Breaking: ಉಪಚುನಾವಣೆಗೆ ದಿನಾಂಕ ನಿಗದಿ, ಇಂದಿನಿಂದಲೇ ನೀತಿ ಸಂಹಿತೆ ಜಾರಿ
ನವದೆಹಲಿ, ಸೆಪ್ಟೆಂಬರ್ 21: ಕಾಂಗ್ರೆಸ್-ಜೆಡಿಎಸ್ ಶಾಸಕರ ಅನರ್ಹತೆಯಿಂದ ತೆರವಾಗಿರುವ ರಾಜ್ಯದ 17 ವಿಧಾನಸಭಾ ಕ್ಷೇತ್ರಗಳಲ್ಲಿ 15 ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ.
ಅಕ್ಟೋಬರ್ 21 ಕ್ಕೆ ಹದಿನೈದು ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಇಂದು ಪ್ರಕಟಿಸಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಒಟ್ಟು ಹದಿನೇಳು ಕ್ಷೇತ್ರಗಳು ಪ್ರಸ್ತುತ ಶಾಸಕರಿಲ್ಲದೆ ಖಾಲಿ ಇವೆ. ಇವುಗಳಲ್ಲಿ ಹದಿನೈದು ಕ್ಷೇತ್ರಕ್ಕೆ ಮಾತ್ರವೇ ಉಪಚುನಾವಣೆ ಘೋಷಣೆ ಆಗಿದ್ದು, ಆರ್.ಆರ್.ನಗರ ಮತ್ತು ಮಸ್ಕಿ ಕ್ಷೇತ್ರಗಳ ಚುನಾವಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಕಾರಣ ಈ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ಇರುವುದಿಲ್ಲ.

ಸೆಪ್ಟೆಂಬರ್ 23 ಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಅಕ್ಟೋಬರ್ 3 ನಾಮಪತ್ರ ಹಿಂಪಡೆಯಲು ಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 24 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹಾಗೂ ಇಂದಿನಿಂದಲೇ ಹದಿನೈದು ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದೆ.












Click it and Unblock the Notifications