ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ; ಕಾಂಗ್ರೆಸ್‌ಗೆ ಖಡಕ್‌ ಎಚ್ಚರಿಕೆ ಕೊಟ್ಟ ಎಚ್‌ಡಿಕೆ!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 05: "ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್‌ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

ಸೋಮವಾರ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಪಕ್ಷದ ಕುರಿತು ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆಗಳಿಗೆ ತಿರುಗೇಟು ಕೊಟ್ಟಿದ್ದಾರೆ. "ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ" ಎಂದು ಸಿದ್ದರಾಮಯ್ಯ ಭಾನುವಾರ ಹೇಳಿದ್ದರು.

ಉಪ ಚುನಾವಣೆ; ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಎಚ್‌ಡಿಕೆ ಟ್ವೀಟ್ಉಪ ಚುನಾವಣೆ; ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಎಚ್‌ಡಿಕೆ ಟ್ವೀಟ್

"ಕಾಂಗ್ರೆಸ್‌ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಉಪ ಚುನಾವಣೆ ಲೆಕ್ಕಾಚಾರ ಉಲ್ಟಾ ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಉಪ ಚುನಾವಣೆ ಲೆಕ್ಕಾಚಾರ ಉಲ್ಟಾ

"ಶಿರಾದಲ್ಲಿ ಕುಮಾರಸ್ವಾಮಿ ಯಾಕೆ ಕಣ್ಣೀರು ಹಾಕಿದ್ರೊ ನನಗೆ ಗೊತ್ತಾಗಲಿಲ್ಲ. ದೇವೇಗೌಡರ ಕಾಲದಿಂದಲೂ ಈ ನಾಟಕ ನಡೆದುಕೊಂಡೆ ಬಂದಿದೆ. ಜನರು ಇದಕ್ಕೆ ಮರುಳಾಗಬಾರದು. ಜೆಡಿಎಸ್ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಳ್ಳುತ್ತಾರೆ" ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ಉಪ ಚುನಾವಣೆಗೆ ಡಿ. ಕೆ. ರವಿ ಪತ್ನಿ ಸ್ಪರ್ಧೆ; ಗೌರಮ್ಮ ಆಕ್ರೋಶ ಉಪ ಚುನಾವಣೆಗೆ ಡಿ. ಕೆ. ರವಿ ಪತ್ನಿ ಸ್ಪರ್ಧೆ; ಗೌರಮ್ಮ ಆಕ್ರೋಶ

ಅಪ್ಪನಾಣೆಗಳನ್ನು ಸೋಲಿಸಿದ್ದಾರೆ

"2018ರ ಚುನಾವಣೆಯಲ್ಲಿ 'ಮಹಾನ್‌ ನಾಯಕರ' 'ಅಪ್ಪನಾಣೆ' 'ತಿಪ್ಪರಲಾಗ'ದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರಾಜಕೀಯ ಪಕ್ಷವಾಗಿ ಉಳಿದಿದೆಯೇ?

"ಮಿತ್ರಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್‌ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ?" ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಟೀಕೆ

"ಜೆಡಿಎಸ್‌ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್‌ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡಿಎಸ್‌ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್‌ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ" ಎಂದು ಕುಮಾರಸ್ವಾಮಿ ದೂರಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದಿದ್ದು

ಜೆಡಿಎಸ್ ಅಧಿಕಾರಕ್ಕೆ ಬಂದಿದ್ದು

"ಜೆಡಿಎಸ್‌ನವರು ಇನ್ನೊಬ್ಬರ ಹೆಗಲ ಮೇಲೆ ಕುಳಿತುಕೊಂಡು ಅಧಿಕಾರಕ್ಕೆ ಬಂದವರು. ಅವರು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಿಲ್ಲ. ನನ್ನ ಪ್ರಕಾರ ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

English summary
Rajarajeshwari Nagar and Sira assembly seat by election announced. Former CM H. D. Kumaraswamy tweet against Congress leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X