ಉಪ ಚುನಾವಣೆ ಘೋಷಣೆ; ಸಂಪುಟ ವಿಸ್ತರಣೆ ಮುಂದಕ್ಕೆ?

ಬೆಂಗಳೂರು, ಸೆಪ್ಟೆಂಬರ್ 30: ರಾಜರಾಜೇಶ್ವರಿ ನಗರ, ಶಿರಾ ಕ್ಷೇತ್ರದ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಇದರಿಂದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ವಿಳಂಬವಾಗಲಿದೆ.

"ದೆಹಲಿಗೆ ಹೋಗಿ ಬಂದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದರು. ಮಂಗಳವಾರ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ.

ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ಪಕ್ಷಗಳು ಈಗಾಗಲೇ ಚುನಾವಣಾ ತಯಾರಿಯನ್ನು ಆರಂಭಿಸಿವೆ. ಬಿಜೆಪಿ ಸಹ ಉಪ ಚುನಾವಣೆ ಬಗ್ಗೆ ಗಮನ ಹರಿಸಿದೆ.

ವಿಧಾನಸಭೆ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ಹೈಕಮಾಂಡ್ ನಾಯಕರು ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ವಿಸ್ತರಣೆ ಮುಂದಕ್ಕೆ ಹೋಗಿತ್ತು.

ಬಿಹಾರ ವಿಧಾನಸಭೆ ಚುನಾವಣೆ

ಬಿಹಾರ ವಿಧಾನಸಭೆ ಚುನಾವಣೆ

ಬಿಹಾರ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಇದರಿಂದಾಗಿ ಬಿಜೆಪಿ ಹೈಕಮಾಂಡ್ ನಾಯಕರು ಬ್ಯುಸಿಯಾಗಿದ್ದಾರೆ. ಆದ್ದರಿಂದ, ಯಡಿಯೂರಪ್ಪ ಅವರು ಭೇಟಿ ಮಾಡಲು ಸಮಯಾವಕಾಶ ಸಿಗುವ ಸಾಧ್ಯತೆ ಕಡಿಮೆ ಇದೆ. ಚುನಾವಣೆಗೆಳ ಕಾರಣಕ್ಕೆ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ ಹೋಗಿದೆ.

ಉಪ ಚುನಾವಣೆ ಮೇಲೆ ಕಣ್ಣು

ಉಪ ಚುನಾವಣೆ ಮೇಲೆ ಕಣ್ಣು

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ. ಆದ್ದರಿಂದ, ಉಪ ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಬಿಜೆಪಿ ಪ್ರಯತ್ನ ನಡೆಸುತ್ತದೆ. ಸಂಪುಟ ವಿಸ್ತರಣೆಗಿಂತ ಈಗ ಉಪ ಚುನಾವಣೆ ಗೆಲ್ಲುವುದೇ ಆದ್ಯತೆಯಾಗಿದೆ. ನವೆಂಬರ್‌ನಲ್ಲಿ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ವಿಸ್ತರಣೆ ಮಾಡಬಹುದಾಗಿದೆ.

ಸಂಪುಟಕ್ಕೆ ಸೇರುವ ಆಕಾಂಕ್ಷಿಗಳು

ಸಂಪುಟಕ್ಕೆ ಸೇರುವ ಆಕಾಂಕ್ಷಿಗಳು

ವಿಧಾನ ಪರಿಷತ್ ಸದಸ್ಯರಾದ ಆರ್. ಶಂಕರ್, ಎಂಟಿಬಿ ನಾಗರಾಜ್, ಎಚ್. ವಿಶ್ವನಾಥ್ ಸಂಪುಟ ಸೇರುವ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಮತ್ತೊಂದು ಕಡೆ ಮೂಲಕ ಬಿಜೆಪಿಯ ಹಿರಿಯ ನಾಯಕರು ಸಹ ಸಚಿವರಾಗುವ ಉತ್ಸಾಹದಲ್ಲಿದ್ದಾರೆ. ಯಾರಿಗೆ ಮಂತ್ರಿ ಪದವಿ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ವಿಸ್ತರಣೆ, ಪುನಾರಚನೆ ಗೊಂದಲ

ವಿಸ್ತರಣೆ, ಪುನಾರಚನೆ ಗೊಂದಲ

ಯಡಿಯೂರಪ್ಪ ಸಂಪುಟದಲ್ಲಿ 5 ಸಚಿವ ಸ್ಥಾನಗಳು ಖಾಲಿ ಇವೆ. ಸಂಪುಟ ಪುನಾರಚನೆ ಮಾಡುವುದೋ, ವಿಸ್ತರಣೆ ಮಾಡುವುದೋ? ಎಂಬ ಬಗ್ಗೆ ಇನ್ನೂ ಹೈಕಮಾಂಡ್ ನಾಯಕರು ತೀರ್ಮಾನ ಕೈಗೊಂಡಿಲ್ಲ. ಸಿ. ಟಿ. ರವಿ ರಾಜೀನಾಮೆ ನೀಡಲಿದ್ದಾರೆ? ಎಂಬ ಸುದ್ದಿ ಹಬ್ಬಿದ್ದು, ಮತ್ತೊಂದು ಸ್ಥಾನ ಖಾಲಿ ಆಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+