ ಸಂಬಂಧ ಸೋಮವಾರ ತಡರಾತ್ರಿವರೆಗೂ ಸಭೆಗಳನ್ನು ನಡೆಸಿದರು.

ಉಪಚುನಾವಣೆಯನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಬಸವರಾಜ ಬೊಮ್ಮಾಯಿ ಅವರು ಚುನಾವಣೆಯಲ್ಲಿ ನಡೆಸಬೇಕಾದ ಕಾರ್ಯಕತಂತ್ರಗಳ ಕುರಿತು ಚರ್ಚೆ ನಡೆಸಿದರು. ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಸಚಿವರಾದ ಬಿ.ಸಿ. ಪಾಟೀಲ, ಸುನೀಲ್ ಕುಮಾರ್, ಮುನಿರತ್ನ ಸಹಿತ ಹಲವು ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಂಗಳವಾರ ಬೆಳಿಗ್ಗೆಯೂ ಸಹ ಹಾವೇರಿ ಜಿಲ್ಲೆಯ ಹಾನಗಲ್ ಉಪಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಪ್ರಮುಖರೊಂದಿಗೆ ಮತ್ತು ಸಿಂಧಗಿ ಉಪಚುನಾವಣೆಗೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಪ್ರಮುಖರೊಂದಿಗೂ ಸಭೆಗಳು ನಡೆಯಲಿವೆ. ಮಧ್ಯಾಹ್ನದ ನಂತರ ಮುಖ್ಯಮಂತ್ರಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

By-election: CM Marathon meeting in Davanagere

ಕೇಂದ್ರದ ನಾಯಕರು ಬರುವುದಿಲ್ಲ

ಸೋಮವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಎಂ. ಸಿದ್ದೇಶ್ವರ, "ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಳ್ಳುತ್ತಾರೆ. ಎರಡೂ ಕ್ಷೇತ್ರಗಳಲ್ಲಿಯೂ ಪ್ರಚಾರ ನಡೆಸಲಿದ್ದಾರೆ. ಆದರೆ, ಕೇಂದ್ರದ ಯಾವುದೇ ನಾಯಕರು ಬರುವ ಸಾಧ್ಯತೆ ಇಲ್ಲ" ಎಂದು ಹೇಳಿದರು.

ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಪ್ರಚಾರ ಕಾರ್ಯ ಮಾಡಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿಯೂ ಸಹ ಬಿಜೆಪಿಯ ಸಂಘಟನೆ ಗಟ್ಟಿಯಾಗಿದೆ. ಹಾನಗಲ್ ಮತ್ತು ಸಿಂಧಗಿ ಎರಡೂ ಕ್ಷೇತ್ರಗಳನ್ನು ಬಿಜೆಪಿಯೇ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ. ಎಲ್ಲ ನಾಯಕರು ಒಗ್ಗಟ್ಟಾಗಿ ಪಕ್ಷಕ್ಕೆ ಗೆಲುವುದು ತಂದುಕೊಡಲಿದ್ದಾರೆ ಎಂದು ಹೇಳಿದರು.

ಸಚಿವ ಬಿ.ಸಿ. ಪಾಟೀಲ ಮಾತನಾಡಿ, "ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಅವರನ್ನು ಯಾರೂ ಮುಖ್ಯಮಂತ್ರಿ ಕುರ್ಚಿಯಿಂದ ಇಳಿಸಿಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎಂದು ಅವರೇ ಅಧಿಕಾರ ತ್ಯಾಗ ಮಾಡಿದ್ದಾರೆ. ಅಲ್ಲದೆ, ಅವರು ಹೇಳಿದಂತಹ ವ್ಯಕ್ತಿ ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಜೊತೆಗೆ ಲಿಂಗಾಯತ ಸಮುದಾಯದವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ" ಎಂದು ಹೇಳಿದರು.

ಯಡಿಯೂರಪ್ಪ ಅವರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಾರೆ. ಹಾನಗಲ್ ಮತ್ತು ಸಿಂಧಗಿ ಎರಡೂ ಕ್ಷೇತ್ರಗಳಲ್ಲಿಯೂ ಮತಪ್ರಚಾರ ಮಾಡುತ್ತಾರೆ. ಅಲ್ಲದೆ, ಅವರ ಮಗ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನೂ ಸಹ ಹಾನಗಲ್ ಉಪಚುನಾವಣಾ ಉಸ್ತುವಾರಿ ನೀಡಲಾಗಿದೆ ಎಂದು ಹೇಳಿದರು.

"ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಉಪಚುನಾವಣೆಯ ಮೇಲೆ ಯಾವುದೇ ಪರಿಣಮ ಬೀರುವುದಿಲ್ಲ. ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಸಹ ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಅಲ್ಲದೆ, ಆದಾಯ ತೆರಿಗೆ ಇಲಾಖೆ ದಾಳಿಗಳೂ ನಡೆದಿವೆ. ಚುನಾವಣೆಗೆ ಇದಾವುದೂ ವಿಷಯವಲ್ಲ. ಎರಡೂ ಕ್ಷೇತ್ರಗಳನ್ನು ಬಿಜೆಪಿ ಪಡೆದುಕೊಳ್ಳುತ್ತದೆ'' ಎಂದು ಸಚಿವ ಬಿ.ಸಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

Recommended Video

ವಿರಾಟ್ ಎದೆಯಲ್ಲಿ ಎರಡು ನೋವು:ಕಣ್ಣೀರು ಹಾಕಿದ ವಿಡಿಯೋ ವೈರಲ್ | Oneindia Kannada

English summary
By-election: CM Marathon meeting in Davanagere. Leaders of Haveri and Vijayapura districts meet to cm. know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X