ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಉಳಿವಿಗೆ ಕಾಂಗ್ರೆಸ್ ಅನ್ನು ಕಿತ್ತೊಗೆಯಬೇಕು: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಜುಲೈ 24: ನಮ್ಮ ರಾಜ್ಯ ಉಳಿಯಬೇಕಾದರೆ ತಮ್ಮದೇ ಪಕ್ಷವನ್ನು ಕಿತ್ತೊಗೆಯಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಾಯಿತಪ್ಪಿನಿಂದ ನುಡಿದ ಪ್ರಸಂಗ ನಡೆದಿದೆ.

ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರಗಳು ಹಾಗೂ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಕ್ರಮಗಳು, ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹ ಮುಂತಾದ ಉದ್ದೇಶಗಳೊಂದಿಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಶನಿವಾರ (ಜುಲೈ 24) ಸಭೆ ನಡೆಸಲಾಗಿತ್ತು.

ದಲಿತರನ್ನು ರಾಷ್ಟ್ರಪತಿ ಮಾಡಿದ್ದೇವೆ; ಸಿದ್ದರಾಮಯ್ಯಗೆ ಕಟೀಲ್ ತಿರುಗೇಟುದಲಿತರನ್ನು ರಾಷ್ಟ್ರಪತಿ ಮಾಡಿದ್ದೇವೆ; ಸಿದ್ದರಾಮಯ್ಯಗೆ ಕಟೀಲ್ ತಿರುಗೇಟು

ಆ ಸಭೆಯಲ್ಲಿ ಮಾತನಾಡುತ್ತಿದ್ದ ಸಿದ್ದರಾಮಯ್ಯ, "ಮಾತೆದಿದ್ದರೆ ಕೊರೊನಾ ಎಂದು ನೆಪ ಹೇಳುತ್ತಿದ್ದಾರೆ. ಕೊರೊನಾಗೆ ಅಬ್ಬಾಬ್ಬಾ ಎಂದರೆ ಐದಾರು ಸಾವಿರ ಕೋಟಿ ರೂಪಾಯಿ ಖರ್ಚು ಆಗಿರಬಹುದು. ಅಭಿವೃದ್ದಿ ಕೆಲಸಗಳು ನಡೆಯುತ್ತಲೇ ಇಲ್ಲ"ಎಂದು ಅವರು ಹೇಳಿದರು.

By Mistakenly Opposition Party Leader Siddaramaiah Said, We Have To Remove Congress

"ಎರಡು ವರ್ಷದಿಂದ ಒಂದು ಮನೆ ಕಟ್ಟಿಸಲು ಇವರಿಂದ ಆಗಲಿಲ್ಲ. ಅರ್ಧಬಂರ್ಧ ಯೋಜನೆಗಳಿಗೆ ಪೂರ್ಣಗೊಳಿಸಲು ಅವರಿಗೆ ದುಡ್ಡು ನೀಡಲು ಆಗಲಿಲ್ಲ. ಸುಳ್ಳು ಭರವಸೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ"ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದರು.

"ಹಾಗಾಗಿ, ರಾಜ್ಯವನ್ನು ಉಳಿಸಬೇಕಾದರೆ, ಈ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕಾಗಿದೆ. ನಾವು ಅಧಿಕಾರಕ್ಕೆ ಬರುವುದು ಮುಖ್ಯವಲ್ಲ"ಎಂದು ಸಿದ್ದರಾಮಯ್ಯ ಹೇಳಿದರು. ಆಗ ಪಕ್ಕದಲ್ಲೇ ಇದ್ದ, ಎಸ್.ಆರ್.ಪಾಟೀಲ್ ತಪ್ಪಾಗಿರುವುದನ್ನು ಮೆಲ್ಲನೆ ಹೇಳಿದ ನಂತರ, ಕಾಂಗ್ರೆಸ್ ಪಕ್ಷವನ್ನಲ್ಲ, ಬಿಜೆಪಿಯನ್ನು ಎಂದು ಹೇಳಿದರು.

Recommended Video

Vehicles floating? ಲಕ್ಷ ಲಕ್ಷ ಬೆಲೆಬಾಳುವ ಕಾರ್ ಪರಿಸ್ಥಿತಿ ನೋಡಿ!! | Oneindia Kannada

'ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಯಾವಾಗ ಮಾಡಬೇಕು ಎಂದು ನಿರ್ಧರಿಸುವುದು ಚುನಾವಣಾ ಆಯೋಗವೇ ಹೊರತು ರಾಜ್ಯ ಸರ್ಕಾರವಲ್ಲ. ಮೀಸಲಾತಿ ಪಟ್ಟಿ ಸಿದ್ಧಪಡಿಸಿದ ನಂತರ ದಿನಾಂಕ ಘೋಷಣೆ ಮಾಡಲಾಗುತ್ತದೆ. ಹಾಗಾಗಿ ಡಿಸೆಂಬರ್ ಒಳಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ನಡೆಯುವ ನಿರೀಕ್ಷೆಯಿದೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
By Mistakenly Opposition Party Leader Siddaramaiah Said, We Have To Remove Congress. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X