• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ಗಿಂತ ನೋಟಾಕ್ಕೇ ಹೆಚ್ಚು ಮತ

|

ಬೆಂಗಳೂರು, ಡಿಸೆಂಬರ್ 10: ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ ಮಾಡಿದೆ. 2018ರಲ್ಲಿ ನಡೆದ ಚುನಾವಣೆಯಲ್ಲಿ 37 ಸ್ಥಾನಗಳನ್ನು ಪಡೆದಿದ್ದ ಜೆಡಿಎಸ್, ಮೂರು ಸ್ಥಾನಗಳನ್ನು ಕಳೆದುಕೊಂಡಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿನ ಬೆಳವಣಿಗೆಯಲ್ಲಿ ರಾಜೀನಾಮೆ ನೀಡಿದ ಜೆಡಿಎಸ್ ಮತ್ತು ಕಾಂಗ್ರೆಸ್‌ನ ಒಟ್ಟು 17 ಶಾಸಕರ ಪೈಕಿ ಜೆಡಿಎಸ್‌ನ ಮೂವರು ಶಾಸಕರಿದ್ದರು. ರಾಜೀನಾಮೆ ಮತ್ತು ಅನರ್ಹತೆಯ ಬೆನ್ನಲ್ಲೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.

ಈಗ ಜೆಡಿಎಸ್ ಆ ಮೂರೂ ಸ್ಥಾನಗಳನ್ನು ಮರಳಿ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ. ಮಹಾಲಕ್ಷ್ಮಿ ಲೇ ಔಟ್‌ನ ಕೆ. ಗೋಪಾಲಯ್ಯ, ಹುಣಸೂರಿನ ಎಚ್ ವಿಶ್ವನಾಥ್ ಮತ್ತು ಕೆಆರ್ ಪೇಟೆಯ ಕೆ.ಸಿ. ನಾರಾಯಣ ಗೌಡ ಸಮ್ಮಿಶ್ರ ಸರ್ಕಾರ ಮತ್ತು ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆದಿದ್ದರು.

ಕೆ.ಆರ್.ಪುರಂನಲ್ಲಿ ಜೆಡಿಎಸ್ಸಿಗೆ ಈ ರೀತಿಯ ಮುಖಭಂಗ ನ್ಯಾಯವೇ?

ಈ ಮೂವರೂ ಶಾಸಕರು ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಅವರಲ್ಲಿ ಹಿರಿಯ ರಾಜಕಾರಣಿ, ಹುಣಸೂರು ಕ್ಷೇತ್ರದ ಅಭ್ಯರ್ಥಿ ಎಚ್. ವಿಶ್ವನಾಥ್ ಮಾತ್ರ ಸೋಲು ಅನುಭವಿಸಿದ್ದಾರೆ. ಜೆಡಿಎಸ್‌ಗೆ ಸಮಾಧಾನ ನೀಡಿರುವ ಸಂಗತಿ ಇದೊಂದೇ. ಆದರೆ ತಮ್ಮ ಭದ್ರಕೋಟೆ ಎಂದೇ ಜೆಡಿಎಸ್ ಭಾವಿಸಿದ್ದ ಮಂಡ್ಯದ ಕೃಷ್ಣರಾಜ ಪೇಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆದ್ದಿರುವುದು ದೊಡ್ಡ ಆಘಾತ ನೀಡಿದೆ. 15 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಿಂತಲೂ 'ನೋಟಾ'ಕ್ಕೇ ಹೆಚ್ಚು ಮತ ಬಿದ್ದಿದೆ.

ಯಲ್ಲಾಪುರ ವಿಧಾನಸಭೆ ಕ್ಷೇತ್ರ

ಯಲ್ಲಾಪುರ ವಿಧಾನಸಭೆ ಕ್ಷೇತ್ರ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಶಿವರಾಂ ಹೆಬ್ಬಾರ್ 31,000ಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಚೈತ್ರಾ ಗೌಡ ಸೇರಿದಂತೆ ಐದು ಮಂದಿ ಠೇವಣಿ ಕಳೆದುಕೊಂಡಿದ್ದಾರೆ. ಚೈತ್ರಾ ಗೌಡ 1,235 ಮತಗಳನ್ನು ಪಡೆದಿದ್ದರು. ಅವರು ಪಡೆದ ಮತಗಳಿಗಿಂತಲೂ ಹೆಚ್ಚಿನ ಮತವನ್ನು ಜನರು 'ನೋಟಾ'ಕ್ಕೆ ನೀಡಿದ್ದಾರೆ. ಇಲ್ಲಿ 1,444 ನೋಟಾ ಮತಗಳು ಚಲಾವಣೆಯಾಗಿವೆ.

ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರ

ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರ

ರಾಣೆಬೆನ್ನೂರಿನಲ್ಲಿ ಕೂಡ ಜೆಡಿಎಸ್ ಮುಖಭಂಗ ಅನುಭವಿಸಿದೆ. ಬಿಜೆಪಿಯ ಅರುಣ್ ಕುಮಾರ್ ಗುತ್ತೂರು 95,408 ಮತಗಳನ್ನು ಪಡೆದಿದ್ದರೆ, ಅವರ ಎದುರಾಳಿ, ಕಾಂಗ್ರೆಸ್‌ನ ಕೆ.ಬಿ. ಕೋಳಿವಾಡ 72,187 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಜೆಡಿಎಸ್‌ನ ಮಲ್ಲಿಕಾರ್ಜುನಪ್ಪ ರುದ್ರಪ್ಪ ಹಲಗೇರಿ 979 ಮತಗಳನ್ನು ಪಡೆದರೆ, ಅದಕ್ಕಿಂತಲೂ ಹೆಚ್ಚು ನೋಟಾ (1,608) ಮತಗಳು ಚಲಾವಣೆಯಾಗಿವೆ.

ಜೆಡಿಎಸ್, ಕಾಂಗ್ರೆಸ್ ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದ 7 ಕ್ಷೇತ್ರಗಳ ಪಟ್ಟಿ

ಕೆಆರ್ ಪುರದಲ್ಲಿ ನೋಟಾವೇ ಬಲ

ಕೆಆರ್ ಪುರದಲ್ಲಿ ನೋಟಾವೇ ಬಲ

ಕೆಆರ್ ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು 1,39,833 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಎಂ. ನಾರಾಯಣಸ್ವಾಮಿ 76,428 ಮತಗಳನ್ನು ಗಳಿಸಿದ್ದರು. ನಂತರದ ಸ್ಥಾನ ನೋಟಾದ್ದು. 5,181 ಮತಗಳನ್ನು ಮತದಾರರು ನೋಟಾಕ್ಕೆ ಹಾಕಿದ್ದಾರೆ. 2,048 ಮಂದಿ ಮಾತ್ರ ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಅವರ ಪರ ಒಲವು ತೋರಿಸಿದ್ದಾರೆ.

ಶಿವಾಜಿನಗರದಲ್ಲಿ ಅಲ್ಪ ಮುನ್ನಡೆ!

ಶಿವಾಜಿನಗರದಲ್ಲಿ ಅಲ್ಪ ಮುನ್ನಡೆ!

ಶಿವಾಜಿನಗರದ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನೋಟಾಕ್ಕಿಂತಲೂ ಕಡಿಮೆ ಮತ ಗಳಿಸುವ ಮುಖಭಂಗದಿಂದ ಸ್ವಲ್ಪದರಲ್ಲಿಯೇ ತಪ್ಪಿಸಿಕೊಂಡಿದ್ದಾರೆ. ಆದರೆ ಅವರಿಗೆ ನೋಟಾಕ್ಕಿಂತ ನೂರು ಮತಗಳನ್ನಷ್ಟೇ ಹೆಚ್ಚು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ತನ್ವೀರ್ ಅಹಮ್ಮದ್ ಉಲ್ಲಾ 1,098 ಮತಗಳನ್ನು ಪಡೆದರೆ, 986 ಮತಗಳು ನೋಟಾಗೆ ಚಲಾವಣೆಯಾಗಿದೆ.

ಕೆಆರ್ ಪೇಟೆ: ಕಳೆದ ಬಾರಿ ಠೇವಣಿ ಕಳೆದುಕೊಂಡಿದ್ದ ಬಿಜೆಪಿ ಕೊಟ್ಟ ಶಾಕ್

ಶರತ್ ಬೆಂಬಲವೇ ದೊಡ್ಡ ಸಾಧನೆ

ಶರತ್ ಬೆಂಬಲವೇ ದೊಡ್ಡ ಸಾಧನೆ

ಇನ್ನು ಕೆಆರ್ ಪೇಟೆ ಮತ್ತು ಯಶವಂತ ಪುರ ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಎರಡನೆಯ ಸ್ಥಾನ ಪಡೆದುಕೊಳ್ಳುವಲ್ಲಿ ಸಫಲವಾಗಿದೆ. ಹೊಸಕೋಟೆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಇಳಿಸದೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರಿಗೆ ಬೆಂಬಲ ನೀಡಿದ್ದ ಜೆಡಿಎಸ್, ಅದನ್ನೇ ದೊಡ್ಡ ಗೆಲುವು ಎಂದು ಸಮಾಧಾನಪಟ್ಟುಕೊಳ್ಳಬೇಕಿದೆ. ಇನ್ನು ಎಂಟು ಕ್ಷೇತ್ರಗಳಲ್ಲಿ ಜೆಡಿಎಸ್ ಠೇವಣಿ ನಷ್ಟ ಅನುಭವಿಸಿದೆ.

English summary
Voters chosed NOTA than JDS as better option in three constituencies in Karnataka by elelctions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X