ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನರ್ಹ ಶಾಸಕರು ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಬಹುದು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24 : "15 ಕ್ಷೇತ್ರಗಳ ಉಪ ಚುನಾವಣೆಗೆ ಅನರ್ಹ ಶಾಸಕರು ಸೇರಿದಂತೆ ಯಾರು ಬೇಕಾದರೂ ನಾಮಪತ್ರವನ್ನು ಸಲ್ಲಿಸಬಹುದು" ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, "ಅನರ್ಹ ಶಾಸಕರು ಸೇರಿದಂತೆ ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಆದರೆ, ಅದು ಅಂಗೀಕಾರಗೊಳ್ಳುವುದು ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಅವಲಂಬಿತವಾಗಿದೆ" ಎಂದರು.

ಪ್ರವಾಹ, ದಸರಾಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ ಇಲ್ಲಪ್ರವಾಹ, ದಸರಾಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ ಇಲ್ಲ

"ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಸೋಮವಾರ ಆಯೋಗದ ಪರ ವಕೀಲರು ಸ್ವಯಂ ಪ್ರೇರಿತವಾಗಿ ಹಾಜರಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡಲು ಆಯೋಗದ ಆಕ್ಷೇಪಣೆ ಇಲ್ಲ ಎಂದು ಹೇಳಿದ್ದಾರೆ" ಎಂದು ಸಂಜೀವ್ ಕುಮಾರ್ ತಿಳಿಸಿದರು.

ಚುನಾವಣಾ ಆಯೋಗದಿಂದ ಆಘಾತ: ಅನರ್ಹ ಶಾಸಕರ ಮುಂದಿನ ದಾರಿಗಳೇನು?ಚುನಾವಣಾ ಆಯೋಗದಿಂದ ಆಘಾತ: ಅನರ್ಹ ಶಾಸಕರ ಮುಂದಿನ ದಾರಿಗಳೇನು?

By Elections Disqualified MLAs Can File Nomination

"ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಮಾತನಾಡಿದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಅನರ್ಹರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ಮಾಡುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

ದೀಪಾವಳಿಗೂ ಮುನ್ನವೇ ಉಪಚುನಾವಣೆ: 15 ಕ್ಷೇತ್ರಗಳ ಪಟ್ಟಿ ಹೀಗಿದೆದೀಪಾವಳಿಗೂ ಮುನ್ನವೇ ಉಪಚುನಾವಣೆ: 15 ಕ್ಷೇತ್ರಗಳ ಪಟ್ಟಿ ಹೀಗಿದೆ

"ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಶೀಘ್ರವೇ ತೀರ್ಪು ಹೊರಬೀಳಬಹುದು. ಆನಂತರ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ. ಆ ತನಕ ನಾವು ಹೆಚ್ಚು ಚರ್ಚೆ ಮಾಡುವುದು ಬೇಡ. ನಾಮಪತ್ರಗಳನ್ನು ಪರಿಶೀಲನೆ ಮಾಡುವಾಗ ಚುನಾವಣಾಧಿಕಾರಿಗಳು ಎಲ್ಲವನ್ನೂ ಗಮನಿಸುತ್ತಾರೆ" ಎಂದರು.

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಉಪ ಚುನಾವಣೆ ನಡೆಯಲಿದೆ. ಅನರ್ಹ ಶಾಸಕರು ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.

ಚುನಾವಣೆ ನಡೆಯಲಿರುವ ಕ್ಷೇತ್ರ : 1.ಯಲ್ಲಾಪುರ (ಉತ್ತರ ಕನ್ನಡ), 2.ಯಶವಂತಪುರ (ಬೆಂಗಳೂರು), 3.ವಿಜಯನಗರ (ಬಳ್ಳಾರಿ), 4. ಶಿವಾಜಿನಗರ (ಬೆಂಗಳೂರು), 5. ಹೊಸಕೋಟೆ (ಬೆಂಗಳೂರು ಗ್ರಾಮಾಂತರ), 6. ಹುಣಸೂರು (ಮೈಸೂರು), 7.ಕೃಷ್ಣರಾಜಪೇಟೆ (ಮಂಡ್ಯ), 8. ಮಹಾಲಕ್ಷ್ಮೀ ಲೇಔಟ್ (ಬೆಂಗಳೂರು), 9. ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ), 10. ಗೋಕಾಕ್ (ಬೆಳಗಾವಿ), 11. ಅಥಣಿ (ಬೆಳಗಾವಿ), 12. ರಾಣೆಬೆನ್ನೂರು (ಹಾವೇರಿ), 13.ಕಾಗವಾಡ (ಬೆಳಗಾವಿ), 14. ಹಿರೇಕೆರೂರು (ಹಾವೇರಿ), 15. ಕೆ. ಆರ್. ಪುರ (ಬೆಂಗಳೂರು)

English summary
Chief Electoral Officer of Karnataka Sanjiv Kumar said that disqualified MLA's can submit nomination for by elections. But approve of the paper depend of order of Supreme Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X