ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ಕ್ಷೇತ್ರದ ಉಪ ಚುನಾವಣೆ; ಬಿಜೆಪಿಯ ಮಹತ್ವದ ತೀರ್ಮಾನ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 14 : 15 ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮತ್ತೊಂದು ಕಡೆ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ, ಉಪ ಚುನಾವಣೆ ಬಗ್ಗೆ ಬಿಜೆಪಿ ಮಹತ್ವದ ತೀರ್ಮಾನ ಕೈಗೊಂಡಿದೆ.

Recommended Video

ರಾಹುಲ್, ಸೋನಿಯಾ ಬಗ್ಗೆ ವಿಶೇಷ ಕಾಳಜಿ ತೋರಿದ ಮೋದಿ. | Narendra Modi

ಅನರ್ಹ ಶಾಸಕರ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿವರವಾಗಿ ವಾದ-ಪ್ರತಿವಾದ ನಡೆದಿದೆ. ಅಕ್ಟೋಬರ್ 22ರಿಂದ ಪುನಃ ಅರ್ಜಿಯ ವಿಚಾರಣೆ ನಡೆಯಲಿದೆ. ಡಿಸೆಂಬರ್ 5ರಂದು ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಉಪ ಚುನಾವಣೆ; ಸಂಭಾವ್ಯ ಅಭ್ಯರ್ಥಿ ಪಟ್ಟಿ ಬದಲಾಯಿಸಿದ ಕಾಂಗ್ರೆಸ್? ಉಪ ಚುನಾವಣೆ; ಸಂಭಾವ್ಯ ಅಭ್ಯರ್ಥಿ ಪಟ್ಟಿ ಬದಲಾಯಿಸಿದ ಕಾಂಗ್ರೆಸ್?

ಕರ್ನಾಟಕದ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ಈಗಾಗಲೇ ಚುನಾವಣಾ ತಯಾರಿಯನ್ನು ಆರಂಭಿಸಿವೆ. ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿದೆ. ಉಪ ಚುನಾವಣೆ ತಯಾರಿ ಬಗ್ಗೆ ಚರ್ಚಿಸಲು ಅಕ್ಟೋಬರ್ 15ರಂದು ಸಭೆ ಕರೆದಿದೆ.

15 ಕ್ಷೇತ್ರದ ಉಪ ಚುನಾವಣೆ; ಸಿದ್ದರಾಮಯ್ಯ ಟಾರ್ಗೆಟ್ 10 ಕ್ಷೇತ್ರ 15 ಕ್ಷೇತ್ರದ ಉಪ ಚುನಾವಣೆ; ಸಿದ್ದರಾಮಯ್ಯ ಟಾರ್ಗೆಟ್ 10 ಕ್ಷೇತ್ರ

15 ಅನರ್ಹ ಶಾಸಕರು ಇರುವ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಕಳೆದ ಚುನಾವಣೆಯಲ್ಲಿ ಸೋತವರು ನಮಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬಂಡಾಯದ ಬಾವುಟ ಹಾರಿಸಿದ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷಗಿರಿ ಕೊಟ್ಟು ಸಮಾಧಾನ ಪಡಿಸುವ ಪ್ರಯತ್ನವೂ ನಡೆದಿದೆ.

ಬಿಎಸ್ವೈ ಹಿಂದೆ ದುಂಬಾಲು ಬಿದ್ದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳು ಬಿಎಸ್ವೈ ಹಿಂದೆ ದುಂಬಾಲು ಬಿದ್ದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳು

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲ

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲ

ಅನರ್ಹ ಶಾಸಕರ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುವ ತನಕ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡದಿರಲು ಬಿಜೆಪಿ ತೀರ್ಮಾನಿಸಿದೆ. ಈ ಮೂಲಕ ಬಂಡಾಯ ಉಂಟಾಗುವುದನ್ನು ತಡೆಯಲು ಪಕ್ಷ ಮುಂದಾಗಿದೆ.

ಟಿಕೆಟ್ ಖಚಿತವಾಗಲಿದೆ

ಟಿಕೆಟ್ ಖಚಿತವಾಗಲಿದೆ

ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದರೆ ಉಪ ಚುನಾವಣೆಯೇ ರದ್ದಾಗಲಿದೆ. ಸ್ಪೀಕರ್ ಆದೇಶ ಎತ್ತಿ ಹಿಡಿದರೆ ಉಪ ಚುನಾವಣೆ ನಡೆಯುವುದು ಅನಿವಾರ್ಯವಾಗಲಿದೆ. ಆಗ ಅನರ್ಹರು ಚುನಾವಣೆಗೆ ಸ್ಪರ್ಧಿಸಬಹುದೇ?, ಇಲ್ಲವೇ? ಎಂಬುದು ಪ್ರಮುಖ ವಿಚಾರವಾಗಲಿದೆ.

ಅಸಮಾಧಾನಕ್ಕೆ ಕಾರಣವಾದ ಹೇಳಿಕೆ

ಅಸಮಾಧಾನಕ್ಕೆ ಕಾರಣವಾದ ಹೇಳಿಕೆ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದವರು ಅನರ್ಹ ಶಾಸಕರಿಗೆ ಟಿಕೆಟ್ ಭರವಸೆ ನೀಡಿದ್ದಾರೆ. ಇದೇ ವಿಚಾರ ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿದೆ.

ಬಂಡಾಯದ ಬಿಸಿ

ಬಂಡಾಯದ ಬಿಸಿ

15 ಕ್ಷೇತ್ರಗಳ ಪೈಕಿ ಹೊಸಕೋಟೆ, ಹಿರೇಕೆರೂರು, ಕಾಗವಾಡ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಕಲೆದ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿಗಳು ಉಪ ಚುನಾವಣೆ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ.

English summary
Karnataka BJP decided not to finalize probable candidates list for by election of 15 assembly seat till supreme court announce verdict on disqualified MLA's petition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X