Breaking news: ವಿಧಾನ ಪರಿಷತ್‌ನ 1 ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ
ಬೆಂಗಳೂರು, ಜುಲೈ 18: ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ನ 1 ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಆಗಸ್ಟ್ 11ರಂದು ಮತದಾನ ನಡೆಯಲಿದೆ.
ಈ ಕುರಿತು ಭಾರತ ಚುನಾವಣೆ ಆಯೋಗ ಸೋಮವಾರ ಪ್ರಕಟಣೆ ಹೊರಡಿಸಿದೆ. ಆಗಸ್ಟ್ 1 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಆಗಸ್ಟ್4 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆಗಸ್ಟ್ 11ರಂದು ಬೆಳಗ್ಗೆ 9 ರಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಏಣಿಕೆ ನಡೆಯಲಿದೆ.

Recommended Video
ಬೆನ್ ಸ್ಟೋಕ್ಸ್ ದಿಢೀರ್ ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ರಿಯಾಕ್ಟ್ ಮಾಡಿದ್ದು ಹೀಗೆ? | *Cricket | OneIndia
ಕೇಂದ್ರದ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದ್ದಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಅದರಿಂದ ತೆರವಾಗಿರುವ ಸ್ಥಾನಕ್ಕೆ ಆಗಸ್ಟ್ 11ರಂದು ಚುನಾವಣೆ ನಡೆಯಲಿದೆ.












Click it and Unblock the Notifications