ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ಕ್ಷೇತ್ರದ ಉಪ ಚುನಾವಣೆ; ಸಿದ್ದರಾಮಯ್ಯ ಟಾರ್ಗೆಟ್ 10 ಕ್ಷೇತ್ರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 13 : ವಿಧಾನಸಭೆ ಅಧಿವೇಶನದ ಬಳಿಕ ಕಾಂಗ್ರೆಸ್ ಉಪ ಚುನಾವಣೆಯತ್ತ ಗಮನ ಹರಿಸಿದೆ. 15 ಕ್ಷೇತ್ರದ ಉಪ ಚುನಾವಣೆ ಡಿಸೆಂಬರ್ 5ರಂದು ನಡೆಯಲಿದ್ದು, ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಸಿದ್ದರಾಮಯ್ಯ ತಂತ್ರ ರೂಪಿಸುತ್ತಿದ್ದಾರೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ಕಾಂಗ್ರೆಸ್ ನಾಯಕರು ಮತ್ತು 15 ಕ್ಷೇತ್ರಗಳ ಉಪ ಚುನಾವಣೆ ವೀಕ್ಷಕರ ಜೊತೆ ಸಭೆ ನಡೆಸಿದರು. ಎಲ್ಲಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಸಿದ್ಧತೆ ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ? ಹೊಸಕೋಟೆ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

"ಕಾಂಗ್ರೆಸ್ ಸೇರಿದ್ದ ಆರ್. ಶಂಕರ್ ಸೇರಿದಂತೆ 14 ಜನ ಪಕ್ಷಕ್ಕೆ ಹಾಗೂ ನಮ್ಮ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ದ್ರೋಹ ಬಗೆದಿದ್ದಾರೆ. ಅಧಿಕಾರದ ವ್ಯಾಮೋಹದಿಂದ ಪಕ್ಷ ತೊರೆದು ಮೋಸ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ಅವರಿಗೆಲ್ಲ ಪಾಠ ಕಲಿಸಬೇಕು" ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಮತ್ತೆ ಉಪ ಚುನಾವಣೆ ಘೋಷಣೆ; ಯಾರು, ಏನು ಹೇಳಿದರು? ಮತ್ತೆ ಉಪ ಚುನಾವಣೆ ಘೋಷಣೆ; ಯಾರು, ಏನು ಹೇಳಿದರು?

"ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿವೆ. ಭಿನ್ನಮತ ಮರೆತು ಒಗ್ಗಟ್ಟಾಗಿ ಎಲ್ಲರೂ ಉಪ ಚುನಾವಣೆ ಎದುರಿಸಿ, 10 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡಿ" ಎಂದು ಸಿದ್ದರಾಮಯ್ಯ ಹೇಳಿದರು.

ಉಪ ಚುನಾವಣೆ ದಿನ ಮರುನಿಗದಿ: ಡಿ. 5ಕ್ಕೆ ಚುನಾವಣೆಉಪ ಚುನಾವಣೆ ದಿನ ಮರುನಿಗದಿ: ಡಿ. 5ಕ್ಕೆ ಚುನಾವಣೆ

ಅಭ್ಯರ್ಥಿ ಆಯ್ಕೆ ಯಾವಾಗ?

ಅಭ್ಯರ್ಥಿ ಆಯ್ಕೆ ಯಾವಾಗ?

ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 15ರಂದು ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ನಾಯಕರು ಸಭೆ ನಡೆಸಲಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಅ.15ರಂದು ಬೆಂಗಳೂರಿಗೆ ಬರಲಿದ್ದಾರೆ. ಅಂದು ಉಪ ಚುನಾವಣೆ ವೀಕ್ಷಕರ ಜೊತೆ ಮತ್ತೊಮ್ಮೆ ಸಭೆ ನಡೆಸುವ ಸಾಧ್ಯತೆ ಇದೆ.

ಸಮಾವೇಶ, ಪ್ರಚಾರ

ಸಮಾವೇಶ, ಪ್ರಚಾರ

ಈಗಾಗಲೇ ಹೊಸಕೋಟೆ ಕ್ಷೇತ್ರದಲ್ಲಿ ಸಮಾವೇಶ ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ ನೀಡಲಾಗಿದೆ. ಹೊಸಕೋಟೆ ಕ್ಷೇತ್ರದಲ್ಲಿ ಪದ್ಮಾವತಿ ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದ್ದು, ಪ್ರಚಾರವನ್ನು ಆರಂಭಿಸಿದ್ದಾರೆ.

10 ಕ್ಷೇತ್ರಗಳು ಯಾವುವು?

10 ಕ್ಷೇತ್ರಗಳು ಯಾವುವು?

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೊಸಕೋಟೆ, ಗೋಕಾಕ್, ಹುಣಸೂರು, ಕೆ. ಆರ್. ಪುರ, ಯಶವಂತಪುರ, ವಿಜಯನಗರ, ಮಹಾಲಕ್ಷ್ಮೀ ಲೇಔಟ್, ಹಿರೇಕೆರೂರು, ಕಾಗವಾಡ ಮತ್ತು ಕೆ. ಆರ್. ಪೇಟೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ.

ಬಿಜೆಪಿಗೆ ಬಂಡಾಯದ ಚಿಂತೆ

ಬಿಜೆಪಿಗೆ ಬಂಡಾಯದ ಚಿಂತೆ

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಲು ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಚುನಾವಣೆಯಲ್ಲಿ ಸೋತ ಬಿಜೆಪಿ ನಾಯಕರು ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದಾರೆ. ಯಡಿಯೂರಪ್ಪ ಬಂಡಾಯ ಶಮನಗೊಳಿಸಲಿದ್ದಾರೆಯೇ? ಕಾದು ನೋಡಬೇಕು.

English summary
15 assembly seat by election on December 5, 2019. Congress targeted 10 seats. Siddaramaiah chaired the meeting with election observers of 15 seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X