ಉಪ ಚುನಾವಣೆ ಸೋಲು : ಯಡಿಯೂರಪ್ಪ ನಾಯಕತ್ವ ಬದಲಾವಣೆ ಇಲ್ಲ
Recommended Video

ಬೆಂಗಳೂರು, ನವೆಂಬರ್ 08 : ಕರ್ನಾಟಕ ವಿಧಾನಸಭೆ ಚುನಾವಣೆ 2018, ಐದು ಕ್ಷೇತ್ರಗಳ ಉಪ ಚುನಾವಣೆ ಮುಖಭಂಗದ ನಂತರ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮಾತು ಕೇಳಿಬರಲಾರಂಭಿಸಿದೆ. ಆದರೆ, ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕ ಯಾರು? ಎಂದರೆ, ಯಾರೂ ಇಲ್ಲ ಎಂದೇ ಹೇಳಬೇಕು.
2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20 + ಸ್ಥಾನಗಳಲ್ಲಿ ಜಯಗಳಿಸಬೇಕು ಎಂಬುದು ಹೈಕಮಾಂಡ್ ನೀಡಿರುವ ಟಾರ್ಗೆಟ್. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಪಡೆಯಬೇಕಾದರೆ ಕಾರ್ಯತಂತ್ರ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಗುಂಡ್ಲುಪೇಟೆ, ನಂಜನಗೂಡು ಉಪ ಚುನಾವಣೆ, ಕರ್ನಾಟಕ ವಿಧಾನಸಭೆ ಚುನಾವಣೆ 2018, ಜಯನಗರ ಮತ್ತು ರಾಜರಾಜೇಶ್ವರಿ ನಗರ ಚುನಾವಣೆ, ಐದು ಕ್ಷೇತ್ರಗಳ ಉಪ ಚುನಾವಣೆ ಹೀಗೆ ಬಿಜೆಪಿಗೆ ಪದೇ ಪದೇ ಹಿನ್ನಡೆಯಾಗಿದೆ.
ಬಿಜೆಪಿ ನಾಯಕರು ತಮ್ಮ ತಪ್ಪುಗಳಿಂದ ಪಾಠ ಕಲಿತಂತೆ ಕಾಣುತ್ತಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತಯೂ ಬಿಜೆಪಿ ಮುಂದಿದೆ. ಲೋಕಸಭೆ ಚುನಾವಣೆ ಎದುರಾಗಿರುವುದರಿಂದ ನಾಯಕತ್ವ ಬದಲಾವಣೆ ದೂರದ ಮಾತಾಗಿದೆ.....

ತಪ್ಪು ತಿದ್ದಿಕೊಳ್ಳುವ ಅವಕಾಶವಿದೆ
ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವ ಪ್ರಯತ್ನ ವಿಫಲವಾಗಿದೆ. ಈಗ ಉಪ ಚುನಾವಣೆಯಲ್ಲಿ ಜಮಖಂಡಿ ಮತ್ತು ಬಳ್ಳಾರಿಯಲ್ಲಿ ಸೋಲಾಗಿದೆ. 2019ರ ಲೋಕಸಭಾ ಚುನಾವಣೆಯೊಳಗೆ ಬಿಜೆಪಿ ತನ್ನ ತಪ್ಪುಗಳನ್ನು ತಿದ್ದಿಕೊಂಡು ಮುಂದೆ ಸಾಗಿದರೆ ಹೆಚ್ಚಿನ ಸ್ಥಾನಗಳನ್ನುಗಳಿಸಬಹುದಾಗಿದೆ.

ನಾಯಕತ್ವ ಬದಲಾವಣೆ ಇಲ್ಲ
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಬಗ್ಗೆ ಚರ್ಚೆ ನಡೆಯಬಹುದು. ಆದರೆ, ಯಡಿಯೂರಪ್ಪ ಅವರಷ್ಟು ಪ್ರಭಾವ ಹೊಂದಿರುವ ನಾಯಕರು ಯಾರೂ ಇಲ್ಲ. ಆದ್ದರಿಂದ, ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ. ಯಡಿಯೂರಪ್ಪ ಅವರನ್ನು ಉಳಿಸಿಕೊಳ್ಳುವ ಜೊತೆಗೆ ಹೊಸ ನಾಯಕರನ್ನು ರೂಪಿಸುವ ಜವಾಬ್ದಾರಿಯೂ ಪಕ್ಷದ ಮೇಲಿದೆ.

ವಿಫಲವಾದ ಅಸ್ತ್ರ
2018ರ ವಿಧಾನಸಭೆ ಚುನಾವಣೆ ಸಮಯದಿಂದ ಬಿಜೆಪಿ ಬಿ.ಶ್ರೀರಾಮುಲು ಅವರನ್ನು ಪರ್ಯಾಯ ನಾಯಕ ಎಂದು ಬಿಂಬಿಸಲು ಪ್ರಯತ್ನ ನಡೆಸಿದೆ. ಆದರೆ, ಈ ಪ್ರಯತ್ನ ವಿಫಲವೂ ಆಗಿದೆ. ಈಗ ಬಳ್ಳಾರಿ ಉಪ ಚುನಾವಣೆ ಬಳಿಕ ಶ್ರೀರಾಮುಲು ಅವರ ಪ್ರಭಾವ ಮತ್ತಷ್ಟು ಕಡಿಮೆ ಆಗಿದೆ. ಆದ್ದರಿಂದ, ಬಿಜೆಪಿ ನಾಯಕತ್ವ ಬದಲಾವಣೆಗೆ ಸದ್ಯಕ್ಕೆ ಕೈ ಹಾಕುವುದಿಲ್ಲ.

ಲೋಕಸಭೆ ಚುನಾವಣೆ
2019ರ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಬೇಕು ಎಂದರೆ ಯಡಿಯೂರಪ್ಪ ಅನಿವಾರ್ಯ. ಯಡಿಯೂರಪ್ಪ ಬದಲಾವಣೆಯಾದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಬಿಜೆಪಿಯನ್ನು ಕಟ್ಟಿ ಹಾಕುವುದು ಸುಲಭವಾಗಲಿದೆ. ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿದ್ದೇವೆ ಎಂದು ಮೈತ್ರಿ ಪಕ್ಷಗಳು ಘೋಷಣೆ ಮಾಡಿವೆ.
ಆತ್ಮಾವಲೋಕನದ ಕಾಲ
5 ಕ್ಷೇತ್ರಗಳ ಉಪ ಚುನಾವಣೆಯ ಹಿನ್ನಡೆ, ಮುಂದಿನ ಚುನಾವಣೆ ಬಗ್ಗೆ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಬರೆದಿದದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications