15 ಕ್ಷೇತ್ರದ ಉಪ ಚುನಾವಣೆ; ಬಿಜೆಪಿಯ ಮಹತ್ವದ ತೀರ್ಮಾನ!
ಬೆಂಗಳೂರು, ಅಕ್ಟೋಬರ್ 14 : 15 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮತ್ತೊಂದು ಕಡೆ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ, ಉಪ ಚುನಾವಣೆ ಬಗ್ಗೆ ಬಿಜೆಪಿ ಮಹತ್ವದ ತೀರ್ಮಾನ ಕೈಗೊಂಡಿದೆ.
Recommended Video
ಅನರ್ಹ ಶಾಸಕರ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿವರವಾಗಿ ವಾದ-ಪ್ರತಿವಾದ ನಡೆದಿದೆ. ಅಕ್ಟೋಬರ್ 22ರಿಂದ ಪುನಃ ಅರ್ಜಿಯ ವಿಚಾರಣೆ ನಡೆಯಲಿದೆ. ಡಿಸೆಂಬರ್ 5ರಂದು ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಕರ್ನಾಟಕದ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಚುನಾವಣಾ ತಯಾರಿಯನ್ನು ಆರಂಭಿಸಿವೆ. ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿದೆ. ಉಪ ಚುನಾವಣೆ ತಯಾರಿ ಬಗ್ಗೆ ಚರ್ಚಿಸಲು ಅಕ್ಟೋಬರ್ 15ರಂದು ಸಭೆ ಕರೆದಿದೆ.
15 ಅನರ್ಹ ಶಾಸಕರು ಇರುವ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಕಳೆದ ಚುನಾವಣೆಯಲ್ಲಿ ಸೋತವರು ನಮಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬಂಡಾಯದ ಬಾವುಟ ಹಾರಿಸಿದ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷಗಿರಿ ಕೊಟ್ಟು ಸಮಾಧಾನ ಪಡಿಸುವ ಪ್ರಯತ್ನವೂ ನಡೆದಿದೆ.

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲ
ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುವ ತನಕ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡದಿರಲು ಬಿಜೆಪಿ ತೀರ್ಮಾನಿಸಿದೆ. ಈ ಮೂಲಕ ಬಂಡಾಯ ಉಂಟಾಗುವುದನ್ನು ತಡೆಯಲು ಪಕ್ಷ ಮುಂದಾಗಿದೆ.

ಟಿಕೆಟ್ ಖಚಿತವಾಗಲಿದೆ
ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದರೆ ಉಪ ಚುನಾವಣೆಯೇ ರದ್ದಾಗಲಿದೆ. ಸ್ಪೀಕರ್ ಆದೇಶ ಎತ್ತಿ ಹಿಡಿದರೆ ಉಪ ಚುನಾವಣೆ ನಡೆಯುವುದು ಅನಿವಾರ್ಯವಾಗಲಿದೆ. ಆಗ ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದೇ?, ಇಲ್ಲವೇ? ಎಂಬುದು ಪ್ರಮುಖ ವಿಚಾರವಾಗಲಿದೆ.

ಅಸಮಾಧಾನಕ್ಕೆ ಕಾರಣವಾದ ಹೇಳಿಕೆ
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದವರು ಅನರ್ಹ ಶಾಸಕರಿಗೆ ಟಿಕೆಟ್ ಭರವಸೆ ನೀಡಿದ್ದಾರೆ. ಇದೇ ವಿಚಾರ ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿದೆ.

ಬಂಡಾಯದ ಬಿಸಿ
15 ಕ್ಷೇತ್ರಗಳ ಪೈಕಿ ಹೊಸಕೋಟೆ, ಹಿರೇಕೆರೂರು, ಕಾಗವಾಡ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಕಲೆದ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿಗಳು ಉಪ ಚುನಾವಣೆ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ.












Click it and Unblock the Notifications