ವಿಧಾನಸಭಾ ಉಪಚುನಾವಣೆ ಬಿಸಿ, ಸಂಪುಟ ವಿಸ್ತರಣೆಗೆ ಕಸಿವಿಸಿ

Recommended Video

      ಸಚಿವೆ ಜಾಯಮಾಲರನ್ನ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು | Oneindia Kannada

      ಬೆಂಗಳೂರು, ಅ.3: ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ನಿರೀಕ್ಷೆ ಇದೆ. ಒಂದೊಮ್ಮೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅ.10ರೊಳಗೆ ಘೋಷಣೆಯಾದರೆ ಸಚಿವ ಸಂಪುಟ ವಿಸ್ತರಣೆ ಮುಂದೂಡುವ ಸಾಧ್ಯತೆ ಇದೆ.

      ಅಕ್ಟೋಬರ್ 10ರೊಳಗೆ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುವ ಕುತೂಹಲ ಎಲ್ಲರಲ್ಲಿತ್ತು, ಇದೀಗ ಉಪ ಚುನಾವಣೆ ದಿನಾಂಕ ಘೋಷಣೆಯಾದರೆ ಸಂಪುಟ ವಿಸ್ತರಣೆ ಮುಂದೂಡಲಾಗುತ್ತದೆ.

      ಈಗಾಗಲೇ ಮೂರ್ನಾಲ್ಕು ಬಾರಿ ಹಲವಾರು ಕಾರಣಗಳನ್ನು ಹೇಳಿಕೊಂಡು ಸಂಪುಟ ವಿಸ್ತರಣೆಯನ್ನು ಮುಂದೂಡಲಾಗುತ್ತಿತ್ತು, ಇದೀಗ ಉಪ ಚುನಾವಣೆ ನೆಪ ಹೇಳಿ ಮುಂದೂಡುವ ಸಾಧ್ಯತೆಗಳು ಗೋಚರಿಸುತ್ತಿವೆ. ಸಂಪುಟ ವಿಸ್ತರಣೆ ಕಸರತ್ತಿನಿಂದ ತಪ್ಪಿಸಿಕೊಳ್ಳುವ ಲೆಕ್ಕಚಾರವೂ ಕಾಂಗ್ರೆಸ್‌ನಲ್ಲಿದೆ ಎಂದು ಹೇಳಲಾಗುತ್ತಿದೆ.

      By poll may hurdles state cabinet expansion

      ಈಗಾಗಲೇ ಸಂಪುಟಕ್ಕೆ ಸೇರಲು ಕಾಂಗ್ರೆಸ್ ಶಾಸಕರು ಲಾಬಿ ನಡೆಸುತ್ತಿದ್ದಾರೆ. ಕೆಲವು ಸಚಿವರರನ್ನು ಕೈಬಿಟ್ಟು ಹೊಸಬರ ಸೇರ್ಪಡೆಗೆ ಕಾಂಗ್ರೆಸ್ ಚಿಂತನೆ ಮಾಡುತ್ತಿದೆ. ಸಚಿವ ಸ್ಥಾನ ಸಿಗದವರು ಬಂಡಾಯವೇಳುವ ಭಯವೂ ಕಾಂಗ್ರೆಸ್ ಹೈಕಮಾಂಡ್ ನ್ನು ಕಾಡುತ್ತಿದೆ.

      ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ನಡೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು, ಬಳಿಕ ರಾಮನಗರ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜಿನಾಮೆ ನೀಡಿದ್ದರು.

      ಇನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಿದ್ದು ನ್ಯಾಮಗೌಡ ಅವರು, ಮೇ 28ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜಮಖಂಡಿ ಕ್ಷೇತ್ರ ತೆರವಾಗಿತ್ತು. ಇದೀಗ ಈ ಎರಡೂ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+