ಉಪ ಚುನಾವಣೆ : ಜೆಡಿಎಸ್‌ನಿಂದ ವೀಕ್ಷಕರ ನೇಮಕ

ಬೆಂಗಳೂರು, ಅಕ್ಟೋಬರ್ 22 : ಉಪ ಚುನಾವಣೆಗಳಿಗೆ ಜೆಡಿಎಸ್ ಅಧಿಕೃತ ಉಸ್ತುವಾರಿಗಳನ್ನು ನೇಮಕ ಮಾಡಿದೆ. ನವೆಂಬರ್ 3ರಂದು ಮೂರು ಲೋಕಸಭೆ ಮತ್ತು 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದೆ.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸೋಮವಾರ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತಕ್ಷಣವೇ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಸೂಚನೆ ನೀಡಲಾಗಿದೆ.

ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕರಾದ ಕೋನರೆಡ್ಡಿ, ಮಾಜಿ ಶಾಸಕರಾದ ಎಚ್.ಎಸ್.ಶಿವಶಂಕರ್ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದಲ್ಲಿ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಕಾಂಗ್ರೆಸ್‌ಗೆ ಬೆಂಬಲ ನೀಡಿದೆ.

By election Karnataka JDS appoints election in charges

ಬಳ್ಳಾರಿ ಲೋಕಸಭಾ ಉಪ ಚುನಾವಣೆಗೆ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಮತ್ತು ಶಾಸಕರಾದ ರಾಜ ವೆಂಕಟಪ್ಪನಾಯಕ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಕ್ಷೇತ್ರದಲ್ಲಿಯೂ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸದೇ ಕಾಂಗ್ರೆಸ್‌ಗೆ ಬೆಂಬಲ ಘೋಷಣೆ ಮಾಡಿದೆ.

ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ, ಮಂಡ್ಯ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+