ಉಪ ಚುನಾವಣೆ ಮತ ಎಣಿಕೆ: ನ. 23ರಂದು ಮದ್ಯ ಮಾರಾಟ ನಿಷೇಧ

ಬೆಂಗಳೂರು, ನವೆಂಬರ್ 19: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ನವೆಂಬರ್ 23ರ ಶನಿವಾರ ನಡೆಯಲಿದೆ. ಈ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಮತ ಎಣಿಕೆ ಹಿನ್ನಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿತ್ತು.

ಸಂಡೂರು ಉಪ ಚುನಾವಣೆ ಮತ ಎಣಿಕೆ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದಾರೆ.

By Elections Results Of Three Constituencies Liquor Ban On November 23

ಸಂಡೂರು ವಿಧಾನಸಭೆ ಉಪ ಚುನಾವಣೆಯ ಅಂಗವಾಗಿ ನವೆಂಬರ್ 23ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನವೆಂಬರ್ 22ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಆದೇಶವನ್ನು ಹೊರಡಿಸಿದ್ದಾರೆ.

ಪ್ರತಿಬಂಧಕಾಜ್ಞೆ ಜಾರಿ: ಸಂಡೂರು ಉಪ ಚುನಾವಣೆ ಮತ ಎಣಿಕೆ ದಿನದಂದು ಬಳ್ಳಾರಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶಿಸಲಾಗಿದೆ. ಉಪಚುನಾವಣೆ-2024ರ ಮತ ಎಣಿಕೆ ಶನಿವಾರ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನವೆಂಬರ್ 22ರ ಸಂಜೆ 6 ಗಂಟೆಯಿಂದ ನವೆಂಬರ್ 24ರ ಬೆಳಗ್ಗೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ.

ಷರತ್ತುಗಳು

* ಇಂಕ್ (ಮಸಿ), ನೀರು, ಬೆಂಕಿ ಪೊಟ್ಟಣ, ಲೈಟರ್ ಮತ್ತು ಇತರೆ ಅಪಾಯಕಾರಿ ವಸ್ತುಗಳನ್ನು ತೆಗೆದುಕೊಂಡು ಹೋಗುವುದು. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ.

* ಕಲ್ಲುಗಳನ್ನು, ಕ್ಷಾರಪಧಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.

* ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

* ಕಾರು, ಮೋಟಾರು ಬೈಕ್ ಮತ್ತು ಇತರೆ ವಾಹನಗಳಲ್ಲಿ ರ‍್ಯಾಲಿ ಆಯೋಜಿಸುವುದು. ವಿಜಯೋತ್ಸವಗಳನ್ನು ಆಚರಿಸುವುದು ಹಾಗೂ ಭೋಜನ ಕೂಟಗಳನ್ನು ಏರ್ಪಡಿಸುವುದು ನಿಷೇಧಿಸಲಾಗಿದೆ.

* 5ಕ್ಕಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಕುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿಯ ಪ್ರದರ್ಶನ ಮಾಡುವುದು ನಿಷೇಧಿಸಲಾಗಿದೆ.

ಆದರೆ ಈ ಆದೇಶ ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+