ಗ್ರಾ.ಪಂ., ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ: ಮೇ 20ರಂದು ಮತದಾನ

ಬೆಂಗಳೂರು, ಮೇ 16: ಅವಧಿ ಮುಗಿದಿರುವ ಮತ್ತು ಖಾಲಿಯಾಗಿರುವ ಗ್ರಾಮ ಪಂಚಾಯತ್‌ಗಳಿಗೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು, ಮೇ 20ರಂದು ಮತದಾನ ನಡೆಯಲಿದೆ.

ಅವಧಿ ಮುಕ್ತಾಯವಾಗಲಿರುವ ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಚಾಕಲಬ್ಬಿ ಗ್ರಾಮ ಪಂಚಾಯತ್‌ನ 14, ಬೆಂಗಳೂರು ದಕ್ಷಿಣ ತಾಲ್ಲೂಕು ಕಗ್ಗಲೀಪುರ ಗ್ರಾಮ ಪಂಚಾಯತ್‌ನ 38 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಬಾರದೆ ಇರುವ ಕಾರಣ ಚುನಾವಣೆ ನಡೆಯದ ಬೆಂಗಳೂರು ನೆಲಮಂಗಲ ತಾಲ್ಲೂಕು ತ್ಯಾಮಗೊಂಡ್ಲು 21 ಮತ್ತು ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿಯ 32 ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ. ಇದಲ್ಲದೆ ಗ್ರಾಮಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಒಟ್ಟು 209 ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ.

ನಗರ ಸ್ಥಳೀಯ ಸಂಸ್ಥೆ:

ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಶಿರಾ ನಗರಸಭೆಯ 21ನೇ ವಾರ್ಡ್‌ಗೆ ಮತದಾನ ನಡೆಯುತ್ತದೆ. ದಾವಣಗೆರೆ ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 28 ಮತ್ತು 37 ನೇ ವಾರ್ಡ್‌ಗೆ ಮತದಾನ ನಡೆಯುತ್ತದೆ.

By-election for grama panchayat, urban local bodies: Voting on May 20

ಚನ್ನಗಿರಿ ಪುರಸಭೆಯ 16ನೇ ವಾರ್ಡ್, ಬಸವಕಲ್ಯಾಣ ನಗರಸಭೆಯ 25ನೇ ವಾರ್ಡ್, ಆನೇಕಲ್ ಪುರಸಭೆಯ 14, 16, 17ನೇ ವಾರ್ಡ್‌ಗಳಿಗೆ, ಹೊಳೆ ನರಸೀಪುರ ಪುರಸಭೆಯ 3ನೇ ವಾರ್ಡ್, ಜೇವರ್ಗಿ ಪುರಸಭೆಯ 10ನೇ ವಾರ್ಡ್ ಮತ್ತು ಸಂಕೇಶ್ವರ ಪುರಸಭೆಯ 13ನೇ ವಾರ್ಡ್‌ಗೆ ಮತದಾನ ನಡೆಯುತ್ತದೆ.

ವೇತನ ಸಹಿತ ರಜೆ

ಮತದಾನ ನಡೆಯುವ ಪ್ರದೇಶದ ವ್ಯಾಪ್ತಿಯ ಸಾರ್ವತ್ರಿಕ/ ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕ್‌ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು, ಸಹಕಾರ ಸಂಘದ ಸಂಸ್ಥೆಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳಲ್ಲಿನ ಮತ್ತು ಇತರೆ ಎಸ್ಟಾಬ್ಲಿಷ್‌ಮೆಂಟ್‌ಗಳಲ್ಲಿನ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ಮಾಡುತ್ತಿರುವವರಿಗೆ ವೇತನ ಸಹಿತಿ ರಜೆ ಘೋಷಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವವರಿಗೆ ಅನ್ವಯಿಸುವುದಿಲ್ಲ. ಅದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ಮತ ಚಲಾಯಿಸಲು ಅನಯಕೂಲ ಆಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟಿರುವ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+