Karnataka By-Election: ಕರ್ನಾಟಕದ ಈ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರವೇ ಬೈ ಎಲೆಕ್ಷನ್!
ಬೆಂಗಳೂರು, ಡಿಸೆಂಬರ್ 16: ರಾಜ್ಯದಲ್ಲಿ ಸದ್ಯ ಚಳಿಗಾಲದ ಅಧಿವೇಶನದ ಸಮಯದಲ್ಲೇ ಕೈ ಪಾಳಯದಲ್ಲಿ ಪವರ್ ಶೇರಿಂಗ್ ಹಾಗೂ ಕುರ್ಚಿ ಕಾದಾಟ ಮತ್ತೆ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣ ಗುದ್ದಾಟ ಜೋರಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬಣದ ನಡುವೆ ಸಿಎಂ ಪಟ್ಟಕ್ಕಾಗಿ ಜಟಾಪಟಿ ನಡೆಯುತ್ತಿರುವ ಹೊತ್ತಲಿ ಕಾಂಗ್ರೆಸ್ ಹೈಕಮಾಂಡ್ ಮುಂಬರುವ ಸ್ಥಳೀಯ ಸಂಸ್ಥೆಗಳಿಗೆ ಸಜ್ಜಾಗುವಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆ ಹಾಗೂ ಕಳೆದ ಉಪ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವು ಮತ್ತು ಬಿಜೆಪಿಯ ಒಡಕಿನ ಲಾಭ ಪಡೆಯುವುದಕ್ಕೆ ಚಿಂತಿಸಿರುವ ಕಾಂಗ್ರೆಸ್ ಹೈಕಮಾಂಡ್ ಮುಂಬರುವ ದಿನಗಳಲ್ಲಿ (ಮಾರ್ಚ್, ಏಪ್ರಿಲ್ ) ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದೆ. ಅಲ್ಲದೇ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಯಾವುದೇ ಬದಲಾವಣೆ ಸದ್ಯಕ್ಕಿಲ್ಲಎಂಬುದನ್ನ ಕಾಂಗ್ರೆಸ್ ಹೈಕಮಾಂಡ್ ಖಚಿತಪಡಿಸಿದೆ.

ಇನ್ನೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹು ದಿನಗಳಿಂದ ನನೆಗುದಿಗೆ ಬಿದ್ದಿವೆ. ಈ ನಿಟ್ಟಿನಲ್ಲಿ ಸ್ಥಳೀಯ ಚುನಾವಣೆಗೆ ಸಜ್ಜಾಗುವಂತೆ ಸೂಚನೆ ನೀಡಿದ್ದು, ಚುನಾವಣೆಯವರೆಗೆ ಪಕ್ಷ ಮತ್ತು ಸರಕಾರದಲ್ಲಿ ಯಥಾಸ್ಥಿತಿ ಮುಂದುವರಿಕೆಗೆ ಸಲಹೆ ನೀಡಿದೆ. ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡುವೆ ಕರ್ನಾಟದಲ್ಲಿ ಮತ್ತೆ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆ ನಡೆಲಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ಅವರು ಕಳೆದ ನಂವೆಬರ್ ತಿಂಗಳಲ್ಲಿ ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇನ್ನೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ತೆರುವಾಗಿರುವ ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗ ಚುನಾವಣೆಯನ್ನು ನಡೆಸಲಿದೆ.
ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಅವರು ನವೆಂಬರ್ 3, 2025ರಂದು ನಿಧರಾಗಿದ್ದರು, ಹಾಗೂ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪನವರರು ಡಿಸೆಂಬರ್ 14 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಉಪ ಚುನಾವಣೆ ಬಗ್ಗೆ ಶೀಘ್ರದಲ್ಲಿ ಗೆಜೆಟ್ ಅನ್ನು ಭಾರತ ಚುನಾವಣಾ ಆಯೋಗ ಹೊರಡಿಸಲಿದೆ ಎನ್ನಲಾಗಿದೆ.
ಇನ್ನೂ ಶಾಸಕರು ಅಥವಾ ಸಂಸರು ನಿಧನರಾಗಿದ್ದ ಸಮಯದಲ್ಲಿ ಅಥವಾ ರಾಜೀನಾಮೆ, ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆ ಅಥವಾ ಇತರ ಕಾರಣಗಳಿಂದಾಗಿ ಶಾಸಕರು/ಸಂಸದರನ್ನು ಅನರ್ಹಗೊಳಿಸಿದಾಗ. ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದೆ ಎಂದು ಸಾಬೀತಾದಾಗ, ಆ ಚುನಾವಣೆಯನ್ನು ರದ್ದುಪಡಿಸಿ ಮತ್ತೆ ಚುನಾವಣೆ ನಡೆಸಲಾಗುತ್ತದೆ. ಇದೀಗ ಬಾಗಲಕೋಟೆ ಹಾಗೂ ದಾವಣಗೆರೆ ಕ್ಷೇತ್ರದ ಶಾಸಕರು ನಿಧನರಾದ ಹಿನ್ನೆಲೆ ಈ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುತ್ತದೆ.
ನ್ನೂ ಸಾರ್ವತ್ರಿಕ ಚುನಾವಣೆಗೆ ಎರಡೂವರರೆ ವರ್ಷ ಹಾಲಿ ವಿಧಾನಸಭೆ ಚಾಲ್ತಿಯಲ್ಲಿರುವ ಕಾರಣಕ್ಕೆ ಈಗ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಮರು ಚುನಾವಣೆ ನಡೆಸಬೇಕಾಗಿದೆ. ಈ ಎರಡು ಕ್ಷೇತ್ರಗಳಿಗೆ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಉಪಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications