ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭಾ ಉಪಚುನಾವಣೆ ಬಿಸಿ, ಸಂಪುಟ ವಿಸ್ತರಣೆಗೆ ಕಸಿವಿಸಿ

|
Google Oneindia Kannada News

Recommended Video

ಸಚಿವೆ ಜಾಯಮಾಲರನ್ನ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು | Oneindia Kannada

ಬೆಂಗಳೂರು, ಅ.3: ಜಮಖಂಡಿ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ನಿರೀಕ್ಷೆ ಇದೆ. ಒಂದೊಮ್ಮೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅ.10ರೊಳಗೆ ಘೋಷಣೆಯಾದರೆ ಸಚಿವ ಸಂಪುಟ ವಿಸ್ತರಣೆ ಮುಂದೂಡುವ ಸಾಧ್ಯತೆ ಇದೆ.

ಅಕ್ಟೋಬರ್ 10ರೊಳಗೆ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುವ ಕುತೂಹಲ ಎಲ್ಲರಲ್ಲಿತ್ತು, ಇದೀಗ ಉಪ ಚುನಾವಣೆ ದಿನಾಂಕ ಘೋಷಣೆಯಾದರೆ ಸಂಪುಟ ವಿಸ್ತರಣೆ ಮುಂದೂಡಲಾಗುತ್ತದೆ.

ರಾಮನಗರ, ಜಮಖಂಡಿ ಉಪ ಚುನಾವಣೆ ಸಿದ್ಧತೆಗೆ ಸಿಇಸಿ ಸೂಚನೆ ರಾಮನಗರ, ಜಮಖಂಡಿ ಉಪ ಚುನಾವಣೆ ಸಿದ್ಧತೆಗೆ ಸಿಇಸಿ ಸೂಚನೆ

ಈಗಾಗಲೇ ಮೂರ್ನಾಲ್ಕು ಬಾರಿ ಹಲವಾರು ಕಾರಣಗಳನ್ನು ಹೇಳಿಕೊಂಡು ಸಂಪುಟ ವಿಸ್ತರಣೆಯನ್ನು ಮುಂದೂಡಲಾಗುತ್ತಿತ್ತು, ಇದೀಗ ಉಪ ಚುನಾವಣೆ ನೆಪ ಹೇಳಿ ಮುಂದೂಡುವ ಸಾಧ್ಯತೆಗಳು ಗೋಚರಿಸುತ್ತಿವೆ. ಸಂಪುಟ ವಿಸ್ತರಣೆ ಕಸರತ್ತಿನಿಂದ ತಪ್ಪಿಸಿಕೊಳ್ಳುವ ಲೆಕ್ಕಚಾರವೂ ಕಾಂಗ್ರೆಸ್‌ನಲ್ಲಿದೆ ಎಂದು ಹೇಳಲಾಗುತ್ತಿದೆ.

By poll may hurdles state cabinet expansion

ಈಗಾಗಲೇ ಸಂಪುಟಕ್ಕೆ ಸೇರಲು ಕಾಂಗ್ರೆಸ್ ಶಾಸಕರು ಲಾಬಿ ನಡೆಸುತ್ತಿದ್ದಾರೆ. ಕೆಲವು ಸಚಿವರರನ್ನು ಕೈಬಿಟ್ಟು ಹೊಸಬರ ಸೇರ್ಪಡೆಗೆ ಕಾಂಗ್ರೆಸ್ ಚಿಂತನೆ ಮಾಡುತ್ತಿದೆ. ಸಚಿವ ಸ್ಥಾನ ಸಿಗದವರು ಬಂಡಾಯವೇಳುವ ಭಯವೂ ಕಾಂಗ್ರೆಸ್ ಹೈಕಮಾಂಡ್ ನ್ನು ಕಾಡುತ್ತಿದೆ.

ದೇವೇಗೌಡರಿಂದ ಸಿಕ್ತು ಗ್ರೀನ್ ಸಿಗ್ನಲ್, ಅ. 12ರೊಳಗೆ ಸಂಪುಟ ವಿಸ್ತರಣೆ ದೇವೇಗೌಡರಿಂದ ಸಿಕ್ತು ಗ್ರೀನ್ ಸಿಗ್ನಲ್, ಅ. 12ರೊಳಗೆ ಸಂಪುಟ ವಿಸ್ತರಣೆ

ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ನಡೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿದ್ದರು, ಬಳಿಕ ರಾಮನಗರ ಕ್ಷೇತ್ರಕ್ಕೆ ಕುಮಾರಸ್ವಾಮಿ ರಾಜಿನಾಮೆ ನೀಡಿದ್ದರು.

ಸಂಪುಟ ವಿಸ್ತರಣೆ ಜೊತೆ ಹಲವು ಸಚಿವರ ಖಾತೆ ಬದಲಾವಣೆ ಸಂಪುಟ ವಿಸ್ತರಣೆ ಜೊತೆ ಹಲವು ಸಚಿವರ ಖಾತೆ ಬದಲಾವಣೆ

ಇನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಿದ್ದು ನ್ಯಾಮಗೌಡ ಅವರು, ಮೇ 28ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜಮಖಂಡಿ ಕ್ಷೇತ್ರ ತೆರವಾಗಿತ್ತು. ಇದೀಗ ಈ ಎರಡೂ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

English summary
As by election for Ramanagar and Jamakhandi assembly constituencies will be declared soon, state cabinet expansion may be delayed up to Diwali festival, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X