ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ
ಬೆಂಗಳೂರು, ಸೆಪ್ಟೆಂಬರ್ 24: ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದೆ ಎಂದು ಇಂದು(ಮಂಗಳವಾರ) ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ, ನವೆಂಬರ್ 13 ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಬೈ ಎಲೆಕ್ಷನ್ ನಡೆಯಲಿದೆ ಎಂದು ಘೋಷಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರುಗಳ ರಾಜೀನಾಮೆಯಿಂದ ಮೂರು ವಿಧಾನಸಭಾ ಕ್ಷೇತ್ರಗಳ ಸ್ಥಾನ ತೆರವಾಗಿದ್ವು. ಮೂವರು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದಾರೆ. ಶಾಸಕರ ರಾಜೀನಾಮೆಯಿಂದ ಯಾವುದೇ ಕ್ಷೇತ್ರ ತೆರವಾದ್ರೆ ಮುಂದಿನ 6 ತಿಂಗಳೊಳಗೆ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬೇಕು. ಹೀಗಾಗಿ ಚುನಾವಣಾ ಆಯೋಗ ನವೆಂಬರ್ 13 ರಂದು ಚುನಾವಣೆ ನಡೆಸಲು ದಿನಾಂಕವನ್ನ ಘೋಷಿಸಿದೆ.
ಕರ್ನಾಟಕದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಚುನಾವಣೆ ನಡೆಯಲಿದೆ ಎಂದು ಘೋಷಿಸಿದ್ದು, ಕರ್ನಾಟಕ ಉಪ ಚುನಾವಣೆ ಕುರಿತು ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ.ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.ಇನ್ನೂ ನವೆಂಬರ್ 23 ರಂದು ಮೂರು ಕ್ಷೇತ್ರದ ಘಲಿತಾಂಶ ಪ್ರಕಟವಾಗಲಿದೆ.
ಚನ್ನಪಟ್ಟಣ ಕ್ಷೇತ್ರದ ವಿವರ ಇಲ್ಲಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13 ರಂದು ಚುನಾವಣೆ ನಡೆಯಲಿದೆ. ಚನ್ನಪಟ್ಟಣ ಒಟ್ಟು ಮತದಾರರ ಸಂಖ್ಯೆ 2,31,263 ಇದ್ದು, ಈ ಪೈಕಿ 1,11,577 ಪುರುಷ ಮತದಾರರು ಇದ್ದರೆ, 1,19,678 ಮಹಿಳಾ ಮತದಾರರು ಇದ್ದಾರೆ. 8 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಇದ್ದಾರೆ.
ಇನ್ನೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಗೆಲವು ಸಾಧಿಸಿದ್ದರು. ಕುಮಾರಸ್ವಾಮಿ 96592 ಮತಗಳನ್ನು ಪಡೆದುಕೊಂಡಿದ್ದರು. ಇನ್ನು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಸಿಪಿ ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ 15915 ಮತಗಳ ಅಂತರದಿಂದ ಗೆದ್ದಿದರು. ಇನ್ನು ಬಿಜಿಪಿ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 80677 ಮತ ಪಡೆದಿದ್ದರೆ, ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿದ್ದ ಗಂಗಾಧರ್ ಎಸ್ 15374 ಮತ ಪಡೆದಿದ್ದರು.
ಸಂಡೂರು ವಿಧಾನಸಭಾ ಕ್ಷೇತ್ರದ ವಿವರ
ಸಂಡೂರು ವಿಧಾನಸಭಾ ಕ್ಷೇತ್ರ ಎಸ್ಟಿ ಮೀಸಲು ಕ್ಷೇತ್ರವಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಈ ತುಕರಾಂ ಗೆಲುವು ಸಾಧಿಸಿದ್ದರು. ಇನ್ನು ಈ ಕ್ಷೇತ್ರದಲ್ಲಿ ಒಟ್ಟು 221753 ಮತದಾರರು ಇದ್ದು, ಈ ಪೈಕಿ 111109 ಪುರುಷರು, 110618 ಮಹಿಳಾ ಮತದಾರರು ಇದ್ದಾರೆ.












Click it and Unblock the Notifications